Home Articles posted by v4team (Page 264)

ಪುತ್ತೂರಿನಲ್ಲಿ ಹಿಂದೂ ಕಾರ್ಯಕರ್ತರ ಮೇಲೆ ಪೊಲೀಸರ ದೌರ್ಜನ್ಯ : ಗಾಯಾಳುಗಳನ್ನು ವಿಚಾರಿಸಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ

ಪುತ್ತೂರು: ಪುತ್ತೂರಿನಲ್ಲಿ ಬಿಜೆಪಿ ಮುಖಂಡರ ಭಾವಚಿತ್ರವುಳ್ಳ ಬ್ಯಾನರ್ ಮೇಲೆ ಚಪ್ಪಲಿ ಹಾರ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೋಲೀಸರಿಂದ ದೌರ್ಜನ್ಯಕ್ಕೊಳಗಾದ ಹಿಂದೂ ಸಂಘಟನೆಯ ಕಾರ್ಯಕರ್ತರು ಅಸ್ಪತ್ರೆಗೆ ದಾಖಲಾಗಿದ್ದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ಗಾಯಾಳುಗಳನ್ನು ಭೇಟಿಯಾಗಿ ವಿಚಾರಿಸಿದ್ದಾರೆ. ಈ ಸಂದರ್ಭ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕರು

ಸಿಎಂ ಆಗಿ ಸಿದ್ದರಾಮಯ್ಯ,ಉಪಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಆಯ್ಕೆ

ಕರ್ನಾಟಕ ಕಾಂಗ್ರೆಸ್ ಶಾಸಕಾಂಗ ಪಕ್ಷದ ನೂತನ ನಾಯಕರಾಗಿ ಸಿದ್ದರಾಮಯ್ಯ ಅವರನ್ನ ಬುಧವಾರ ತಡರಾತ್ರಿ ಕಾಂಗ್ರೆಸ್ ಹೈಕಮಾಂಡ್ ಅಂತಿಮಗೊಳಿಸಿದೆ ಎಂದು ವರದಿಯಾಗಿದೆ. ಜೊತೆಗೆ ಮುಖ್ಯಮಂತ್ರಿ ಹುದ್ದೆಗೆ ಪ್ರಬಲ ಆಕಾಂಕ್ಷಿಯಾಗಿದ್ದ ಅವರಿಗೆ ಉಪ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಲಾಗಿದ್ದು, ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ.ಶಿವಕುಮಾರ್ ಅವರೇ ಮುಂದುವರಿಯಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇಂದು ಸಂಜೆ 7 ಗಂಟೆಗೆ ಬೆಂಗಳೂರಿನಲ್ಲಿ ನಡೆಯಲಿರುವ ಕಾಂಗ್ರೆಸ್ ಶಾಸಕಾಂಗ ಪಕ್ಷದ

‘ವೈದ್ಯಕೀಯ ರಂಗದ ಬೆಳವಣ ಗೆ ಅರಿಯಲು ಸಂಖ್ಯಾಶಾಸ್ತ್ರವೇ ಅಳತೆಗೋಲು’

ವೈದ್ಯಕೀಯ ರಂಗದಲ್ಲಿ ಸಂಖ್ಯಾಶಾಸ್ತ್ರದ ಬಳಕೆಯು ಹೇರಳವಾಗಿದೆ ಎಂದು ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್ ಅಭಿಪ್ರಾಯಪಟ್ಟರು.ಉಜಿರೆ ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದಲ್ಲಿ ಸಂಖ್ಯಾಶಾಸ್ತ್ರ ವಿಭಾಗವು ಆಯೋಜಿಸಿದ ‘ಸ್ಟ್ಯಾಟ್‍ಟೆಕ್ -2023′ ಅಂತರ್ ಕಾಲೇಜು ಮಟ್ಟದ ಸ್ಪರ್ಧೆಯ ಸಮಾರೋಪ ಸಮಾರಂಭದ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು.ವೈದ್ಯಕೀಯ ಕ್ಷೇತ್ರದಲ್ಲಾಗುವ ಮುಖ್ಯ ಬದಲಾವಣೆಗಳನ್ನು ಗುರುತಿಸುವಲ್ಲಿ

ಬಿ. ಜನಾರ್ದನ ಪೂಜಾರಿಯನ್ನು ಭೇಟಿಯಾದ ಯು.ಟಿ. ಖಾದರ್

ಬಂಟ್ವಾಳ: ಮಂಗಳೂರು ಶಾಸಕ ಯು.ಟಿ. ಖಾದರ್ ಅವರು ಬುಧವಾರ ಸಂಜೆ ಬಂಟ್ವಾಳದಲ್ಲಿ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿಯವರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿ ಆಶೀರ್ವಾದ ಪಡೆದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ ಜನಾರ್ದನ ಪೂಜಾರಿಯವರು ನಮ್ಮ ಪಕ್ಷದ ಹಿರಿಯ ನಾಯಕರು. ತನ್ನ ವಿದ್ಯಾರ್ಥಿ ಜೀವನದಲ್ಲಿ ರಾಜಕೀಯ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳಲು ಬಿ. ಜನಾರ್ದನ ಪೂಜಾರಿಯವರು ಮಾರ್ಗದರ್ಶನ ಮಾಡಿದ್ದರು. ಅವರ ಕಠಿಣ ಪರಿಶ್ರಮ, ಪ್ರಾಮಾಣಿಕತೆ, ಸಾಮಾಜಿಕ

ಬಂಟ್ವಾಳ : ಅಕ್ರಮವಾಗಿರಿಸಿದ್ದ ಸಿಮೆಂಟ್ ಬಳಸಿ ಎರಡು ಮನೆಗಳ ನಿರ್ಮಾಣ

ಬಂಟ್ವಾಳ: ಮಾರಾಟಕ್ಕಲದ ಸಿಮೆಂಟ್‍ಗಳನ್ನು ಬಿಜೆಪಿ ಮುಖಂಡನ ಮನೆಯಲ್ಲಿ ಅಕ್ರಮವಾಗಿ ದಾಸ್ತನಿರಿಸಿದ್ದಲ್ಲದೆ ಇದೇ ಸಿಮೆಂಟ್ ಬಳಸಿ ಎರಡು ಮನೆಗಳನ್ನು ನಿರ್ಮಿಸಿರುವ ಬಗ್ಗೆ ಸೂಕ್ತ ಕಾನೂನು ತನಿಖೆ ಆಗಬೇಕೆಂದು ರಾಜೀವ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಗದೀಶ್ ಕೊಯಿಲ ಆಗ್ರಹಿಸಿದ್ದಾರೆ. ಬಿ.ಸಿ. ರೋಡಿನ ಪ್ರೆಸ್‍ಕ್ಲಬ್‍ನಲ್ಲಿ ಅವರು ಈ ಬಗ್ಗೆ ಸುದ್ದಿಗೋಷ್ಟಿ ನಡೆಸಿ ಮಾತನಾಡಿ ಇತ್ತೀಚೆಗೆ ಬಿ. ಮೂಡ ಗ್ರಾಮದ

ಕಟೀಲು : ಬಸ್‍ಗೆ ಬೆಂಕಿ, ಪ್ರಯಾಣಿಕರು ಹಾಗೂ ಬಸ್ ಚಾಲಕ ಪಾರು

ಚಲಿಸುತ್ತಿದ್ದ ಬಸ್‍ಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡ ಘಟನೆ ಕಟೀಲು ದೇವಸ್ಥಾನದ ಮುಂಭಾಗದಲ್ಲಿ ನಡೆದಿದ್ದು, ಘಟನೆಯಲ್ಲಿ ಪ್ರಯಾಣಿಕರು ಹಾಗೂ ಬಸ್ ಚಾಲಕ ಅಪಾಯದಿಂದ ಪಾರಾಗಿದ್ದಾರೆ.ಕಟೀಲು ದೇವಸ್ಥಾನದ ಮುಂಭಾಗದಲ್ಲಿ ನಡೆದಿದ್ದು, ಘಟನೆಯಲ್ಲಿ ಪ್ರಯಾಣಿಕರು ಹಾಗೂ ಬಸ್ ಚಾಲಕ ಅಪಾಯದಿಂದ ಪಾರಾಗಿದ್ದಾರೆ. ದೇವಸ್ಥಾನದ ಮುಂಭಾಗವೇ ಬೆಂಕಿ ಹೊತ್ತಿಕೊಂಡಿದ್ದು, ಈ ವೇಳೆ ಬಸ್ ನಲ್ಲಿ ಇಬ್ಬರ ಮಹಿಳೆಯರು ಮತ್ತು ಬಸ್ ಚಾಲಕ ಇದ್ದರು ಎಂದು ಹೇಳಲಾಗಿದ್ದು, ಮೂವರು

ಬ್ಯಾನರಿಗೆ ಚಪ್ಪಲಿ ಹಾರ ಹಾಕಿದ ಪ್ರಕರಣ : ಪೊಲೀಸರ ಥಳಿತ, ವಿಡೀಯೋ ವೈರಲ್

ಪುತ್ತೂರು: ಪುತ್ತೂರು ಅರಣ್ಯ ಇಲಾಖೆಯ ಆವರಣ ಗೋಡೆಯ ಬಳಿ ಬಿಜೆಪಿ ಮುಖಂಡರಾದ ಡಿ. ವಿ. ಸದಾನಂದ ಗೌಡ ಹಾಗೂ ನಳಿನ್ ಕುಮಾರ್ ಕಟೀಲ್ ಅವರ ಭಾವ ಚಿತ್ರವುಳ್ಳ ಶ್ರದ್ಧಾಂಜಲಿ ಬ್ಯಾನರ್ ಹಾಕಿ ಅದಕ್ಕೆ ಚಪ್ಪಲಿ ಹಾರ ಹಾಕಿದ ಪ್ರಕರಣಕ್ಕೆ ಸಂಬಂಧಿಸಿ ವಶಕ್ಕೆ ಪಡೆದುಕೊಂಡಿದ್ದ ಆರೋಪಿಗಳ ಮೇಲೆ ಪೊಲೀಸ್ ರು ಹಿಗ್ಗಾಮುಗ್ಗಾ ಥಳಿಸಿ ಗಾಯಗೊಳಿಸಿರುವ ವೀಡೀಯೋ ತುಣುಕೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಗಳ ಮೇಲೆ ಪೋಲೀಸರು

ವಿಟ್ಲ: ದಾರಿ ಕೇಳುವ ನೆಪದಲ್ಲಿ ಮಹಿಳೆಯ ಜೊತೆ ಅಸಭ್ಯ ವರ್ತನೆ

ವಿಟ್ಲ: ದಾರಿ ಕೇಳುವ ನೆಪದಲ್ಲಿ ಮಹಿಳೆಯ ಜೊತೆ ಅಸಭ್ಯವಾಗಿ ವರ್ತಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳ ತಾಲೂಕು ಕನ್ಯಾನ ಗ್ರಾಮದ ಅಬೂಬಕ್ಕರ್ ಕೆ (46) ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ. ದೂರಿನಲ್ಲೇನಿದೆ?: ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಿನಾಂಕ:13-05-2023 ರಂದು ಬಂಟ್ವಾಳ ತಾಲೂಕು ವಿಟ್ಲ ಕಸಬ ಗ್ರಾಮದ ಬನ ಎಂಬಲ್ಲಿ ಮೋಟಾರ್ ಸೈಕಲ್ ನಲ್ಲಿ ಬಂದ ಅಪರಿಚಿತ

ಶ್ರದ್ಧಾಂಜಲಿ ಬ್ಯಾನರ್ ಪ್ರಕರಣ : ಮತ್ತೆ 7 ಮಂದಿ ಪೊಲೀಸ್ ವಶಕ್ಕೆ

ಪುತ್ತೂರು: ಪುತ್ತೂರು ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದ ಬಳಿ ಇರುವ ಅರಣ್ಯ ಇಲಾಖೆಯ ಆವರಣಗೋಡೆಯ ಎದುರು “ಬಿಜೆಪಿ ಹೀನಾಯವಾಗಿ ಸೋಲಲು ಕಾರಣಕರ್ತರಾದ ನಿಮಗೆ ಭಾವಪೂರ್ಣ ಶ್ರದ್ದಾಂಜಲಿ” ನೊಂದ ಹಿಂದು ಕಾರ್ಯಕರ್ತರೆಂಬ ಚಪ್ಪಲಿ ಹಾರ ಹಾಕಲಾಗಿರುವ ಬ್ಯಾನರ್ ಪ್ರಕರಣಕ್ಕೆ ಸಂಬಂಧಿಸಿ ಮತ್ತೆ ಏಳು ಮಂದಿ ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಬ್ಯಾನರ್ ಅಳವಡಿಸಿದ ಪ್ರಕರಣಕ್ಕೆ ಸಂಬಂಧಿಸಿ ತನಿಖೆ ನಡೆಸಿ ಕಾರ್ಯಾಚರಣೆ ನಡೆಸಿದ ಪೊಲೀಸರು ನರಿಮೊಗರು

ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ವಿವಿಧ ಧಾರ್ಮಿಕ ಕೇಂದ್ರಗಳಿಗೆ ಭೇಟಿ

ವಿಟ್ಲ: ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರು ವಿಟ್ಲದ ವಿವಿಧ ಧಾರ್ಮಿಕ ಕೇಂದ್ರಗಳಿಗೆ ಭೇಟಿ ನೀಡಿ, ಪ್ರಾರ್ಥನೆ ಸಲ್ಲಿಸಿದರು. ವಿಟ್ಲ ಮಹಾತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದರು. ಬಳಿಕ ವಿಟ್ಲ ಕೇಂದ್ರ ಜುಮ್ಮಾ ಮಸೀದಿ, ವಿಟ್ಲ ಶೋಕಮಾತೆ ಇಗರ್ಜಿಗೆ ಭೇಟಿ ನೀಡಿ, ಪ್ರಾರ್ಥನೆ ಸಲ್ಲಿಸಿದರು. ಈ ಸಂದರ್ಭ ಹೇಮನಾಥ ಶೆಟ್ಟಿ ಕಾವು, ಎಂ ಎಸ್ ಮಹಮ್ಮದ್, ರಾಜಾರಾಮ್ ಕೆ.ಬಿ, ರಮಾನಾಥ ವಿಟ್ಲ, ಶ್ರೀನಿವಾಸ ಶೆಟ್ಟಿ ಕೊಲ್ಯ, ವಿಕೆಎಂ ಅಶ್ರಪ್,