Home Articles posted by v4team (Page 261)

ವಿಟ್ಲ : ಅಕ್ರಮ ಗೋವು ಸಾಗಾಟ, ರಕ್ಷಣೆ

ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಕಾರ್ಯಾಚರಣೆ ನಡೆಸಿ ಅಕ್ರಮ ಗೋ ಸಾಗಾಟ ಮಾಡುತ್ತಿದ್ದ ವಾಹನವನ್ನು ಪೊಲೀಸರಿಗೊಪ್ಪಿಸಿ ಎರಡು ಜಾನುವಾರುಗಳನ್ನು ರಕ್ಷಣೆ ಮಾಡಿದ ಘಟನೆ ವಿಟ್ಲ ಸಮೀಪದ ಸಾಲೆತ್ತೂರು ಎಂಬಲ್ಲಿ ನಡೆದಿದೆ. ಈ ಬಗ್ಗೆ ತಿಳಿದ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಪಿಕಪ್ ವಾಹನವನ್ನು ತಡೆದು ಪೊಲೀಸರಿಗೊಪ್ಪಿಸಿದ್ದಾರೆ ಎಂದು ತಿಳಿದು ಬಂದಿದೆ.

ಉಡುಪಿ: ಮಾಜಿ ಶಾಸಕ ಯು.ಆರ್ ಸಭಾಪತಿ ನಿಧನ

ಮಾಜಿ ಶಾಸಕ, ಕಾಂಗ್ರೆಸ್ ಮುಖಂಡ ಯು.ಆರ್. ಸಭಾಪತಿ ಅಲ್ಪಕಾಲದ ಅಸೌಖ್ಯದಿಂದ ಇಂದು ಬೆಳಗ್ಗೆ ನಿಧನರಾದರು. 1987ರಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪರಿಷತ್ ನ ಉದ್ಯಾವರ ಕ್ಷೇತ್ರದ ಸದಸ್ಯರಾಗಿದ್ದ ಇವರು, ಪರಿಷತ್ ನ ಶಿಕ್ಷಣ ಸ್ಥಾಯಿ ಸಮಿತಿಯ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದರು. ಅದೇ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಉತ್ತರ ವಿಭಾಗದ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. 1989ರಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಉಡುಪಿ ಕ್ಷೇತ್ರದಿಂದ ಟಿಕೆಟ್

ಉಳ್ಳಾಲ : ಓಮ್ನಿ ಅಪಘಾತ: ವೃದ್ಧೆ ಸಾವು, ಮೂವರಿಗೆ ಗಂಭೀರ ಗಾಯ

ಉಳ್ಳಾಲ:ಹೆದ್ದಾರಿ ಬದಿಯ ಕಬ್ಬಿಣದ ಸಲಾಕೆಯ ತಡೆಬೇಲಿಗೆ ಓಮ್ನಿ‌ ಕಾರು ಢಿಕ್ಕಿ ಹೊಡೆದ ಪರಿಣಾಮ 85ರ ವೃದ್ಧೆಯೋರ್ವರ ದೇಹ ಛಿದ್ರಗೊಂಡು ಸಾವನ್ನಪ್ಪಿದ ಘಟನೆ ರಾ.ಹೆ 66 ರ ಉಚ್ಚಿಲ ಎಂಬಲ್ಲಿ ಇಂದು ಮುಂಜಾನೆ ನಸುಕಿನ ಜಾವ ಸಂಭವಿಸಿದೆ. ಕಾಸರಗೋಡು ಜಿಲ್ಲೆಯ ಮಂಜೇಶ್ವರ ,ಕುಂಜತ್ತೂರು ನಿವಾಸಿ ಬಿ.ಫಾತಿಮಾ(85)ಮೃತ ಪಟ್ಟ ವೃದ್ಧೆ.ಫಾತಿಮಾ ಅವರು ತನ್ನ ಮಗ ಮೂಸ(50) ಮೊಮ್ಮಗ ಮಸ್ತಫಾ(24) ಜೊತೆ ನಿನ್ನೆ ಮಂಗಳೂರಿನ ಅಡ್ಡೂರಿಗೆ ತೆರಳಿ ಸಂಬಂಧಿಕರೋರ್ವರ

ಉಳ್ಳಾಲ : ರೈಲು ಢಿಕ್ಕಿ ಹೊಡೆದು ಕಾರ್ಮಿಕ ಮೃತ್ಯು

ಉಳ್ಳಾಲ: ರೈಲು ಡಿಕ್ಕಿ ಹೊಡೆದ ಪರಿಣಾಮ ಹಳಿ ದಾಟುತ್ತಿದ್ದ ಕಾರ್ಮಿಕ  ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ತೊಕ್ಕೊಟ್ಟು ಒಳಪೇಟೆ ಬಳಿ ಶನಿವಾರ ರಾತ್ರಿ ನಡೆದಿದೆ ‌ ಮೃತ ಕಾರ್ಮಿಕ ನನ್ನು ಬಿಹಾರ ಮೂಲದ ಶ್ರವಣ್ ದಾಸ್ (40) ಎಂದು ಗುರುತಿಸಲಾಗಿದೆ. ಅವರು ಕಲ್ಕಟ್ಟ ದಲ್ಲಿ ಕೆಲಸ ಮುಗಿಸಿ ತೊಕ್ಕೊಟ್ಟು ವಿನಲ್ಲಿರುವ ನಿವಾಸಕ್ಕೆ ಬಂದಿದ್ದರು.ಈ ವೇಳೆ ಸಾಂಬಾರ್ ತರಲೆಂದು ಹೊಟೇಲಿಗೆ ತೆರಳಿ ವಾಪಸ್ ರೈಲ್ವೇ ಹಳಿ ದಾಟಿ ಬರುವಾಗ ರೈಲು

ಮಂಗಳೂರು : ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ 32ನೇ ಪುಣ್ಯತಿಥಿ ಕಾರ್ಯಕ್ರಮ

ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ 32ನೇ ಪುಣ್ಯತಿಥಿ ಕಾರ್ಯಕ್ರಮ ಮಲ್ಲಿಕಟ್ಟೆಯ ಜಿಲ್ಲಾ ಕಾಂಗ್ರೆಸ್ ಭವನಲ್ಲಿ ನಡೆಯಿತು. ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ರಾಜೀವ್ ಗಾಂಧಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಗೌರವ ಸಲ್ಲಿಸಿದರು. ಈ ಸಂದರ್ಭದಲ್ಲಿ  ಮಾಜಿ ಮೇಯರ್ ಶಶಿಧರ್ ಹೆಗ್ಡೆ, ಕೆಪಿಸಿಸಿ ಸಂಯೋಜಕರು ತೇಜಸ್ ರಾಜ್, ಜಿಲ್ಲಾ ಕಾಂಗ್ರೆಸ್ ಆಸಾಂಘಟಿತ ಸಮಿತಿ ಅಧ್ಯಕ್ಷರಾದ ಬಿ ಎಂ ಅಬ್ಬಾಸ್ ಅಲಿ, ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ

ಬಿ.ಸಿ.ರೋಡ್ : ನನ್ನ ಜೀವನ ನನ್ನ ಸ್ವಚ್ಛನಗರ ಯೋಜನೆಗೆ ಚಾಲನೆ

ಬಂಟ್ವಾಳ: ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯವು ಸ್ವಚ್ಛ ಭಾರತ್ ಮಿಷನ್ ನಗರ 2.0 ಯೋಜನೆಯಡಿ ಸ್ಥಳೀಯ ಮಟ್ಟದಲ್ಲಿ ಪರಿಣಾಮ ಬೀರುವ ಅಭಿಯಾನವನ್ನು ಆರಂಭಿಸಿದ್ದು, ನನ್ನ ಜೀವನ ನನ್ನ ಸ್ವಚ್ಛನಗರ ಯೋಜನೆ ಕಾರ್ಯಕ್ರಮಕ್ಕೆ ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ಬಿ.ಸಿ.ರೋಡ್ ಬಸ್ ನಿಲ್ದಾಣದಲ್ಲಿ ಶನಿವಾರ ಚಾಲನೆ ನೀಡಲಾಯಿತು. ಮಂಗಳೂರು ನಗರ ಕೋಶದ ಯೋಜನಾ ನಿರ್ದೇಶಕ ಅಬಿದ್ ಗದ್ಯಾಲ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.ನವೀಕರಿಸಿ ಮರುಬಳಸಬಹುದಾದ ವಸ್ತುಗಳ

ತೋಕೂರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಬ್ರಹ್ಮಕುಂಭಾಭಿಷೇಕ

 ಸಂಪೂರ್ಣವಾಗಿ ಜೀರ್ಣೋದ್ಧಾರಗೊಂಡಿರುವ ತೋಕೂರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಇಂದು ಬ್ರಹ್ಮಕುಂಭಾಭಿಷೇಕ ಜರುಗಿತು. ದೇವಳದ ತಂತ್ರಿಗಳಾದ ಶಿಬರೂರು ಗೋಪಾಲಕೃಷ್ಣ ತಂತ್ರಿಗಳ ನೇತೃತ್ವದಲ್ಲಿ ಬೆಳಿಗ್ಗೆ ೫-೪೫ಕ್ಕೆ ಶ್ರೀ ಸುಬ್ರಹ್ಮಣ್ಯ ದೇವರಿಗೆ ಬ್ರಹ್ಮಕುಂಭಾಭಿಷೇಕ ನಡೆಯಲಿದೆ. ಕಲಾಶಾಭಿಷೇಕ, ಪ್ರಸನ್ನಪೂಜೆ, ನ್ಯಾಸಪೂಜೆ, ಮಹಾಪೂಜೆ, ಪ್ರಸಾದ ವಿತರಣೆ ನಡೆದು, ಹಗಲು ರಥೋತ್ಸವ, ಪಲ್ಲಪೂಜೆ, ಪ್ರಸನ್ನಪೂಜೆ, ಮಹಾಅನ್ನಂತರ್ಪಣೆ, ಉತ್ಸವಬಲಿ, ಶ್ರೀ ಭೂತಬಲಿ,

ಮಂಗಳೂರು : ಮೇ 22ರಿಂದ 24ರ ವರೆಗೆ ಮಂಗಳೂರಿನಲ್ಲಿ ಚಿಣ್ಣರ ಕಲರವ

ಚಿಣ್ಣರ ಚಾವಡಿ ಮಂಗಳೂರು ಆಶ್ರಯದಲ್ಲಿ ಮೇ 22ರಿಂದ 24ರವರೆಗೆ ನಗರದ ಸಂತ ಅಲೋಶಿಯಸ್ ಹೈಸ್ಕೂಲ್ ನ ಸಭಾಂಗಣದಲ್ಲಿ ಚಿಣ್ಣರ ಕಲರವ – 2023 ಮಕ್ಕಳ ಸಂತಸ ಕಲಿಕಾ ಕಾರ್ಯಗಾರವು ಜರುಗಲಿದೆ. ಮೇ 22ರಂದು ಸೋಮವಾರ ಬೆಳಿಗ್ಗೆ 9.30ಕ್ಕೆ ಪ್ರಾರಂಭಗೊಳ್ಳಲಿರುವ ಕಾರ್ಯಗಾರದ ಉದ್ಘಾಟನೆಯನ್ನು ಸಂತ ಅಲೋಶಿಯಸ್ ಶಿಕ್ಷಣ ಸಂಸ್ಥೆಗಳ ರೆಕ್ಟರ್ ರೆ. ಫಾ. ಮೆಲ್ವಿನ್ ಪಿಂಟೋ SJ ಯವರು ನಡೆಸಲಿದ್ದು, ಮುಖ್ಯ ಅತಿಥಿಗಳಾಗಿ ಸಾಮರಸ್ಯ ಮಂಗಳೂರು ಅಧ್ಯಕ್ಷರಾದ ಮಂಜುಳಾ ನಾಯಕ್,ಜಿಲ್ಲಾ

ಕಾಪು : ಬಿಜೆಪಿಯಿಂದ ರೋಡ್ ಶೋ

ಕಾಪು ಕ್ಷೇತ್ರವನ್ನು ಗೆದ್ದು ಬೀಗಿದ ಭಾರತೀಯ ಜನತಾ ಪಾರ್ಟಿಯ ನೂರಾರು ಕಾರ್ಯಕರ್ತರು ಹಾಲಿ ಹಾಗೂ ಮಾಜಿ ಶಾಸಕರನ್ನು ಸೇರಿಕೊಂಡು ಕ್ಷೇತ್ರದ್ಯಾಂತ ರೋಡ್ ಶೋ ನಡೆಸುವ ಮೂಲಕ ವಿಜಯೋತ್ಸವ ಆಚರಿಸಿದ್ದಾರೆ.ಹಾಲಿ ಶಾಸಕ ಸುರೇಶ್ ಶೆಟ್ಟಿ ಗುರ್ಮೆ, ಹಾಗೂ ಮಾಜಿ ಶಾಸಕ ಲಾಲಾಜಿ ಆರ್, ಮೆಂಡನ್ ಉಪಸ್ಥಿತಿಯಲ್ಲಿ ಪಡುಕರೆಯಿಂದ ಚಾಲನೆಗೊಂಡ ರೋಡ್ ಶೋ ಉದ್ಯಾವರ, ಕಟಪಾಡಿ, ಶಿರ್ವ, ಮುದರಂಗಡಿ, ಅಡ್ವೆ, ಪಲಿಮಾರು, ನಂದಿಕೂರು, ಪಡುಬಿದ್ರಿ, ಹೆಜಮಾಡಿ, ಎರ್ಮಾಳು, ಅದಮಾರು, ಕಾಪು

ಕಾಪುವಿನಲ್ಲಿ ಎಲ್‍ಇಡಿ ಸ್ಕ್ರೀನ್‍ನಲ್ಲಿ ಪ್ರಮಾಣ ವಚನದ ನೇರಪ್ರಸಾರ

ಕರ್ನಾಟಕ ರಾಜ್ಯದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯನವರು ಪ್ರಮಾಣವಚನ ಸ್ವೀಕಾರ ಮಾಡಿರುವ ದೃಶ್ಯವನ್ನು ಕಾಪು ಕಾಂಗ್ರೆಸ್ ಎಲ್‍ಇಡಿ ಸ್ಕ್ರೀನ್ ಮೂಲಕ ಕಾಪು ಪೇಟೆಯಲ್ಲಿ ಸಾರ್ವಜನಿಕರ ವೀಕ್ಷಣೆಗೆ ಇಟ್ಟು ಸಂಭ್ರಮಾಚರಣೆ ನಡೆಸಿದ್ದಾರೆ.ಸಿದ್ಧರಾಮಯ್ಯ ಹಾಗೂ ಅವರ ತಂಡ ಪ್ರಮಾಣವಚನ ಸ್ವೀಕರಿಸುತ್ತಿದಂತೆ ಕಾಂಗ್ರೆಸ್ ಕಾರ್ಯಕರ್ತರು ಸುಡುಮದ್ದು ಸಿಡಿಸಿ…ಸಾರ್ವಜನಿಕರಿಗೆ ಸಿಹಿ ಹಂಚಿ ಸಿದ್ದರಾಮಯ್ಯ ಹಾಗೂ ವಿನಯ ಕುಮಾರ್ ಸೊರಕೆ ಪರ ಘೋಷಣೆಯನ್ನು ಕೂಗಿ