ಲೀಚ್ ಎಂದು ಆಂಗ್ಲಭಾಷೆಯಲ್ಲಿ ಕರೆಸಿಕೊಳ್ಳುವ ‘ಜಿಗಣೆ’ ಅಥವಾ ‘ಇಂಬಳ’ ಸಾಮಾನ್ಯವಾಗಿ ತೇವವಿರುವ ಜಾಗಗಳಲ್ಲಿ, ಅರಣ್ಯ ಪ್ರದೇಶಗಳಲ್ಲಿ ಹೆಚ್ಚಾಗಿ ವಾಸಿಸುತ್ತದೆ. ಈ ಜೀವಿಯ ಆಹಾರ ಮತ್ತು ವಾಸಸ್ಥಳ ಎಲ್ಲವೂ ಜಲವೇ ಆಗಿರುವುದರಿಂದ ಇವುಗಳಿಗೆ ‘ಜಲೌಕ’ ಎಂದೂ ಕರೆಯುತ್ತಾರೆ. ವಿಷಕಾರಕ ಜಿಗಣೆ ಮತ್ತು ವಿಷರಹಿತ ಜಿಗಣೆ ಎಂದು ಎರಡು ವಿಧಗಳಿದ್ದು, ವಿಷರಹಿತ ಜಿಗಣೆಗಳನ್ನು
ಪುತ್ತೂರು: ಪುತ್ತೂರು ದಸರಾ ನವದುರ್ಗಾರಾಧನಾ ಸಮಿತಿ ವತಿಯಿಂದ 21ನೇ ವರ್ಷದ `ಪುತ್ತೂರು ದಸರಾ ಮಹೋತ್ಸವ’ ಅ. 15ರಿಂದ 26ರ ತನಕ ಸಂಪ್ಯ ಉದಯಗಿರಿ ಅನ್ನಪೂರ್ಣೇಶ್ವರಿ ಕ್ಷೇತ್ರದಲ್ಲಿ ವಿವಿಧ ವೈದಿಕ, ಧಾರ್ಮಿಕ ಸಭಾ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ ಎಂದು ಸಮಿತಿ ಸಂಚಾಲಕ ಕುಕ್ಕಾಡಿ ತಂತ್ರಿ ಪ್ರೀತಂ ಪುತ್ತೂರಾಯ ತಿಳಿಸಿದ್ದಾರೆ. ಅವರು ಪುತ್ತೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅ. 15ರಂದು ಬೆಳಿಗ್ಗೆ 10ಕ್ಕೆ ಗಣಪತಿ ಹಾಗೂ
ಉಳ್ಳಾಲ: ಕರ್ನಾಟಕ ಸಾರಿಗೆ ಬಸ್ ಹಾಗೂ ಸ್ಕೂಟರ್‍ಗಳ ನಡುವೆ ಸಂಭವಿಸಿದ ಸರಣಿ ಅಪಘಾತದಲ್ಲಿ ಅಡ್ಕ ನಿವಾಸಿ ಕೃಷ್ಣ ಶೆಟ್ಟಿ ತಾಮಾರ್ ಎಂಬವರು ಗಂಭೀರ ಗಾಯಗೊಂಡಿರುವ ಘಟನೆ ಕೋಟೆಕಾರು ಬೀರಿ ಜಂಕ್ಷನ್ ನಲ್ಲಿ ಇಂದು ಸಂಜೆ ವೇಳೆ ಸಂಭವಿಸಿದೆ. ಕೋಟೆಕಾರು ಗ್ರಾಮದ ಕಾರಣೀಕ ಸ್ಥಳ ಕೊಂಡಾಣ ಪಿಲಿಚಾಮುಂಡಿ, ಬಂಟ, ಮುಂಡತ್ತಾಯ ದೈವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರು, ಕೋಟೆಕಾರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಕೃಷ್ಣ ಶೆಟ್ಟಿ ತಾಮಾರ್ ಅವರು ಅಪಘಾತದಲ್ಲಿ
ಅರಣ್ಯ ಭೂಮಿ ಅತಿಕ್ರಮಣಕ್ಕೆ ಸಂಬಂಧಿಸಿದಂತೆ ವಿವಾದಕ್ಕೆ ಕಾರಣವಾಗಿದ್ದ ಬೆಳ್ತಂಗಡಿ ತಾಲೂಕಿನ ಕಳೆಂಜ ಗ್ರಾಮದ ಸರ್ವೇ ನಂಬರ್ 309ರ ಅಂದರೆ ನಿಡ್ಲೆ ವಿಸ್ತೃತ ಬ್ಲಾಕ್ 2ರ ಮತ್ತು ಕಳೆಂಜ ವಿಸ್ತೃತ ಬ್ಲಾಕ್ ನ ಜಂಟಿ ಸರ್ವೆ ಕಾರ್ಯವು ಆರಂಭಗೊಳ್ಳಲಿದೆ. ತಾಲೂಕು ತಹಶೀಲ್ದಾರ್, ಉಪ್ಪಿನಂಗಡಿ ವಲಯ ಅಧಿಕಾರಿ, ಕಂದಾಯ ಅಧಿಕಾರಿಗಳು, ಸರ್ವೆ ಅಧಿಕಾರಿಗಳ ಸಹಭಾಗಿತ್ವದಲ್ಲಿ ಎಡಿಎಲ್ಆರ್ ಸರ್ವೆ ಮೂಲಕ ಸುಮಾರು 8,446 ಎಕರೆಯಷ್ಟು ಪ್ರದೇಶವನ್ನು ಸರ್ವೆ ಮಾಡಲಾಗುವುದು ಎಂದು
ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಮೃತಪಟ್ಟ ಘಟನೆ ರಾ.ಹೆ.೬೬ರ ನೇತ್ರಾವತಿ ಸೇತುವೆಯಲ್ಲಿ ನಡೆದಿದೆ. ಮೃತ ಸವಾರನನ್ನು ಮೂಲತಃ ಉಳ್ಳಾಲದ ಪ್ರಸಕ್ತ ಕೋಟೆಕಾರ್‌ನಲ್ಲಿ ನೆಲೆಸುತ್ತಿದ್ದ ಹನೀಫ್ ಎಂಬವರ ಪುತ್ರ ಅಝ್‌ವೀನ್ (21) ಎಂದು ಗುರುತಿಸಲಾಗಿದೆ. ದಕ್ಕೆಗೆ ಮೀನುಗಾರಿಕೆಯ ಕೆಲಸಕ್ಕೆಂದು ಅಝ್‌ವೀನ್ ೩:೩೦ರ ವೇಳೆಗೆ ತೊಕ್ಕೊಟ್ಟಿನಿಂದ ಮಂಗಳೂರು ಕಡೆಗೆ ಬೈಕ್ ನಲ್ಲಿ ತೆರಳುತ್ತಿದ್ದಾಗ ನೇತ್ರಾವತಿ ಸೇತುವೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ಗಂಭೀರ ಗಾಯಗೊಂಡರು
ಸುರತ್ಕಲ್ ರೈಲ್ವೇ ಸೇತುವೆ ಅಕ್ಕಪಕ್ಕದ ರಸ್ತೆ ಗುಂಡಿ ಮುಚ್ಚಿ ವಾಹನ ಸಂಚಾರಕ್ಕೆ ಯೋಗ್ಯ ರಸ್ತೆ ನಿರ್ಮಿಸಲು ಒತ್ತಾಯಿಸಿ ಹಾಗೂ ಟ್ರಾಫಿಕ್ ಸಮಸ್ಯೆಗೆ ಕಾರಣವಾಗುತ್ತಿರುವ ಕೊಂಕಣ ರೈಲ್ವೆ ರೋರೋ ಘಟಕವನ್ನು ಶೀಘ್ರ ಸ್ಥಳಾಂತರಕ್ಕೆ ಆಗ್ರಹಿಸಿ ಡಿವೈಎಫ್‍ಐ ಸುರತ್ಕಲ್ ಘಟಕದಿಂದ ಪ್ರತಿಭಟನೆ ನಡೆಸಿದರು. ಡಿವೈಎಫ್‍ಐ ಜಿಲ್ಲಾ ಅಧ್ಯಕ್ಷರಾದ ಬಿ.ಕೆ ಇಮ್ತಿಯಾಜ್ ಅವರು ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿ, ಸುರತ್ಕಲ್ ಭಾಗದಲ್ಲಿ ರಸ್ತೆ ಹೊಂಡ
ಕುಂದಾಪುರದ ಸೇನಾಪುರ ನಿಲ್ದಾಣದಲ್ಲಿ ಎಕ್ಸ್‍ಪ್ರೆಸ್ ರೈಲು ನಿಲುಗಡೆ ಹೋರಾಟ ಸಮಿತಿ ನೇತೃತ್ವದಲ್ಲಿ ಸೇನಾಪುರ ನಿಲ್ದಾಣದಲ್ಲಿ ಎಕ್ಸ್‍ಪ್ರೆಸ್ ರೈಲು ನಿಲುಗಡೆ ಆಗ್ರಹಿಸಿ ಚಲೋ ಸೇನಾಪುರ ಬೃಹತ್ ಪ್ರತಿಭಟನೆ ನಡೆಸಿದರು. ಬೃಹತ್ ಪ್ರತಿಭಟನೆ ಮೆರವಣಿಗೆ ನಾಡಾ ಗ್ರಾಮ ಪಂಚಾಯತ್‍ನಿಂದ ಆರಂಭಗೊಂಡು ಸೇನಾಪುರ ರೈಲ್ವೇ ನಿಲ್ದಾಣದವರೆಗೆ ಸಾಗಿಬಂದು, ಬಳಿಕ ರೈಲ್ವೇ ನಿಲ್ದಾಣದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು. ಹೋರಾಟ ಸಮಿತಿಯ ಸಂಚಾಲಕ ರಾಜೀವ್
ಕೋಟದ ಕಾರಂತ ಥೀಮ್ ಪಾರ್ಕ್‍ನಲ್ಲಿ ಡಾ. ಕೋಟ ಶಿವರಾಮ ಕಾರಂತರ ಜನ್ಮದಿನೋತ್ಸವದ ಅಂಗವಾಗಿ ಸಂಗೀತ ಲೋಕದ ದಿಗ್ಗಜ ಡಾ. ವಿದ್ಯಾಭೂಷಣರಿಗೆ ಹುಟ್ಟೂರ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಿತು. ಕೋಟತಟ್ಟು ಗ್ರಾಮ ಪಂಚಾಯತ್, ಡಾ.ಶಿವರಾಮ ಕಾರಂತ ಟ್ರಸ್ಟ್ ಉಡುಪಿ, ಡಾ. ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಪ್ರತಿಷ್ಠಾನ ಇವರ ಆಶ್ರಯದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ವಿಶೇಷವಾಗಿ ಆಗಮಿಸಿದ್ದ ರಾಜ್ಯಪಾಲ ಥಾವರ್‍ಚಂದ್ ಗೇಹಲೋಟ್‍ರವರಿಗೆ
ಕುಂದಾಪುರ: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿದ ರಾಜ್ಯಪಾಲ ಥ್ಯಾವರ್ ಚಂದ್ ಗೆಹ್ಲೋಟ್ ಅವರು ದೇವರ ದರ್ಶನ ಪಡೆದುಕೊಂಡು ವಿಶೇಷ ಪೂಜೆ ಸಲ್ಲಿಸಿದರು. ದೇಗುಲಕ್ಕೆ ಭೇಟಿ ನೀಡಿದ ರಾಜ್ಯಪಾಲರನ್ನು ಪೂರ್ಣಕುಂಭ ಸ್ವಾಗತದೊಂದಿಗೆ ಬರಮಾಡಿಕೊಳ್ಳಲಾಯಿತು. ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೆರಾಡಿ ಚಂದ್ರಶೇಖರ ಶೆಟ್ಟಿ ಅವರು ರಾಜ್ಯಪಾಲರನ್ನು ಗೌರವಿಸಿದರು. ಈ ಸಂದರ್ಭದಲ್ಲಿ ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ಗುರುರಾಜ್
ಕಾಲುಗಳಿಗಿಲ್ಲ ತನ್ನ ಬೇಕು ಬೇಡಗಳನ್ನು ಪೂರೈಸುವ ಶಕ್ತಿ… ಆದರೆ ಜನರ ಉದ್ಧಾರಕ್ಕೂ ಎಂಬಂತೆ ತನ್ನೆಲ್ಲಾ ಸುಖ ಸಂತೋಷಗಳನ್ನು ಬದಿಗೊತ್ತಿ,.. ತನ್ನಲ್ಲಿ ಅಡಕವಾಗಿರುವ ನೋವುಗಳನ್ನು ಮರೆತು ಜನರ ಕಷ್ಟ ಕಾರ್ಪಣ್ಯಗಳಿಗೆ ಸ್ಪಂದಿಸುತ್ತಾರೆ. ಇದೀಗ ಪಡುಬಿದ್ರಿಯ ಸುಜ್ಲಾನ್ ಕಾಲೋನಿಯ ಒಂದು ಮನೆಯಲ್ಲಿ ಜನರ ಸೇವೆಗೆ ಲಭ್ಯವಿದ್ದಾರೆ. ಕೇರಳ ಮೂಲದ “ಶೇಷಾನಂದ” ವಯಸ್ಸು ಕೇವಲ ಮೂವತ್ತ ನಾಲ್ಕು, ವಿದ್ಯಾಭ್ಯಾಸ ರಹಿತವಾಗಿರುವ ಇವರು ಕನ್ನಡ, ಹಿಂದಿ, ಮಲಯಾಳಂ ಸಹಿತ




























