ಮಂಗಳೂರು ಮಹಾನಗರ ಪಾಲಿಕೆಯ ಆಡಳಿತ ಮತ್ತು ಅಧಿಕಾರಿಗಳು ಜಿಲ್ಲೆಯ ಮೂಲ ನಿವಾಸಿಗಳಾಗಿರುವ ಆದಿವಾಸಿ ಕೊರಗ ಸಮುದಾಯದ ಬಗ್ಗೆ ಮಾನವೀಯ ನೆಲೆಯಿಂದ ಕಾರ್ಯಾಚರಿಸುವುದು ಸಂವಿಧಾನದ ಆಶಯವಾಗಿದೆ ಇದಕ್ಕೆ ವ್ಯತಿರಿಕ್ತವಾಗಿ ಕೊರಗ ಸಮುದಾಯದ ಬದುಕಿನೊಂದಿಗೆ ಚೆಲ್ಲಾಟ ಆಡುವುದನ್ನು ಸಹಿಸಲು ಸಾಧ್ಯವಿಲ್ಲ ಎಂದು ಸಿಐಟಿಯು ದಕ್ಷಿಣ ಕನ್ನಡ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನಿಲ್
ಮೂಡುಬಿದಿರೆ: ಕ್ಷೇತ್ರ ಸಮನ್ವಯ ಸಂಪನ್ಮೂಲ ಕೇಂದ್ರ ಮೂಡುಬಿದಿರೆ ಇಲ್ಲಿ ಮಂಗಳವಾರ ವಲಯದ 15 ವಿಕಲಚೇತನ ವಿದ್ಯಾರ್ಥಿಗಳಿಗೆ ಸಾಧನ ಸಲಕರಣೆಗಳನ್ನು ವಿತರಿಸಲಾಯಿತು. ಕ್ಷೇತ್ರದ ಶಾಸಕ ಉಮಾನಾಥ ಕೋಟ್ಯಾನ್ ಅವರು ಸಾಧನ ಸಲಕರಣೆ ವಿತರಿಸಿ ಮಾತನಾಡಿ ಪೋಷಕರು ತಮ್ಮ ಮಕ್ಕಳಿಗೆ ಮತ್ತಷ್ಟು ಉತ್ತೇಜನ ನೀಡಿ ಈ ಮಕ್ಕಳು ಮುಖ್ಯವಾಹಿನಿ ಬರುವಂತೆ ಮಾಡಬೇಕು. ಸರ್ಕಾರದ ವ್ಯವಸ್ಥೆ ಮತ್ತು ಇಲಾಖೆಯ ಅಧಿಕಾರಿಗಳೊಂದಿಗೆ ಸಹಯೋಗದಿಂದ ಸಲಕರಣೆಗಳ ಸದುಪಯೋಗ ಪಡೆದುಕೊಳ್ಳಬೇಕೆಂದರು.
ನೆಲ್ಯಾಡಿ: ಮಂಗಳೂರಿನ ಮಂಗಳ ಕ್ರೀಡಾಂಗಣದಲ್ಲಿ ನಡೆದ ರಾಜ್ಯ ಮಟ್ಟದ ಅಮೆಚೂರ್ ಕ್ರೀಡಾಕೂಟದಲ್ಲಿ ಆದರ್ಶ್ ಶೆಟ್ಟಿ ಇವರು ಎತ್ತರ ಜಿಗಿತದಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. ತೆಲಂಗಾಣದಲ್ಲಿ ನಡೆಯುವ ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ. ದೈಹಿಕ ಶಿಕ್ಷಕರಾದ ಏಲಿಯಸ್ ಪಿಂಟೋ, ರಾಜೇಶ್ ಮೂಲ್ಯ ಹಾಗೂ ಪುಷ್ಪರಾಜ್ ಇವರಿಗೆ ತರಬೇತಿಯನ್ನು ನೀಡಿದ್ದಾರೆ. ಪ್ರಸ್ತುತ ಇವರು ಪುತ್ತೂರು ಸಂತ ಫಿಲೋಮಿನಾ ಕಾಲೇಜಿನ ಪಿಯುಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿ.
ಕಾಡಿನಲ್ಲಿ ಸಿಗುವ ಯಾವುದೋ ಹಣ್ಣನ್ನು ಮೈರೋಳ್ ಹಣ್ಣ ಎಂದು ಭಾವಿಸಿ ಮನೆಗೆ ತಂದು ಶರಬತ್ತು ಮಾಡಿ ಕುಡಿದ ಮಹಿಳೆಯೊಬ್ಬರು ಅಸ್ವಸ್ಥಗೊಂಡು ಮೃತಪಟ್ಟ ಘಟನೆ ಸುಳ್ಯದಲ್ಲಿ ನಡೆದಿದೆ. ಸುಳ್ಯದ ಅಮರಪಡ್ನೂರು ಗ್ರಾಮದ ಕುಳ್ಳಾಜೆ ನಿವಾಸಿ ಲೀಲಾವತಿ(35) ಮೃತಪಟ್ಟವರು. ಇವರ ಇದೇ ಲೋಕಯ್ಯ ನಾಯ್ಕ ಕೂಡಾ ಹಣ್ಣಿನ ಶರಬತ್ತು ಕುಡಿದು ಅಸ್ವಸ್ಥಗೊಂಡಿದ್ದರೆನ್ನಲಾಗಿದೆ. ಲೀಲಾವತಿ ಹಾಗೂ ಲೋಕಯ್ಯ ನಾಯ್ಕ ಒಂದು ವಾರದ ಹಿಂದೆ ಮೈರೋಳ್ ಹಣ್ಣಿನ ರಸ ತೆಗೆದು ಶರಬತ್ತು ಮಾಡಿ
ಉತ್ತರಪ್ರದೇಶದ ಲಖೀಂಪುರಖೇರಿಯಲ್ಲಿ 2021ರಲ್ಲಿ ರೈತರ ಮೇಲೆ ನಡೆದ ಅಮಾನವೀಯ ಧಾಳಿಗೆ ಹಾಗೂ ಪ್ರಾಣಹಾನಿಗಳಿಗೆ ಕಾರಣವಾದ BJP ನಾಯಕರೂ,ಕೇಂದ್ರ ಸಚಿವರಾದ ಅಜಯ್ ಮಿಶ್ರ ಥೇಣಿಯ ಮೇಲೆ ಕಠಿಣ ಕ್ರಮ ಜರುಗಿಸಲು ಒತ್ತಾಯಿಸಿ ದೇಶಾದ್ಯಂತ ನಡೆದ ಕಪ್ಪು ದಿನಾಚರಣೆಯ ಅಂಗವಾಗಿ ಇಂದು (03-10-2023) CITU ನೇತ್ರತ್ವದಲ್ಲಿ ಮಂಗಳೂರಿನ ಕ್ಲಾಕ್ ಟವರ್ ಬಳಿಯಲ್ಲಿ ಪ್ರತಿಭಟನೆ ಜರುಗಿತು. ಪ್ರತಿಭಟನೆಯನ್ನುದ್ದೇಶಿಸಿ CITU ಜಿಲ್ಲಾಧ್ಯಕ್ಷರಾದ ಜೆ.ಬಾಲಕ್ರಷ್ಣ ಶೆಟ್ಟಿಯವರು
ಮೂಡುಬಿದಿರೆ: ಮಕ್ಕಳಲ್ಲಿ ಸೇವಾ ಮನೋಭಾವ ಬೆಳೆಸಲು ರೋವರ್ಸ್ ಮತ್ತು ರೇಂಜರ್ಸ್ ಸಹಕಾರಿ’ ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಮೂಡುಬಿದಿರೆ ಘಟಕದ ಖಜಾಂಚಿ, ಪ್ರಾಂತ್ಯ ಸರ್ಕಾರಿ ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ನವೀನ್ ಚಂದ್ರ ಅಂಬೂರಿ ಹೇಳಿದರು.ಅವರು ಆಳ್ವಾಸ್ ಪದವಿಪೂರ್ವ ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ಘಟಕಗಳ ೨೦೨೩-೨೪ನೇ ಸಾಲಿನ ಚಟುವಟಿಕೆಗಳನ್ನು ಕಾಲೇಜಿನ ಶಿವರಾಮ ಕಾರಂತ ಸಭಾಂಗಣದಲ್ಲಿ ಉದ್ಘಾಟಿಸಿ ಮಾತನಾಡಿದರು. ಮಕ್ಕಳಿಗೆ ಮೌಲ್ಯಯುತ ಶಿಕ್ಷಣ
ಕಡಬ ಪಟ್ಟಣ ಪಂಚಾಯತ್, ಕಡಬ ತಾಲೂಕು ಗ್ಯಾರೇಜ್ ಮಾಲಕರ ಹಾಗೂ ಸಹೋದ್ಯೋಗಿಗಳ ಸಂಘ (ರಿ ), ಕಡಬ, ಇವರ ಸಹಭಾಗಿತ್ವದಲ್ಲಿ ಮಹಾತ್ಮ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಪ್ರಯುಕ್ತ ಕಡಬ ಪಟ್ಟಣ ಸ್ವಚ್ಛತಾ ಕಾರ್ಯಕ್ರಮದ ಉದ್ಘಾಟನೆ ಕಡಬದ ಶ್ರೀ ಗಣೇಶ್ ಬಿಲ್ಡಿಂಗ್ ಕಟ್ಟಡದ ಎದುರುಗಡೆ ನಡೆಯಿತು. ಕಾರ್ಯಕ್ರಮವನ್ನು ಕಡಬ ತಾಲೂಕು ಉಪ ತಹಸೀಲ್ದಾರ್ ಗೋಪಾಲ್ ಕಲ್ಲುಗುಡ್ಡೆ ದೀಪ ಬೆಳಗಿಸಿ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಸ್ವಚ್ಚತೆ ಪ್ರತಿಯೊಬ್ಬರ
ನೆಲ್ಯಾಡಿ: ರಾಷ್ಟ್ರೀಯ ಹೆದ್ದಾರಿ 75 ರ ಶಿರಾಡಿ ಸಮೀಪ ಕಾರೊಂದು ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾದ ಘಟನೆ ಸಂಭವಿಸಿದೆ. ಗಾಯಾಳುವನ್ನು ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ಸಿಬ್ಬಂದಿ ಎಂದು ಹೇಳಲಾಗುತ್ತಿದ್ದು ಬಿಹಾರ್ ಮೂಲದವರ ಕಾರು ಇದಾಗಿದ್ದು, ಕಾರು ಮಂಗಳೂರಿನಿಂದ ಬೆಂಗಳೂರಿಗೆ ಹೋಗುತ್ತಿತ್ತು ಎನ್ನಲಾಗಿದೆ. ಸ್ಥಳಕ್ಕೆ ನೆಲ್ಯಾಡಿ ಹೊರಟಾಣೆ ಹೆಡ್ ಕಾನ್ಸ್ಟೇಬಲ್ ಕುಶಾಲಪ್ಪ ಭೇಟಿ ನೀಡಿ
ಮುಸ್ಲಿಂ ಲೀಗ್ ಆಡಳಿತ ವೈಫಲ್ಯ ಹಾಗೂ ದುರಾಡಳಿತದ ವಿರುದ್ಧ ಭಾರತೀಯ ಜನತಾ ಪಕ್ಷ ಮಂಗಲ್ಪಾಡಿ ಪಂಚಾಯತ್ ಸಮಿತಿ ನೇತೃತ್ವದಲ್ಲಿ ಮಂಗಲ್ಪಾಡಿ ಪಂಚಾಯತ್ ಕಚೇರಿಗೆ ಮೆರವಣಿಗೆ ನಡೆಸಿ ಪ್ರತಿಭಟನೆ ನಡೆಸಿದರು. ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿಜಯ ಕುಮಾರ್ ರೈ ಅವರು ಪ್ರತಿಭಟನಾ ಮೆರವಣಿಗೆಗೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು ಮುಸ್ಲಿಂ ಲೀಗ್ ಆಡಳಿತದ ವೈಫಲ್ಯಕ್ಕೆ ಆಕ್ರೋಶ ವ್ಯಕ್ತಪಡಿಸಿದರು. ಪಂಚಾಯತು ಸಮಿತಿ ಅಧ್ಯಕ್ಷರಾದ ರಾಮಚಂದ್ರ ಬಲ್ಲಾಳ್
ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಕಟ್ಟಡ ಸಾಮಾಗ್ರಿ ವಾಹನ ಸಾಗಾಟ ಚಾಲಕರು ಕಳೆದ ಆರು ದಿನಗಳಿಂದ ಮುಷ್ಕರ ನಡೆಸುತ್ತಿದ್ದು, ಇವರ ಸಮಸ್ಯೆಗಳಿಗೆ ಯಾರೂ ಸ್ಪಂದಿಸುತ್ತಿಲ್ಲ. ಕಟ್ಟಡ ಕಾರ್ಮಿಕರಿಗೆ ಕಟ್ಟಡ ಸಾಮಾಗ್ರಿಗಳನ್ನು ಸರಬರಾಜು ಮಾಡುತ್ತಿದ್ದ ವಾಹನಗಳು ರಸ್ತೆಗೆ ಇಳಿಯದೆ ಪ್ರತಿಭಟನೆಯಲ್ಲಿ ತೊಡಗಿವೆ. ಇದರಿಂದ ಕಟ್ಟಡ ಕೆಲಸವನ್ನು ನಂಬಿಕೊಂಡು ಬಂದಿರುವ ಕಾರ್ಮಿಕರು ಆರು ದಿನಗಳಿಂದ ಕೆಲಸವಿಲ್ಲದೆ ಆಲೆದಾಡುತ್ತಿದ್ದಾರೆ. ಇಡೀ ರಾಜ್ಯದಲ್ಲಿ ಇಲ್ಲದ




























