Home Articles posted by v4team (Page 445)

ಕಡಬದಲ್ಲಿ ಪ್ರಕೃತಿ ವಿಕೋಪದ ಮುನ್ನೆಚ್ಚರಿಕೆ ಕ್ರಮದ ಕುರಿತು ಸಭೆ

ನೆರೆಪೀಡಿತ ಪ್ರದೇಶಗಳನ್ನು ಗುರುತಿಸಿಕೊಂಡು ಅವುಗಳಲ್ಲಿ ಸಮಸ್ಯೆಗಳು ಉದ್ಬವವಾಗದಂತೆ ಮುನ್ನೆಚ್ಚರಿಕೆವಹಿಸುವ ಕಾರ್ಯ ಗ್ರಾಮ ಮಟ್ಟದಿಂದಲೇ ಆಗಬೇಕು ಎಂದು ದ.ಕ. ಜಿಲ್ಲಾಧಿಕಾರಿ ಮುಲೈ ಮುಹಿಲನ್ ಹೇಳಿದರು. ಅವರು ಕಡಬ ತಾಲೂಕು ಸೌಧದಲ್ಲಿ ಪ್ರಕೃತಿವಿಕೋಪ ಮುನ್ನೆಚ್ಚರಿಕೆ ಕ್ರಮವಹಿಸುವ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಗ್ರಾಮ ಮಟ್ಟದಲ್ಲಿಯೇ ಗ್ರಾಮ

ಪ್ರಾಣ ತೆಗೆಯುವ ಸುರತ್ಕಲ್ ಟೋಲ್ ಗೇಟ್ ಗುಂಡಿಗಳು

ಸುರತ್ಕಲ್: ಭಾರೀ ಪ್ರತಿಭಟನೆ, ಹೋರಾಟ ನಡೆದು ಕೊನೆಗೆ ಇಲ್ಲಿನ ಎನ್‍ಐಟಿಕೆ ಬಳಿಯ ಟೋಲ್ ಗೇಟ್ ಅನ್ನು ಮುಚ್ಚಲಾಯ್ತು. ಸುಂಕ ಕೊಡೋ ಕಷ್ಟ ತಪ್ಪಿತು ಎಂದು ವಾಹನ ಸವಾರರು ಖುಷಿ ಏನೋ ಪಟ್ಟರು, ಆದರೆ ಈಗ ಟೋಲ್ ಗೇಟ್ ಪರಿಸರದಲ್ಲಿ ಎದ್ದಿರುವ ಗುಂಡಿಗಳಿಂದಾಗಿ ಹೈರಾಣಾಗಿದ್ದಾರೆ. ಟೋಲ್ ಗೇಟ್ ಎರಡೂ ಕಡೆಗಳಲ್ಲಿ ಹತ್ತಾರು ಗುಂಡಿಗಳು ನಿರ್ಮಾಣಗೊಂಡಿದ್ದು ಅದರಲ್ಲಿ ರಿಕ್ಷಾ, ಕಾರ್, ಬೈಕ್ ಸವಾರರು ಸಂಚರಿಸಲು ಹರಸಾಹಸ ಪಡುವಂತಾಗಿದೆ. ಇಲ್ಲಿ ಈಗಾಗಲೇ ಇಬ್ಬರು

ಉಡುಪಿ ಜಿಲ್ಲಾಧಿಕಾರಿ ವರ್ಗಾವಣೆ

ಉಡುಪಿ ಜಿಲ್ಲಾಧಿಕಾರಿ ಕೂರ್ಮರಾವ್ ಅವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಗುರುವಾರ ಆದೇಶ ಹೊರಡಿಸಿದೆ. ಉಡುಪಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಡಾ. ವಿದ್ಯಾಕುಮಾರಿ ಅವರನ್ನು ನೇಮಿಸಲಾಗಿದೆ. ಈ ಬಗ್ಗೆ, ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ ಹೊರಡಿಸಲಾಗಿದೆ.ವಿದ್ಯಾಕುಮಾರಿ ಅವರು ಈ ಹಿಂದೆ ಉಡುಪಿ ಜಿಲ್ಲೆಯ ಎಡಿಸಿಯಾಗಿ ಸೇವೆ ಸಲ್ಲಿಸಿದ್ದಾರೆ. ಮೂಲತಃ ಉಳ್ಳಾಲ ತಾಲೂಕಿನ ಪಾವೂರು ಗ್ರಾಮದವರಾಗಿರುವ ಡಾ.ವಿದ್ಯಾಕುಮಾರಿ 2014ನೇ ಬ್ಯಾಚ್ ನ ಐಎಎಸ್

ಉಳ್ಳಾಲ : ಪುಣ್ಯಕೋಟಿ ನಗರದಲ್ಲಿ ಬಾರ್ ಓಪನ್‍ಗೆ ಆಕ್ರೋಶ – ಶಾಲಾ ವಿದ್ಯಾರ್ಥಿಗಳಿಂದ ಗ್ರಾ.ಪಂ.ಗೆ ಮುತ್ತಿಗೆ

ಉಳ್ಳಾಲದ ಕೈರಂಗಳ ಪುಣ್ಯಕೋಟಿನಗರದಲ್ಲಿ ನೂತನವಾಗಿ ಆರಂಭವಾದ ಬಾರ್ ಎಂಡ್ ರೆಸ್ಟೋರೆಂಟ್ ತೆರವು ಆಗುವವರೆಗೂ ಪ್ರಜಾಪ್ರಭುತ್ವ ರೀತಿಯಲ್ಲಿ ಅಮರಣಾಂತ ಸತ್ಯಾಗ್ರಹದಂತಹ ಹೋರಾಟ ನಡೆಸಲು ಶಾಲಾಡಳಿತ ಮಂಡಳಿ ಸಿದ್ಧವಿದೆ ಎಂದು ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ರಾಜಾರಾಮ ಭಟ್ ಹೇಳಿದ್ದಾರೆ. ಬಾಳೆಪುಣಿ ಗ್ರಾ.ಪಂ ವ್ಯಾಪ್ತಿಯ ಪುಣ್ಯಕೋಟಿನಗರ ಸಮೀಪದಲ್ಲಿ ನೂತನವಾಗಿ ಆರಂಭವಾದ ಬಾರ್ ಎಂಡ್ ರೆಸ್ಟೋರೆಂಟ್ ವಿರೋಧಿಸಿ ಪುಣ್ಯಕೋಟಿ ನಗರ ಶಾರದಾ ವಿದ್ಯಾಗಣಪತಿ ವಿದ್ಯಾಕೇಂದ್ರದ

ದ.ಕ. ಜಿಲ್ಲೆ – ಅಪರ ಜಿಲ್ಲಾಧಿಕಾರಿಯಾಗಿ ಡಾ. ಸಂತೋಷ್ ಕುಮಾರ್ ಅಧಿಕಾರ ಸ್ವೀಕಾರ

ದಕ್ಷಿಣ ಕನ್ನಡ ಜಿಲ್ಲೆಯ ನೂತನ ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ಡಾ.ಜಿ. ಸಂತೋಷ್ ಕುಮಾರ್ ಅವರು ಅಧಿಕಾರ ವಹಿಸಿಕೊಂಡಿದ್ದಾರೆ. ಈ ಹಿಂದೆ ಹೆಚ್ಚುವರಿ ಜಿಲ್ಲಾಧಿಕಾರಿಯಾಗಿದ್ದ ಕೃಷ್ಣಮೂರ್ತಿ ಅವರು ನಗರಾಭಿವೃದ್ಧಿ ಇಲಾಖೆ ಉಪಕಾರ್ಯದರ್ಶಿ ಹುದ್ದೆಗೆ ವರ್ಗವಾದ ಬಳಿಕ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಉಪನಿರ್ದೇಶಕ ಎನ್‌.ಮಾಣಿಕ್ಯ ಅವರು ಪ್ರಭಾರ ನೆಲೆಯಲ್ಲಿ ಈ ಹೊಣೆ ನಿಭಾಯಿಸುತ್ತಿದ್ದರು.ಸಂತೋಷ್ ಕುಮಾರ್ ಅವರು ಈ ಹಿಂದೆ ಚಿಕ್ಕಬಳ್ಳಾಪುರದಲ್ಲಿ ಉಪ

ಶ್ರೀ ರಾಜಶೇಖರಾನಂದ ಸ್ವಾಮೀಜಿಯವರ ಚಾತುರ್ಮಾಸ್ಯ ಸಂಪನ್ನ

ಪರಮಪೂಜ್ಯ ಶ್ರೀ ಶ್ರೀ ಶ್ರೀ ರಾಜಶೇಖರಾನಂದ ಸ್ವಾಮೀಜಿಯವರ 24ನೇ ಚಾತುರ್ಮಾಸ್ಯವು ಶ್ರೀವಜ್ರದೇಹಿ ಮಠದಲ್ಲಿ ಸಂಪನ್ನಗೊಂಡಿತು. ಪೂಜ್ಯ ಶ್ರೀಗಳು ಮೃತ್ತಿಕಾ ಪೂಜೆಯನ್ನು ನೆರವೇರಿಸಿದರು. ವ್ಯಾಸ ಪೂಜೆ ಮತ್ತು ಪಟ್ಟದ ದೇವರ ಮಹಾ ಪೂಜೆಯನ್ನು ನೆರವೇರಿಸಿದರು. ಅನಂತರ ಭಕ್ತರು ಈ ಸತ್ಕರ್ಮದಲ್ಲಿ ಪಾಲ್ಗೊಂಡಿದ್ದರು.

KSRTC ಪ್ರಭಾರಿ ವ್ಯವಸ್ಥಾಪಕನ ವಿರುದ್ಧ ಪ್ರತಿಭಟನೆ – ತಲೆ ಕೂದಲು ಇಟ್ಟು ಸವಿತಾ ಸಮಾಜದಿಂದ ಪ್ರತಿಭಟನೆ

ಬಸ್ ಡಿಪೋ ಸಿಬ್ಬಂದಿಗಳಿಗೆ ಬೈಯ್ಯುವ ಬರದಲ್ಲಿ ಜಾತಿ ನಿಂದನೆ ಮಾಡಿರುವ ಕೆ.ಎಸ್.ಆರ್.ಟಿ.ಸಿ ಪ್ರಭಾರಿ ವ್ಯವಸ್ಥಾಪಕ. ಜಗನ್ನಾಥ್ ಅವರನ್ನು ಕೂಡಲೇ ಕೆಲಸದಿಂದ ವಜಾಗೊಳಿಸುವಂತೆ ಆಗ್ರಹಿಸಿ ಸವಿತಾ ಸಮಾಜದ ವತಿಯಿಂದ ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಿದರು. ಸಕಲೇಶಪುರದ ಡಿಪೋ ಎದುರು ಮೂಟೆಯಲ್ಲಿ ಕೇಶ ತುಂಬಿಸಿಟ್ಟು ಸವಿತಾ ಸಮಾಜದವರು ಪ್ರತಿಭಟನೆ ನಡೆಸಿದರು. ನಮ್ಮ ಸಮುದಾಯದ ಭಾವನೆಗೆ ಧಕ್ಕೆ ತಂದಿರುವ ತಪ್ಪಿತಸ್ಥ ಅಧಿಕಾರಿಯಾದ ಡಿಪೋ ಪ್ರಭಾರಿ ವ್ಯವಸ್ಥಾಪಕ

ಮಂಗಳೂರು : ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದರೆ ನಿರ್ದಾಕ್ಷಿಣ್ಯ ಕ್ರಮ – ಕಮೀಷನರ್

ಧರ್ಮದ ವಿಚಾರ, ಕೋಮು ಸೌಹಾರ್ದಕ್ಕೆ ಧಕ್ಕೆ ತರುವ ರೀತಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದರೆ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುವುದು ಎಂದು ಪೊಲೀಸ್ ಕಮಿಷನರ್ ಕುಲದೀಪ್ ಜೈನ್ ಎಚ್ಚರಿಸಿದ್ದಾರೆ. ಈಗಾಗಲೇ ಕಳೆದ ಒಂದು ತಿಂಗಳಲ್ಲಿ ಈ ರೀತಿ ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ 21 ಪ್ರಕರಣಗಳನ್ನು ದಾಖಲಿಸಲಾಗಿದೆ. ವಾಟ್ಸಪ್, ಫೇಸ್ಬುಕ್, ಇನ್ ಸ್ಟಾ ಗ್ರಾಮ್, ಟ್ವಿಟರ್ ಇನ್ನಿತರ ಜಾಲತಾಣದಲ್ಲಿ ಪೋಸ್ಟ್ ಹಾಕುವ ಬಗ್ಗೆ ಪೊಲೀಸ್ ಇಲಾಖೆ ನಿಗಾ ಇಡುತ್ತದೆ.

Mangaluru : ರಾಹುಲ್ ಗಾಂಧಿ ವಿರುದ್ಧ ದ್ವೇಷ ರಾಜಕಾರಣ ಆರೋಪ – ಕಾಂಗ್ರೆಸ್ ವತಿಯಿಂದ ಪ್ರತಿಭಟನೆ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ವಿರುದ್ಧ ಬಿಜೆಪಿ ದ್ವೇಷ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ಪಕ್ಷದ ವತಿಯಿಂದ ನಗರದಲ್ಲಿ ಮೌನ ಪ್ರತಿಭಟನೆ ನಡೆಯುತ್ತಿದೆ. ಮಂಗಳೂರು ದಕ್ಷಿಣ ಬ್ಲಾಕ್ ಕಾಂಗ್ರೆಸ್ ಸಮಿತಿ ಮತ್ತು ಮಂಗಳೂರು ನಗರ ಸಮಿತಿಯ ನೇತೃತ್ವದಲ್ಲಿ ನಗರದ ಪುರಭವನದ ಎದುರಿನ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಯುತ್ತಿದೆ. ಮಾಜಿ ಶಾಸಕ ಜೆ.ಆರ್.ಲೋಬೊ ನೇತೃತ್ವದಲ್ಲಿ ನಡೆಯುತ್ತಿರುವ ಮಹಾತ್ಮ ಗಾಂಧಿ ಪ್ರತಿಮೆಗೆ ಹಾರಾರ್ಪಣೆ ಮಾಡುವ ಮೂಲಕ

ಕೊಲ್ಲೂರು : ಮಾನಸಿಕ ಅಸ್ವಸ್ಥ ಮಹಿಳೆಗೆ ಪುನರ್ವಸತಿ ಕಲ್ಪಿಸಿದ ಪೊಲೀಸರು

ಮಾನಸಿಕ ಅಸ್ವಸ್ಥ ಮಹಿಳೆಯೊಬ್ಬರು ಕೊಲ್ಲೂರಿನ ಸಲಗೇರಿ ಎಂಬಲ್ಲಿ ತಿರುಗಾಡುತ್ತಿದ್ದು, ಇದನ್ನು ಮನಗಂಡ ಸ್ಥಳೀಯರು ಠಾಣೆಗೆ ದೂರು ನೀಡಿದ್ದಾರೆ. ಬಳಿಕ ಆಕೆಯನ್ನು ಮಂಜೇಶ್ವರದ ಪುನರ್ವಸತಿ ಕೇಂದ್ರಕ್ಕೆ ಕಳುಹಿಸಲಾಯಿತು. ಮಹಿಳೆ ತಿರುಗಾಡುತ್ತಿದ್ದ ವಿಚಾರವನ್ನು ಸ್ಥಳೀಯರು ಮತ್ತು ರಿಕ್ಷಾ ಚಾಲಕರು ಕೊಲ್ಲೂರು ಟಾಣೆಗೆ ದೂರು ನೀಡಿದ್ದಾರೆ. ಕೂಡಲೇ ಸ್ಪಂದಿಸಿದ ಪಿಎಸ್‍ಐ ಜಯಶ್ರೀ ಹನ್ನೂರ ಹಾಗೂ ಸುಧಾರಾಣಿ ಅವರ ಗಮನಕ್ಕೆ ತಂದರು. ನಂತರ ಮಹಿಳೆಗೆ ಭದ್ರತೆಯನ್ನು