ಸಣ್ಣ ನೀರಾವರಿ ಇಲಾಖೆಯ 33ಲಕ್ಷ ರೂಪಾಯಿ ವೆಚ್ಚದ ಹೊಳೆದಂಡೆ ನಿರ್ಮಾಣ ಕಾಮಗಾರಿ ಅವೈಜ್ಞಾನಿಕವಾದ ಫಲವಾಗಿ ಕುಸಿದಿದ್ದು, ಜನರ ತೆರಿಗೆಯ ಹಣ ಗುತ್ತಿಗೆದಾರನ ನಿರ್ಲಕ್ಷ್ಯದಿಂದಾಗಿ ನೀರು ಪಾಲಾಗಿದೆ. ಪಡುಬಿದ್ರಿ ಗ್ರಾ.ಪಂ. ವ್ಯಾಪ್ತಿಯ ಪಾದೆಬೆಟ್ಟು ವಿಷ್ಣುಮೂರ್ತಿ ದೇವಳದ ಬಳಿಯಲ್ಲಿ ಹರಿಯುತ್ತಿರುವ ಕಾಮಿನಿ ಹೊಳೆಗೆ ದಂಡೆ ನಿರ್ಮಾಣ ನಡೆಸುವ ಜನ ಬೇಡಿಕೆ ಇಂದು
ಸಮರ್ಪಕ ಚರಂಡಿ ವ್ಯವಸ್ಥೆ ಇಲ್ಲದೆ ರಸ್ತೆಯಲ್ಲಿ ನೀರು ಹರಿದು ಹೋಗುವ ಅನಿವಾರ್ಯ ಸ್ಥಿತಿ ನಿರ್ಮಾಣವಾಗಿದೆ. ಪಡುಬಿದ್ರಿಯ ಕೆಳಗಿನ ಪೇಟೆ ರಸ್ತೆ ಕೆರೆಯ ರೂಪತಾಳಿದೆ. ಪಡುಬಿದ್ರಿಯ ಮಹಾಲಿಂಗೇಶ್ವರ ಮಹಾಗಣಪತಿ ಗ್ರಾಮ ದೇಗುಲದ ಅಂಗಣದ ಒಳಗೂ ಕೆಸರು ನೀರು ನುಗ್ಗಿದ್ದು, ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷ್ಯದ ವಿರುದ್ಧ ಜನ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ರಾಷ್ಟ್ರೀಯ ಹೆದ್ದಾರಿ 66 ಬಂಟರ ಭವನದ ಬಳಿ ತೀರ ಸಪೂರವಾದ ಪೈಪ್ ಹಾಕಿದ ಪರಿಣಾಮ ಹಾಗೂ ಪಕ್ಕದ
ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಪುತ್ತೂರು ಘಟಕ ಇವರ ಆಶ್ರಯದಲ್ಲಿ ಬಿಲ್ಲವ ವಧು-ವರಾನ್ವೇಷಣೆ ಕಾರ್ಯಕ್ರಮವು ಜುಲೈ 9ರಂದು ಪುತ್ತೂರು ಬಪ್ಪಳಿಗೆಯ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಸಭಾಭವನದಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ಜುಲೈ 9ರ ಭಾನುವಾರದಂದು ಬೆಳಿಗ್ಗೆ ಪುತ್ತೂರು ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘದ ಅಧ್ಯಕ್ಷರಾದ ಸತೀಶ್ ಕುಮಾರ್ ಕೆಡೆಂಜಿ ಅವರು ಉದ್ಘಾಟಿಸಲಿದ್ದಾರೆ. ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು
ಉಡುಪಿ ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಹಲವೆಡೆ ಪ್ರವಾಹ ಉಂಟಾಗಿದೆ. ನಗರದಲ್ಲಿ ಕಲ್ಸಂಕ, ಬೈಲಕೆರೆ, ಬನ್ನಂಜೆ ಗರಡಿ ರಸ್ತೆ, ಕುಂಜಿಬೆಟ್ಟು ಭಾಗದಲ್ಲಿ ನೆರೆ ಸೃಷ್ಟಿಯಾಗಿ ಜನ ಜೀವನ ಅಸ್ತವ್ಯಸ್ತಗೊಂಡಿದೆ. ಅಪಾಯದಲ್ಲಿ ಸಿಲುಕಿದ್ದ 15ಕ್ಕೂ ಅಧಿಕ ಕುಟುಂಬಗಳನ್ನು ಸುರಕ್ಷಿತ ಸ್ಥಳಕ್ಕೆ ಕರೆದೊಯ್ಯಲಾಗಿದೆ. ಕೃಷ್ಣಮಠ ಬಳಿ ಬೈಲಕೆರೆ ಪ್ರದೇಶದಲ್ಲಿ ಏಳೆಂಟು ಮನೆಗಳ ಕುಟುಂಬಗಳನ್ನು ಸುರಕ್ಷಿತ ಸ್ಥಳಕ್ಕೆ ಕಳುಹಿಸಿಕೊಡಲಾಗಿದೆ. ಬನ್ನಂಜೆ-ಗರಡಿ ರಸ್ತೆ
ಬಿಲ್ ವಿಚಾರದಲ್ಲಿ ಹೆಜಮಾಡಿ ಟೋಲ್ ಬಳಿಯ ಹೈವೇ ಕ್ಯಾಂಟೀನ್‍ನಲ್ಲಿ ಕಾರ್ಮಿಕರೊರ್ವರಿಗೆ ಹಿಗ್ಗಾಮುಗ್ಗ ಥಳಿಸಿದ ಅಮಾನವೀಯ ಘಟನೆ ನಡೆದಿದೆ. ಥಳಿಸಿದ ದೃಶ್ಯ ಸಿಸಿ ಕ್ಯಾಮರದಲ್ಲಿ ಸೆರೆಯಾಗಿದೆ. ಕಳೆದ ಮೂರು ವರ್ಷಗಳಿಂದ ಇದೇ ಕ್ಯಾಂಟೀನ್ ನಲ್ಲಿ ದುಡಿಯುತ್ತಿದ್ದ ಎರ್ಮಾಳು ನಿವಾಸಿ ಸಂತೋಷ್ ಕುಮಾರ್ ಎಂಬವರೇ ಹಲ್ಲೆಗೊಳಗಾದವರು. ತಡರಾತ್ರಿ ಐವರ ತಂಡವೊಂದು ಬಿಯಾರ್ ಬಾಟಲಿ ಕೈಯಲ್ಲಿ ಹಿಡಿದುಕೊಂಡು ಬಂದು ಉಪಹಾರ ಸೇವಿಸಿದ ಬಳಿಕ ಬಿಲ್ ವಿಚಾರದಲ್ಲಿ ತಗಾದೆ ತೆಗೆದು
ಮಂಗಳೂರು, :- ನಗರದಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಜು. 5ರ ಬುಧವಾರ ನಗರ ಪ್ರದಕ್ಷಿಣೆ ಕೈಗೊಂಡಿದ್ದರು.ನಗರದ ಪಂಪ್ವೆಲ್, ಉಜ್ಜೋಡಿ, ಗೋರಿಗುಡ್ಡೆ, ಎಕ್ಕೂರು, ನೇತ್ರಾವತಿ ಬ್ರಿಡ್ಜ್, ನಂತೂರು, ಕೆಪಿಟಿ ವೃತ್ತ ಸೇರಿದಂತೆ ವಿವಿಧೆಡೆ ಸಂಚರಿಸಿ, ಮಳೆಯಿಂದ ಉದ್ಬವಿಸಿದ ಪರಿಸ್ಥಿತಿಯನ್ನು ಪರಿಶೀಲಿಸಿದರು. ಈ ಸಂದರ್ಭದಲ್ಲಿ ಮಂಗಳೂರು ಮಹಾನಗರ ಪಾಲಿಕೆ ಇಂಜಿನಿಯರ್‌ಗಳು ಸೇರಿದಂತೆ ಇತರೆ ಅಧಿಕಾರಿಗಳು
*ಮಂಗಳೂರು, :- ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲೂಕು ಸುರತ್ಕಲ್ ಹೋಬಳಿ ಕುಳಾಯಿ ಗ್ರಾಮದ ಸಂತೋಷ್ (34 ವರ್ಷ) ಜು.5ರ ಬುಧವಾರ ಬೆಳಿಗ್ಗೆ ಬೈಕಂಪಾಡಿಯಲ್ಲಿರುವ ಸೋಲಾರ್ ಕಂಪೆನಿಗೆ ಮನೆಯಿಂದ ಕೆಲಸಕ್ಕೆ ತೆರಳುವಾಗ ಮರ ಬಿದ್ದು ದಾರಿ ಬಂದ್ ಆದ ಕಾರಣ ಕಂಪೌಂಡ್ ಹಾರಲು ಯತ್ನಿಸಿದಾಗ ಮರದೊಂದಿಗೆ ಬಿದ್ದ ವಿದ್ಯುತ್ ದೀಪದ ತಂತಿ ತಗುಲಿ ಮರಣ ಹೊಂದಿರುತ್ತಾರೆ.ಈ ಬಗ್ಗೆ ಮಂಗಳೂರು ತಹಶೀಲ್ದಾರರು ವರದಿ ಸಲ್ಲಿಸಿರುತ್ತಾರೆ.ಮೃತರ ವಾರಸುದಾರರಿಗೆ ಮೆಸ್ಕಾಂ ಇಲಾಖಾ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅತಿಹೆಚ್ಚು ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಜು.6ರ ಗುರುವಾರ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ ಪ್ರಾಥಮಿಕ & ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು, ಸರ್ಕಾರಿಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಅವರು ರಜೆ ಘೋಷಿಸಿದ್ದಾರೆ
ಸೋಲು- ಗೆಲುವು ಎಲ್ಲಾ ರಂಗಗಳಲ್ಲಿಯೂ ಸಹಜ, ಸೋತಾಗ ಕುಗ್ಗದೆ, ಗೆದ್ದಾಗ ಹಿಗ್ಗದೆ ಎರಡನ್ನೂ ಸಮಾನವಾಗಿ ಸ್ವೀಕರಿಸುವ ಮೂಲಕ, ಸೋಲಿನ ಪರಾಮರ್ಶೆ ನಡೆಸಿ ಎಲ್ಲಿ ಎಡವಿದ್ದೇವೆಯೋ ಅಲ್ಲಿ ಎಚ್ಚೆತ್ತು ಕ್ರೀಡಾಸ್ಪೂರ್ತಿಯೊಂದಿಗೆ ಇನ್ನಷ್ಟು ಬಲಿಷ್ಠವಾಗಿ ಸಂಘಟನಾತ್ಮಕ ಕಾರ್ಯಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ಪಕ್ಷ ಬಲವರ್ಧನೆಗೆ ಪಣ ತೊಡೋಣ ಎಂದು ಮಾಜಿ ಸಚಿವರಾದ ವಿನಯ್ ಕುಮಾರ್ ಸೊರಕೆಯವರು ಕಾರ್ಯಕರ್ತರಿಗೆ ಕರೆ ನೀಡಿದರು. ಅವರು ಕಾಪು
ಉಳ್ಳಾಲ: ಮಳೆ ನೀರಿಗೆ ಬಿದ್ದು ಸಾವನ್ನಪ್ಪಿದ ಸೋಮೇಶ್ವರ ಪಿಲಾರು ಬಳಿಯ ಬಾಡಿಗೆ ಮನೆ ನಿವಾಸಿ ಸುರೇಶ್ ಗಟ್ಟಿ (52) ಕುಟುಂಬಸ್ಥರಿಗೆ ಪ್ರಾಕೃತಿಕ ವಿಕೋಪದಡಿ ರೂ.5 ಲಕ್ಷ ಪರಿಹಾರವನ್ನು ಕಂದಾಯ ಇಲಾಖೆಯು ಖಜಾನೆ 2 ಮುಖೇನ ನೀಡಿದೆ. ಘಟನಾ ಸ್ಥಳಕ್ಕೆ ತಹಶೀಲ್ದಾರ್ ಪ್ರಭಾಕರ್ ಖರ್ಜುರೆ,. ಕಂದಾಯ ನಿರೀಕ್ಷಕರು ಮಂಜುನಾಥ್ ಕೆ.ಹೆಚ್, ಪುರಸಭೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತರ ಶವಮಹಜರು ವರದಿಯನ್ನು ಸಂಗ್ರಹಿಸಿ, ಮೃತ ಪ್ರಮಾಣ ಪತ್ರವನ್ನು




























