Home Articles posted by v4team (Page 4)

ಲೋಕಸಭಾ ಚುನಾವಣೆ : ತಿರುವಳ್ಳೂರು ಕ್ಷೇತ್ರದಿಂದ ಸಸಿಕಾಂತ್ ಸೆಂಥಿಲ್ ಸ್ಪರ್ಧೆ

ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ನಾಲ್ಕನೇ ಪಟ್ಟಿ ಘೋಷಣೆ ಮಾಡಿದೆ. ಈ ಪಟ್ಟಿಯಲ್ಲಿ 46 ಅಭ್ಯರ್ಥಿಗಳ ಹೆಸರು ಘೋಷಣೆ ಮಾಡಿದೆ. ಇದರಲ್ಲಿ ಕಾಂಗ್ರೆಸ್ ಹೈಕಮಾಂಡ್ ಮಾಜಿ ಐಎಎಸ್ ಅಧಿಕಾರಿ ಸಸಿಕಾಂತ್ ಸೆಂಥಿಲ್ ಅವರಿಗೂ ಟಿಕೆಟ್ ನೀಡಿದ್ದು, ತಿರುವಳ್ಳೂರು ಲೋಕಸಭೆ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ. ಸಸಿಕಾಂತ್ ಸೆಂಥಿಲ್ ಅವರು ಕರ್ನಾಟಕದ ದಕ್ಷಿಣ ಕನ್ನಡದಲ್ಲಿ

ಪುತ್ತೂರು : ಅಂತರ್ ರಾಜ್ಯ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು

ಕಳೆದ ಒಂದೂವರೆ ತಿಂಗಳ ಹಿಂದೆ ಚಿನ್ನಾಭರಣ ಕಳ್ಳತನ ಮಾಡಿದ್ದ ತಮಿಳುನಾಡು ಮೂಲದ ಅಂತರ್ ರಾಜ್ಯ ಕಳ್ಳತನ ಪ್ರಕರಣವನ್ನು ಭೇದಿಸಿದ ಪುತ್ತೂರು ನಗರ ಪೊಲೀಸರು ತಮಿಳುನಾಡಿನ ಮಹಿಳೆಯನ್ನು ಬಂಧಿಸಿ ಸುಮಾರು 6 ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ ಪಡೆದುಕೊಂಡಿದ್ದಾರೆ. ಕಳೆದ ಫೆ.12ರಂದು ಪುತ್ತೂರು ನಗರದ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದಲ್ಲಿ ರೇಷ್ಮಾ ಎನ್ ಎಂಬವರ ಬ್ಯಾಗಿನಲ್ಲಿದ್ದ ಚಿನ್ನಾಭರಣಗಳನ್ನು ಕಳವು ಮಾಡಿರುವ ಬಗ್ಗೆ ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು

ಮಾಸ್ಕೋದಲ್ಲಿ ಉಗ್ರ ದಾಳಿ : ಸಾವಿನ ಸಂಖ್ಯೆ 115ಕ್ಕೆ ಏರಿಕೆ

ರಶಿಯಾದ ರಾಜಧಾನಿ ಮಾಸ್ಕೋದ ಕನ್ಸರ್ಟ್ ಹಾಲಿನಲ್ಲಿ ನಾಲ್ವರು ಬಂದೂಕು ಹಿಡಿದವರು ನುಗ್ಗಿ ಹಲವು ಸ್ಫೋಟ ನಡೆಸಿ, ಮನ ಬಂದಂತೆ ಗುಂಡು ಹಾರಿಸಿದ್ದರಿಂದ ಸತ್ತವರ ಸಂಖ್ಯೆಯು 115ಕ್ಕೆ ಏರಿಕೆಯಾಗಿದೆ. ನಾಲ್ವರು ಗನ್‌ಮ್ಯಾನ್ ಸಹಿತ 11 ಜನರನ್ನು ಬಂಧಿಸಲಾಗಿದೆ. 145ಕ್ಕೂ ಹೆಚ್ಚು ಜನರು ಗಾಯಗೊಂಡರು. ಭಾರೀ ಹೊಗೆ ಆವರಿಸಿಕೊಂಡುದು ಮತ್ತು ಜನರ ಕಂಡತ್ತ ಓಡತೊಡಗಿದ್ದರಿಂದ ಏನು ನಡೆಯುತ್ತದೆ ಎಂಬುದೇ ತಿಳಿದು ಬಂದಿಲ್ಲ. ಸ್ಫೋಟಕ ಮತ್ತು ಗನ್ ಎರಡೂ ಬಳಸಿದ್ದರಿಂದ ಭಾರೀ

ವಡೋದರ ಬೇಡ ಎಂದ ಹಾಲಿ ಸಂಸದೆ ರಂಜನಾ ಭಟ್

ಗಜರಾತಿನ ವಡೋದರದಿಂದ ಸ್ಪರ್ಧಿಸಲು ಟಿಕೆಟ್ ಪಡೆದಿದ್ದ ಹಾಲಿ ಸಂಸದೆ ರಂಜನಾ ಭಟ್ ಅವರು ತಾನು ಸ್ಪರ್ಧಿಸುವುದಿಲ್ಲ ಎಂದು ಸ್ಪರ್ಧೆಯಿಂದ ಹಿಂದೆ ಸರಿದಿದ್ದಾರೆ. 2014ರಲ್ಲಿ ಪ್ರಧಾನಿ ಮೋದಿಯವರು ಎರಡು ಕಡೆ ಸ್ಪರ್ಧಿಸಿದ್ದರಿಂದ ವಡೋದರಕ್ಕೆ ಮರು ಚುನಾವಣೆ ನಡೆದಿತ್ತು. ಆಗ ಗೆದ್ದಿದ್ದ ರಂಜನಾ ಭಟ್ 2019ರಲ್ಲೂ ಗೆದ್ದಿದ್ದರು ಮತ್ತು ಈ ಬಾರಿಯೂ ಟಿಕೆಟ್ ಪಡೆದಿದ್ದರು. ಆದರೆ ಅವರನ್ನು ವಿರೋಧಿಸಿ ಬ್ಯಾನರ್‌ಗಳನ್ನು ಹಾಕಲಾಗಿತ್ತು. ಮಹಿಳಾ ವಿಭಾಗದ ಜ್ಯೋತಿ ಬೆನ್

ಬರ ಪರಿಹಾರ ನೀಡದ ಕೇಂದ್ರ ಸರಕಾರ: ಸುಪ್ರೀಂ ಕೋರ್ಟಿನಲ್ಲಿ ಕರ್ನಾಟಕದ ಅರ್ಜಿ

ಬರಗಾಲದಿಂದಾಗಿ 48 ಲಕ್ಷ ಹೆಕ್ಟೇರ್ ಬೆಳೆ ನಾಶವಾಗಿದೆ. ಆದರೆ ಕೆಂದ್ರ ಸರಕಾರವು ತಾರತಮ್ಯ ನೀತಿ ಅನುಸರಿಸುತ್ತ ಪರಿಹಾರ ನೀಡುತ್ತಿಲ್ಲ ಎಂದು ರಾಜ್ಯ ಸರಕಾರದ ಪರವಾಗಿ ಸುಪ್ರೀಂ ಕೋರ್ಟಿನಲ್ಲಿ ಅರ್ಜಿ ಸಲ್ಲಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಿಳಿಸಿದರು. ಅವರು ಈ ನಿಟ್ಟಿನಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ಪತ್ರಿಕಾಗೊಟ್ಟಿ ನಡೆಸಿ ಮಾಹಿತಿ ನೀಡಿದರು. ಬರಗಾಲದಲ್ಲಿ ಎನ್‌ಡಿಆರ್‌ಎಫ್/ಎಸ್‌ಡಿಆರ್‌ಎಫ್ ಎಷ್ಟು ಪರಿಹಾರ ನೀಡಬೇಕು ಎಂದು ಕ್ರಮ ನಿಯಮ ಇದೆ.

ವಿಟ್ಲ: ಎರಡು ಅಂಗಡಿಗಳಿಗೆ ಕನ್ನ

ವಿಟ್ಲ: ವಿಟ್ಲ ಪೇಟೆ ಎರಡು ಅಂಗಡಿಗಳಿಗೆ, ವಿಟ್ಲದ ಮೇಗಿನ ಪೇಟೆಯ ಒಂದು ಅಂಗಡಿಗೆ ಶುಕ್ರವಾರ ರಾತ್ರಿ ಕಳ್ಳರು ನುಗ್ಗಿ ಹಣ ಹಾಗೂ ದಿನಸಿ ಸಾಮಾಗ್ರಿ ಕದ್ದೋಯ್ಯಿದಿದ್ದಾರೆ. ಚುನಾವಣೆ ಹಿನ್ನಲೆ ಆಯಕಟ್ಟಿನ ಸ್ಥಳಗಳಲ್ಲಿ ಪೊಲೀಸ್ ನಿಯೋಜನೆಗೊಳಿಸಲಾಗಿದ್ದು, ಅವರು ತಡ ರಾತ್ರಿ ಹೊತ್ತಿನಲ್ಲಿ ಕಾರ್ಯ ನಿರ್ವಹಿಸುತ್ತಿದ್ದರೂ, ಕಳ್ಳರು ಸಲೀಸಾಗಿ ಬಂದು ಕಳ್ಳತನ ನಡೆಸಿ, ಅಷ್ಟೇ ಸಲೀಸಾಗಿ ತಪ್ಪಿಸಿಕೊಂಡಿರುವುದು ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ ವಿಟ್ಲ ಪೊಲೀಸ್

ಕಾಸರಗೋಡು: ಅಂಬಲತ್ತರದಲ್ಲಿ ಪತ್ತೆಯಾದ ಖೋಟಾ ನೋಟು

ಕಾಸರಗೋಡು ಜಿಲ್ಲೆಯ ಕಾಞಾಂಗಾಡ್ ಸಮೀಪ ಅಂಬಲತರ ಪಾರಪಳ್ಳಿ ಗುರುಪುರದ ಬಾಡಿಗೆ ಮನೆಯೊಂದರಲ್ಲಿ ರೂ 2 ಸಾವಿರ ಮುಖಬೆಲೆಯ 7.25 ಕೋಟಿ ರೂ ಪತ್ತೆಯಾಗಿದ್ದು ತನಿಖೆಯ ವೇಳೆ ಇವೆಲ್ಲವೂ ಖೋಟಾ ನೋಟುಗಳು ಎಂದು ತನಿಖೆಯಿಂದ ಸ್ಪಷ್ಟವಾಗಿದೆ ಎನ್ನಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿ ಸುಳ್ಯ ನಿವಾಸಿ ಸುಲೈಮಾನ್ ಸಹಿತ ಹಾಗೂ ಇಬ್ಬರನ್ನು ಪೋಲೀಸರು ವಶಕ್ಕೆ ಪಡೆದಿರುವುದಾಗಿ ತಿಳಿದುಬಂದಿದೆ.ಅಂಬಲತರ ಠಾಣಾ ವ್ಯಾಪ್ತಿಯ ಪೊಲೀಸರು ಈ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ

ಉಡುಪಿ: ಅನಾರೋಗ್ಯ ಪೀಡಿತ ಕುಟುಂಬಕ್ಕೆ ಬೇಕಾಗಿದೆ ಸಹಾಯ ಹಸ್ತ

ಸರಕಾರಿ ಕೆಲಸದಿಂದ ನಿವೃತ್ತಿ ಹೊಂದಿ ಗಂಡನೊಂದಿಗೆ ತನ್ನ ಮುದ್ದಾದ ಮಗುವಿನೊಂದಿಗೆ ಸುಂದರವಾದ ಬದುಕಿನ ಕನಸು ಕಾಣುತ್ತಿದ್ದ ಆ ಮುದ್ದಾದ ಕುಟುಂಬಕ್ಕೆ, ಅದ್ಯಾರ ಕಣ್ಣು ಬಿತ್ತೋ.. ಗೊತ್ತಿಲ್ಲ.! ಬೈಕ್ ಸಾವರನೊಬ್ಬನ ಅತೀವೇಗ , ಅತೀ ಅವಸರ ಇಡೀ ಕುಟುಂಬವನ್ನೇ ಜೀವನಪೂರ್ತಿ ಕಣ್ಣೀರ ಕಡಲಲ್ಲಿ ಕಳೆಯುವಂತೆ ಮಾಡಿದೆ ಈ ಬಗ್ಗೆ ಒಂದು ವಿಶೇಷ ವರದಿ ಇಲ್ಲಿದೆ. ಇವರು ಉಡುಪಿಯ ವೈ ರಮೇಶ್ ಭಟು, ಈ ಹಿಂದೆ ಉಡುಪಿಯ ರೇಷ್ಮೆ ಇಲಾಖೆಯಲ್ಲಿ ಸುಮಾರು 12 ವರ್ಷಗಳ ಕಾಲ ದಿನಗೂಲಿ

ಮಂಗಳೂರು: ಪಂಪ್ವೆಲ್ ಬಳಿ ಭೀಕರ ಅಪಘಾತ

ನಗರದ ಪಂಪ್ವೆಲ್ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಯುವಕನೋರ್ವ ಮೃತಪಟ್ಟ ಘಟನೆ ನಡೆದಿದೆ. ತೊಕ್ಕೊಟ್ಟು ನಿವಾಸಿ ಸಮಿತ್ ಶೆಟ್ಟಿ (30) ಮೃತಪಟ್ಟ ಯುವಕ. ಸಮಿತ್ ಶೆಟ್ಟಿ ಕೊಟ್ಟಾರದಲ್ಲಿರುವ ತನ್ನ ರೂಮ್ ನಿಂದ ಇಂದು ಬೆಳಗ್ಗೆ ತೊಕ್ಕೊಟ್ಟಿಗೆ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ರಾ.ಹೆ. 66ರ ಪಂಪ್ವೆಲ್ ಬಳಿ ಈ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದಿದೆ

ಮೂಡುಬಿದಿರೆಗೆ ಆಗಮಿಸಿದ ಮತದಾನ ಜಾಗೃತಿ ಜಾಥಾ ರಥ

ಮೂಡುಬಿದಿರೆ: ಏ. 26 ರಂದು ನಡೆಯಲಿರುವ ಸಾರ್ವತ್ರಿಕ ಲೋಕಸಭಾ ಚುನಾವಣೆ- 2024 ರ ಪ್ರಯುಕ್ತ ಮತದಾರರಿಗೆ ಜಾಗೃತಿ ಮೂಡಿಸುವ ಸಲುವಾಗಿ ಮತದಾನ‌ ಜಾಗೃತಿ ಜಾಥಾ ರಥವು ಶನಿವಾರ ಮೂಡುಬಿದಿರೆ ತಾಲೂಕು ಪಂಚಾಯತ್ ಗೆ ಆಗಮಿಸಿತು. ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಯವರಾದ ಎಸ್. ವೆಂಕಟಚಲಪತಿ ಜಾಗೃತಿ ರಥವನ್ನು ಸ್ವಾಗತಿಸಿದರು.ಈ ಸಂದರ್ಭದಲ್ಲಿ ತಾಲೂಕು ಪಂಚಾಯತ್ ಸಿಬ್ಬಂದಿ ವರ್ಗ ಹಾಗೂ ಸ್ಥಳೀಯ ಶಾಲೆಯ ಮುಖ್ಯೋಪಾಧ್ಯರು, ಶಿಕ್ಷಕರು ಹಾಜರಿದ್ದರು.ನಂತರ ಮತದಾನ