ಉಳ್ಳಾಲ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯಾರ್ಭಟ ಮುಂದುವರೆದಿದ್ದು ಉಳ್ಳಾಲ ತಾಲೂಕಿನ ಸೋಮೇಶ್ವರ ಪುರಸಭಾ ವ್ಯಾಪ್ತಿಯ ಪಿಲಾರು ಎಂಬಲ್ಲಿ ಮನೆ ಸಂಪರ್ಕದ ಮೋರಿ ದಾಟುವ ಸಂದರ್ಭ ವ್ಯಕ್ತಿಯೋರ್ವರು ಆಯ ತಪ್ಪಿ ಬಿದ್ದು ಮಳೆ ನೀರಿಗೆ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ. ಸೋಮೇಶ್ವರ ಪುರಸಭಾ ವ್ಯಾಪ್ತಿಯ ಪಿಲಾರು ಪಂಜಂದಾಯ ದೈವಸ್ಥಾನದ ಬಳಿಯ ಬಾಡಿಗೆ ಮನೆ ನಿವಾಸಿ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಜು. 5 ರವರೆಗೆ ರೆಡ್ ಅಲಟ್೯ ಘೋಷಣೆಯಾಗಿರುವ ಕಾರಣ, ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿಪೂರ್ವ ಕಾಲೇಜು, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳಿಗೆ ಜು.5ರ ಬುಧವಾರ ರಜೆ ಘೋಷಿಸಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಜಿಲ್ಲಾ ವಿಪತ್ತು
ಮೂಡುಬಿದಿರೆ: ಇಲ್ಲಿನ ಪುರಸಭೆ ವ್ಯಾಪ್ತಿಯ ಸುವರ್ಣನಗರ ನಿವಾಸಿ ಯುವಕನೊಬ್ಬ ಸೋಮವಾರ ರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆಮೂಡುಬಿದಿರೆ ಶ್ರೀ ಮಹಾವೀರ ಕಾಲೇಜು ಬಳಿಯ ಸುವರ್ಣನಗರ ನಿವಾಸಿ ಸುರೇಶ್ ಎಂಬವರ ಪುತ್ರ ಸುಮಂತ್ (21ವ) ಆತ್ಮಹತ್ಯೆ ಮಾಡಿಕೊಂಡ ಯುವಕ. ಕೌಟುಂಬಿಕ ವಿಚಾರಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರಬೇಕೆಂದು ಶಂಕಿಸಲಾಗಿದೆ.
ಕರಾವಳಿ ಭಾಗದಲ್ಲಿ ಮುಂದಿನ ಕೆಲವು ಗಂಟೆಗಳ ಕಾಲ ಧಾರಕಾರವಾಗಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜು.4 ರ ಇಂದು ಮಧ್ಯಾಹ್ನದಿಂದ ಜು.5 ರ ಬೆಳಗ್ಗೆ 8.30ರವರೆಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಜು.4ರ ಮಧ್ಯಾಹ್ನ ಬಳಿಕ ಮುಂದಿನ ಕೆಲವು ಗಂಟೆಗಳ ಕಾಲ ಬಲವಾದ ಮೇಲ್ಮೈ ಮಾರುತಗಳು ಬೀಸಲಿದ್ದು, ಗುಡುಗು ಮತ್ತು ಮಿಂಚು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆಯಿರುವುದರಿಂದ ರೆಡ್ ಅಲರ್ಟ್
ಬೈಂದೂರಿನ ವಂಡ್ಸೆ ಗ್ರಾಮ ಪಂಚಾಯತ್ ಹಳೆ ಎಸ್‍ಎಲ್‍ಆರ್‍ಎಂ ಘಟಕದಲ್ಲಿರುವ ಕಸ ವಿಲೇವಾರಿ ಮಾಡದೆ ಇರುವುದರಿಂದ ಗಬ್ಬು ನಾರುತ್ತಿದೆ. ಪರಿಸರದಲ್ಲಿರುವ ಶಾಲಾ ಮಕ್ಕಳಿಗೆ ತೊಂದರೆ ಆಗಿದ್ದು, ಕಸವನ್ನು ವಿಲೇವಾರಿ ಮಾಡುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ. ವಂಡ್ಸೆ ಅಂಗನವಾಡಿ ಕೇಂದ್ರ ಮತ್ತು ಸರಕಾರಿ ಶಾಲೆ ಬಳಿ ಇದ್ದ ಹಳೆ ಎಸ್‍ಎಲ್‍ಆರೆಂ ಘಟಕವನ್ನು ಜನತಾ ಕಾಲೋನಿ ಬಳಿ ನಿರ್ಮಿಸಿದ ಹೊಸ ಎಸ್‍ಎಲ್‍ಆರೆಂ
ಬೈಂದೂರು ಕ್ಷೇತ್ರದ ಪಡುವರಿ ಗ್ರಾಮದ ಸೋಮೇಶ್ವರ ಬೀಚ್‍ಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಬರುತ್ತಿದ್ದಾರೆ. ಆ ಹಿನ್ನೆಲೆಯಲ್ಲಿ ಬೀಚ್‍ಗೆ ಮೂಲ ಸೌಕರ್ಯ ಒದಗಿಸುವಂತೆ ಜನತೆ ಆಗ್ರಹಿಸುತ್ತಿದ್ದಾರೆ. ಸರಿಸುಮಾರು 2ಕಿಮೀ ಅಂತರದಲ್ಲಿ ಅಗಾಧ ಸೌಂದರ್ಯವಿದೆ. ಬೀಚ್ ಸೌಂದರ್ಯ ಆಕರ್ಷಕ. ತೀರದಿಂದ 300ಮೀಟರ್ ಅಂತರದವರೆಗೆ ಆಳವಿಲ್ಲ. ತೀರದ ಉದ್ದಕ್ಕೂ ಪ್ರಾಕೃತಿಕ ಕಲ್ಲುಬಂಡೆಗಳು ಹರಡಿಕೊಂಡಿದೆ. ಮಂದಗತಿಯಲ್ಲಿ ಬಂದು ಬಂಡೆಗೆ ಅಪ್ಪಳಿಸಿ ಹಿಂದಿರುಗುವ
ಸುಳ್ಯ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೃಷ್ಣಪ್ಪ.ಜಿ ಅವರ ವಿರುದ್ದ ಕೆಲಸ ಮಾಡಿದ ಆರೋಪದಲ್ಲಿ ಪಕ್ಷದಿಂದ ಉಚ್ಚಾಲಿಸಲ್ಪಟ್ಟ ಕಾಂಗ್ರೆಸ್ ಮುಖಂಡರು ಇದೀಗ ದೈವದ ಮೊರೆ ಹೋಗಿದ್ದಾರೆ. ಪ್ರಸಿದ್ದ ಕಾರಣಿಕ ಕ್ಷೇತ್ರ ಕೋಡಿಂಬಾಳ ಗ್ರಾಮದ ಮಜ್ಜಾರು ರಾಜನ್ ದೈವದ ಸಾನಿಧ್ಯಕ್ಕೆ ಭೇಟಿ ನೀಡಿದ ಕಾಂಗ್ರೆಸ್ ಮುಖಂಡರಾದ ಬಾಲಕೃಷ್ಣ ಬಳ್ಳೇರಿ, ಸುಧೀರ್ ದೇವಾಡಿಗ, ಉಷಾ ಆಂಚನ್ ನೆಲ್ಯಾಡಿ, ಆಶಾ ಲಕ್ಷ್ಮಣ್ ಗುಂಡ್ಯ ಅವರುಗಳು ದೈವಗಳ ಎದುರು ಪ್ರಾರ್ಥಿಸಿಕೊಂಡಿದ್ದಾರೆ.
ಬೀಸಿದ ಭಾರೀ ಗಾಳಿ ಮಳೆಗೆ ಪಡುಬಿದ್ರಿ ಬೀಚ್ ಪಕ್ಕದ ಕಾಡಿಪಟ್ಣ ಶಂಕರ ಎಮ್.ಅಮೀನ್ ಮನೆ ಬಳಿ ಸುಮಾರು 50 ಮೀ. ಭಾಗದಲ್ಲಿ ಕಡಲ್ಕೊರೆತವುಂಟಾಗಿದ್ದು, ಸೊತ್ತು ಇನ್ನಷ್ಟು ಕಡಲು ಪಾಲಾಗುವ ಸಾಧ್ಯತೆ ಇದೆ. ಕಡಲಿ ತಡಿಗೆ ಅಪ್ಪಳಿಸುತ್ತಿರುವ ಅಬ್ಬರದ ತೆರೆಗಳಿಗೆ ಈಗಾಗಲೇ 4 ತೆಂಗಿನ ಮರಗಳು, ಪಡುಬಿದ್ರಿ ಬೀಚ್ ಅಭಿವೃದ್ಧಿ ಕಾಮಗಾರಿಯ ಭಾಗವಾಗಿರುವ ಒಂದು ಬೃಹತ್ ವಿದ್ಯುತ್ ಕಂಬವು ನೆಲಕಚ್ಚಿದೆ. ಇಲ್ಲಿನ ಅಭಿವೃದ್ಧಿ ಕಾಮಗಾರಿಯ ವೇಳೆ ಹಾಸಲಾಗಿದ್ದ ಹಾಲೋ ಬ್ಲಾಕ್ಸ್ ಅಂಗಳದ
ಪುರಸಭಾ ವ್ಯಾಪ್ತಿಯ ತೆಂಕಪೇಟೆಯಲ್ಲಿ ಮನೆಯೊಂದು ಕುಸಿದು ಬಿದ್ದು ಲಕ್ಷಾಂತರ ರೂಪಾಯಿ ನಷ್ಟ ಉಂಟಾಗಿದೆ. ಕಾಪು ತೆಂಕಪೇಟೆ ನಿವಾಸಿ ವಿಜಯಲಕ್ಷ್ಮಿ ಕಾಮತ್ ಅವರಿಗೆ ಸೇರಿದ ಹಳೆ ಹೆಂಚಿನಮನೆ ಭಾರೀ ಮಳೆಗೆ ಸಂಪೂರ್ಣ ಕುಸಿದು ಬಿದ್ದಿದೆ. ಮನೆಯಲ್ಲಿ ಯಾರೂ ವಾಸಿಸುತ್ತಿಲ್ಲವಾಗಿದ್ದು ಇದರಿಂದಾಗಿ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ .
ದಾರಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೋರ್ವ ಆಕಸ್ಮಿಕವಾಗಿ ಕಾಲು ಜಾರಿ ತೋಡಿಗೆ ಬಿದ್ದು ಮೃತಪಟ್ಟ ಘಟನೆ ಉಡುಪಿ ಜಿಲ್ಲೆಯ ಬೀಡಿನಗುಡ್ಡೆಯ ನಾಗಬನದ ಬಳಿ ನಡೆದಿದೆ. ಮೃತ ವ್ಯಕ್ತಿಯನ್ನು ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ 38 ವರ್ಷದ ಸೋಮಪ್ಪ ರಾಠೋಡ್ ಎಂದು ಗುರುತಿಸಲಾಗಿದೆ. ಇಂದು ಬೆಳಿಗ್ಗೆ ಸ್ಥಳೀಯರು ಮೃತದೇಹವನ್ನು ತೋಡಿನಿಂದ ಮೇಲಕೆತ್ತಿದರು. ಸಮಾಜ ಸೇವಕ ನಿತ್ಯಾನಂದ ಒಳಕಾಡು ಅವರು ಮೃತದೇಹವನ್ನು ಜಿಲ್ಲಾಸ್ಪತ್ರೆಗೆ ಸಾಗಿಸಲು ನೆರವಾದರು. ಈ




























