Home Articles posted by v4team (Page 430)

ಮಣಿಪುರದಲ್ಲಿ ಹಿಂಸಾಚಾರ ಖಂಡಿಸಿ ಉಡುಪಿಯ ಸಮಾನ ಮನಸ್ಕರ ವೇದಿಕೆ ವತಿಯಿಂದ ಕಾಲ್ನಡಿಗೆ ಜಾಥ

ಮಣಿಪುರದಲ್ಲಿ ನಡೆಯುತ್ತಿರುವ ದೌರ್ಜನ್ಯ ಹಾಗೂ ಹಿಂಸಾಚಾರ ಖಂಡಿಸಿ ಆಗಸ್ಟ್ 2ರಂದು ಉಡುಪಿಯ ಸಮಾನ ಮನಸ್ಕರ ವೇದಿಕೆ ವತಿಯಿಂದ ಕಾಲ್ನಡಿಗೆ ಜಾಥ ನಡೆಯಲಿದೆ. ಈ ಬಗ್ಗೆ ಮಾಹಿತಿನೀಡಿದ ಪ್ರಶಾಂತ್ ಜತ್ತನ್ ಮಣಿಪುರದಲ್ಲಿ ಹಿಂಸಚಾರ ಶುರುವಾಗಿ ಸುಮಾರು ಮೂರು ತಿಂಗಳಾಗಿದೆ ,ಸುಮಾರು 114 ಮಂದಿ ಹತ್ಯೆಯಾಗಿದ್ದಾರೆ.ಅರವತ್ತು ಸಾವಿರಕ್ಕೂ ಹೆಚ್ಚು ಜನ ನಿರ್ವಸಿತರಾಗಿದ್ದಾರೆ

ಬಿ.ಕೆ. ಹರಿಪ್ರಸಾದ್ ಅವರಿಗೆ ಸಚಿವ ಸ್ಥಾನ ನೀಡಬೇಕು : ರಾಷ್ಟ್ರೀಯ ಬಿಲ್ಲವ ಈಡಿಗ ಮಹಾಮಂಡಳಿ ಜಿಲ್ಲಾ ಸಮಿತಿ ಆಗ್ರಹ

ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರಾದ ಬಿ.ಕೆ ಹರಿಪ್ರಸಾದ್ ಅವರಿಗೆ ಶೀಘ್ರದಲ್ಲೇ ಸೂಕ್ತ ಸಚಿವ ಸ್ಥಾನ ನೀಡಬೇಕೆಂದು ರಾಷ್ಟ್ರೀಯ ಬಿಲ್ಲವ ಈಡಿಗ ಮಹಾಮಂಡಳಿ ದ.ಕ. ಜಿಲ್ಲಾ ಸಮಿತಿ ಆಗ್ರಹಿಸಿದೆ.ಈ ಬಗ್ಗೆ ನಗರದ ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ರಾಷ್ಟ್ರೀಯ ಬಿಲ್ಲವ ಈಡಿಗ ಮಹಾಮಂಡಳಿಯ ರಾಜ್ಯ ಉಪಾಧ್ಯಕ್ಷ ಜಿತೇಂದ್ರ ಜೆ. ಸುವರ್ಣ ಅವರು, ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವಲ್ಲಿ ಬಿ.ಕೆ ಹರಿಪ್ರಸಾದ್‍ರವರ ಪಾತ್ರವೂ

ಜುಲೈ 31ರಂದು ಜಿಲ್ಲಾ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ

ಮಣಿಪುರ ಹಿಂಸಾಚಾರದ ಬಗ್ಗೆ ಪ್ರಧಾನಿ ಮೌನ, ಪಾರ್ಲಿಮೆಂಟ್‍ಲ್ಲಿ ಅಸಹಕಾರ, ಕೇಂದ್ರ ಸರ್ಕಾರದ ವೈಫಲ್ಯವನ್ನು ಖಂಡಿಸಿ ಜುಲೈ 31ರಂದು ನಗರದ ಲಾಲ್‍ಬಾಗ್‍ನ ಗಾಂಧಿಪ್ರತಿಮೆ ಮುಂಭಾಗದಲ್ಲಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಿದ್ದೇವೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಹೇಳಿದರು. ಅವರು ನಗರದ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ಮಣಿಪುರ ಬಗ್ಗೆ ಲೋಕಸಭೆಯಲ್ಲಿ ವಿಪಕ್ಷಗಳಿಗೆ

ರೈಲಿನಡಿಗೆ ಬೀಳುತ್ತಿದ್ದ ವ್ಯಕ್ತಿಯ ರಕ್ಷಣೆ : ಸಮಯಪ್ರಜ್ಞೆ ಮೆರೆದ ಪೊಲೀಸ್ ಸಿಬ್ಬಂದಿ

ಮಂಗಳೂರಿನ ಸೆಂಟ್ರಲ್ ರೈಲು ನಿಲ್ದಾಣದಲ್ಲಿ ಚಲಿಸುತ್ತಿದ್ದ ರೈಲಿಗೆ ಹತ್ತಲು ಪ್ರಯತ್ನಿಸಿ ರೈಲಿನಡಿಗೆ ಬೀಳುತ್ತಿದ್ದ ವ್ಯಕ್ತಿಯನ್ನು ಪೊಲೀಸ್ ಸಿಬ್ಬಂದಿ ರಕ್ಷಿಸಿ ಸಮಯಪ್ರಜ್ಞೆ ಮೆರೆದ ಘಟನೆ ನಡೆದಿದೆ. ಸೆಂಟ್ರಲ್ ರೈಲು ನಿಲ್ದಾಣದಿಂದ ಗುರುವಾರ ಸಂಜೆ 6.15ರ ವೇಳೆ ಮಲಬಾರ್ ಎಕ್ಸ್‍ಪ್ರೆಸ್ ರೈಲು ಹೊರಡುತ್ತಿದ್ದಾಗ ಶಂಕರ್ ಬಾಬು(70) ಎಂಬ ವ್ಯಕ್ತಿ ರೈಲಿನ ಎಸ್-6 ಕೋಚ್‍ಗೆ ಹತ್ತಲು ಪ್ರಯತ್ನಿಸಿ ಸಾಧ್ಯವಾಗದೆ ಹ್ಯಾಂಡಲ್‍ನಲ್ಲಿ

ಜಿಲ್ಲಾ ಎಸ್ಪಿಯವರ ತನಿಖೆಯಲ್ಲೂ ಬಿಜೆಪಿಗರಿಗೆ ವಿಶ್ವಾಸವಿಲ್ಲ : ಮಾಜಿ ಸಚಿವ ವಿನಯಕುಮಾರ್ ಸೊರಕೆ

ಉಡುಪಿಯಲ್ಲಿ ಶೌಚಾಲಯ ವಿಡಿಯೋ ನಡೆದಿದೆ ಎಂಬ ಪ್ರಕರಣಕ್ಕೆ ಉತ್ತರ ನೀಡ ಬೇಕಾದವರು ಕಾಲೇಜು ಆಡಳಿತ. ಆದರೆ ಆ ಘಟನೆಯನ್ನು ಹಿಜಾಬಿಗೆ ಹೋಲಿಕೆ ಮಾಡಿಕೊಂಡು ಉಡುಪಿ ಶಾಸಕರೇ ಸೇರಿ ಡೊಂಬರಾಟ ನಡೆಸುತ್ತಿದ್ದಾರೆ ಎಂಬುದಾಗಿ ಮಾಜಿ ಸಚಿವ ವಿನಯ ಕುಮಾರ್ ಸೊರಕೆ ವ್ಯಂಗವಾಡಿದ್ದಾರೆ. ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದರು. ಬಿಜೆಪಿ ಆಡಳಿತದಲ್ಲಿರುವ ಸಂದರ್ಭದಲ್ಲೇ ಅವರೇ ಕರೆತಂದ ಜಿಲ್ಲಾ ಎಸ್ಪಿಯವರ ತನಿಖೆಯಲ್ಲೂ ಬಿಜೆಪಿಗರಿಗೆ ವಿಶ್ವಾಸವಿಲ್ಲದಂತಾಗಿದೆ. ಮಹಿಳಾ

ಉಡುಪಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಮಣಿಪುರ ಹಿಂಸಾಚಾರ ಖಂಡಿಸಿ ಪ್ರತಿಭಟನೆ

ಮಣಿಪುರದಲ್ಲಿ ನಡೆದ ಹಿಂಸಾಚಾರವನ್ನು ಖಂಡಿಸಿ ಉಡುಪಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಸುಧೀರ್ ಕುಮಾರ್ ಅವರು, ಮೈಥೇಯಿ-ಕುಕಿ-ನಾಗಾ ಸಮುದಾಯದಲ್ಲಿ ಎಷ್ಟು ಸಂಖ್ಯೆ ಇದೆ ಗೊತ್ತಿಲ್ಲ. ಚುನಾವಣೆ ಉದ್ದೇಶದಿಂದ ಬಿಜೆಪಿ ಸರ್ಕಾರ ಮೈಥೇಯಿ ಪರವಾಗಿ ನಿಂತಿದೆ. ಬಿಜೆಪಿ ಮನುಷ್ಯ ವಿರೋಧಿ ನೀತಿ ಅನುಸರಿಸುತ್ತಿದೆ. ದೇಶದಲ್ಲಿ ದೌರ್ಜನ್ಯ ನಡೆಯುತ್ತಿರುವಾಗ ಮೋದಿ ವಿಶ್ವನಾಯಕನಾಗಲು ಸಾಧ್ಯವಿಲ್ಲ ಎಂದರು. ಇನ್ನು

ಮಣಿಪುರ ಕೃತ್ಯ ಖಂಡಿಸಿ ಕಾಪು ಬ್ಲಾಕ್ ಕಾಂಗ್ರೆಸ್ ವತಿಯಿಂದ ನಡೆದ ಪ್ರತಿಭಟನೆ

ಮಹಿಳೆಯರನ್ನು ಮಾತೆಯರೆನ್ನುವ ಬಿಜೆಪಿ ಸರ್ಕಾರದ ಇನ್ನೊಂದು ಮುಖ ಮಹಿಳೆಯರನ್ನು ಬೆತ್ತಲೆಗೊಳಿಸಿ ಮೆರವಣಿಗೆ ಮಾಡುವುದರ ಮೂಲಕ ಮಣಿಪುರದಲ್ಲಿ ಬಹಿರಂಗಗೊಂಡಿದೆ ಎಂಬುದಾಗಿ ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಹೇಳಿದ್ದಾರೆ. ಅವರು ಬಿಜೆಪಿ ಆಡಳಿತ ನಡೆಸುತ್ತಿರುವ ಮಣಿಪುರ ರಾಜ್ಯದಲ್ಲಿ ನಡೆದ ಪೈಶಾಚಿಕ ಕೃತ್ಯವನ್ನು ವಿರೋಧಿಸಿ ಕಾಪು ಬ್ಲಾಕ್ ಕಾಂಗ್ರೆಸ್ ಕಾಪು ಪೇಟೆಯಲ್ಲಿ ಆಯೋಜಿಸಿದ ಪ್ರತಿಭಟನಾ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನವೀನ್

ಮಂಗಳೂರಿನಲ್ಲಿ ಮಣಿಪುರ ಹಿಂಸಾಚಾರ ಖಂಡಿಸಿ ಕಥೋಲಿಕ್ ಸಭಾದ ನೇತೃತ್ವದಲ್ಲಿ ಪ್ರತಿಭಟನೆ

ಮಣಿಪುರದ ಹಿಂಸಾಚಾರವನ್ನು ನಿಲ್ಲಿಸಿ, ದೌರ್ಜನ್ಯಕ್ಕೆ ಒಳಗಾದವರಿಗೆ ನ್ಯಾಯ ನೀಡಲು ಕೇಂದ್ರ ಸರ್ಕಾರ ವಿಫಲವಾದರೆ ದೆಹಲಿ ಮತ್ತು ಮಣಿಪುರ ಚಲೋ ನಡೆಸಲಾಗುವುದು ಎಂದು ಕರ್ನಾಟಕ ಕ್ರೈಸ್ತ ಸಂಘಟನೆಯ ಅಧ್ಯಕ್ಷ ಸ್ಟ್ಯಾನಿ ಪಿಂಟೊ ಎಚ್ಚರಿಕೆ ನೀಡಿದರು. ಕಥೋಲಿಕ್ ಸಭಾದ ನೇತೃತ್ವದಲ್ಲಿ ಮಂಗಳೂರು ಧರ್ಮಕ್ಷೇತ್ರದ ಮಹಿಳಾ ಆಯೋಗ, ಕ್ರೈಸ್ತ ಐಕ್ಯತೆಯ ಆಯೋಗ, ಮಂಗಳೂರು ಕ್ರಿಶ್ಚಿಯನ್ ಕೌನ್ಸಿಲ್‍ನ ಸಹಭಾಗಿತ್ವಲ್ಲಿ ನಗರದ ಪುರಭವನದ ಎದುರು ನಡೆದ ಪ್ರತಿಭಟನೆಯಲ್ಲಿ ಅವರು

ಶಿಕ್ಷಣ ಇಲಾಖಾ ಕರಾಟೆ ಕ್ರೀಡಾ ಕೂಟದಲ್ಲಿ ಬಂಗಾರದ ಪದಕ ಗಳಿಸಿದ ಆದಿತ್ಯ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ , ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಚೇರಿ , ಮಂಗಳೂರು ಉತ್ತರ ವಲಯ ದ ವತಿಯಿಂದ ತಾಲೂಕು ಮಟ್ಟದ ಪ್ರಾಥಮಿಕ / ಪ್ರೌಢ ಶಾಲಾ ವಿದ್ಯಾರ್ಥಿಗಳ ಕ್ರೀಡಾಕೂಟ 2023 -2024 ಮುಲ್ಕಿಯ ಸಿ . ಯಸ್ . ಐ . ಇ ಶಾಲೆ ಕಾರ್ನಾಡು ಇಲ್ಲಿ ಆಯೋಜಿಸಲಾಗಿದ್ದು . ಇಲಾಖೆಯ ಕರಾಟೆ ಕ್ರೀಡೆಯಲ್ಲಿ ( 62-65 ) ವಿಭಾಗದಲ್ಲಿ ನಗರ ಕೆನರಾ ಉರ್ವಾ ಶಾಲೆಯ 10 ನೇ […]

ಖಾಸಗಿ ವಿಚಾರ ಹರಿದಾಡಿ ದುರ್ಬಳಕೆ ಮಾಡಿದವರಿಗೆ ಶಿಕ್ಷೆ ಆಗಬೇಕು : ಶೋಭಾ ಕರಂದ್ಲಾಜೆ

ಉಡುಪಿಯ ಕಾಲೇಜೊಂದರ ಶೌಚಾಲಯಲ್ಲಿ ನಡೆದ ಶೂಟಿಂಗ್ ಘಟನೆ ದೇಶದ ಗಮನ ಸೆಳೆದಿದೆ. ನಮಗೆ ನಮ್ಮ ವಿದ್ಯಾರ್ಥಿನಿಯರ ರಕ್ಷಣೆ ಮುಖ್ಯವಾಗಿದೆ. ಖಾಸಗಿ ವಿಚಾರ ಹೊರಗಡೆ ಹರಿದಾಡಿ ದುರ್ಬಳಕೆ ಮಾಡಿದವರಿಗೆ ಕಠಿಣ ಶಿಕ್ಷೆ ಆಗಬೇಕು ಎಂದು ಉಡುಪಿ ಚಿಕ್ಕಮಗಳೂರು ಲೋಕಸಭಾ ಸದಸ್ಯೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ಉಡುಪಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಜನಪ್ರತಿನಿಧಿಗಳು ,ಡಿಸಿ, ಎಸ್‍ಪಿಗೆ ವಿದ್ಯಾರ್ಥಿನಿಯರು ಮಾಹಿತಿ ನೀಡಿದ್ದಾರೆ. ಲಂಚ್ ಬ್ರೇಕ್