ಉಳ್ಳಾಲ: ಆಂಬ್ಯುಲೆನ್ಸ್ ಢಿಕ್ಕಿ ಹೊಡೆದು ಪಾದಚಾರಿ ಸಾವನ್ನಪ್ಪಿದ ಘಟನೆ ತಲಪಾಡಿ ಮರೋಳಿ ಬಾರ್ ಎದುರುಗಡೆ ಸಂಭವಿಸಿದೆ. ಕಾಸರಗೋಡು ಮಂಗಲ್ಪಾಡಿ ಹೇರೂರು ನಿವಾಸಿ ಫ್ರಾನ್ಸಿಸ್ ಡಿಸೋಜ (62) ಮೃತರು. ಮನೆಯಿಂದ ತಲಪಾಡಿಗೆ ಬಂದಿದ್ದ ಫ್ರಾನ್ಸಿಸ್, ಮರೋಳಿ ಬಾರ್ ಎದುರುಗಡೆಯಿಂದ ವಾಪಸ್ಸು ಮನೆಗೆ ತೆರಳಲು ರಾಷ್ಟ್ರೀಯ ಹೆದ್ದಾರಿಯನ್ನು ದಾಟುವ ಸಂದರ್ಭ ಕೇರಳದಿಂದ ಮಂಗಳೂರು
ಎಸ್.ಡಿ.ಎಮ್ ಪದವಿ ಮತ್ತು ಸ್ನಾತಕೋತ್ತರ ಕೇಂದ್ರದ ನಿವೃತ್ತ ಸಿಬ್ಬಂದಿ ಸಾಧಕ ಭೋಧಕರು ಮತ್ತು ವಿದ್ಯಾರ್ಥಿಗಳಿಗೆ ಸಂಸ್ಥೆಯ ಅಧ್ಯಕ್ಷರು, ಧರ್ಮಸ್ಥಳದ ಧರ್ಮಧಿಕಾರಿಗಳೂ ಆದ ಡಾ. ಡಿ. ವೀರೆಂದ್ರ ಹೆಗಡೆ ಸನ್ಮಾನಿಸಿದರು. ಇತ್ತೀಚೆಗೆ ನಿವೃತ್ತರಾದ ವಿಶ್ರಾಂತ ಪ್ರಾಂಶುಪಾಲರಾಧ ಡಾ. ಸತೀಶ್ಚಂದ್ರ ಎಸ್, ಡಾ. ಉದಯ ಚಂದ್ರ ಪಿ, ಡಾ. ಜಯಕುಮಾರ್ ಶೆಟ್ಟಿ, ನಿವೃತ್ತ ಪ್ರಾಧ್ಯಾಪಕರಾದ ಡಾ. ಕೆ.ವಿ. ನಾಗರಾಜಪ್ಪ, ಪ್ರೊ. ಅಜಯ್ ಕೊಂಬ್ರಬೈಲು, ಡಾ. ಶಂಕರ್ ನಾರಾಯಣ, ಡಾ. ಬಿ.ಪಿ
ಸುಳ್ಯ ತಾಲೂಕಿನ ಶಾಸಕಿ ಭಾಗೀರಥಿ ಮುರುಳ್ಯ ಅವರ ಕಡಬದ ನೂತನ ಕಛೇರಿಯ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಕಡಬ ಮಿನಿ ವಿಧಾನ ಸೌಧದಲ್ಲಿ ನೂತನ ಕಚೇರಿ ಉದ್ಘಾಟಿಸಲಾಯಿತು. ಬೆಳಿಗ್ಗೆ ಗಣಹೋಮ ಪೂಜೆ ನಡೆಸಿದ ಬಳಿಕ ಉದ್ಘಾಟನೆ ನೆರವೇರಿಸಲಾಯಿತು. ಜನಸಂಘ ಹಗೂ ಬಿಜೆಪಿಯ ಹಿರಿಯ ಕಾರ್ಯಕರ್ತರಾದ ಹರಿಶ್ಚಂದ್ರ ರೈ ಪಟ್ಟೆಗುತ್ತು ಪೆರಾಬೆ ಹಾಗೂ ತನಿಯಪ್ಪ ಮಜ್ಜಗುಡ್ಡೆ ಕಡಬ, ಕುಶಾಲಪ್ಪ ಗೌಡ ಕುಡಾಲ ದೀಪ ಬೆಳಗಿಸಿ ಉದ್ಘಾಟನೆ ನೆರವೇರಸಿದರು. ಶಾಸಕಿ ಭಾಗೀರಥಿ ಮುರುಳ್ಯ ಅವರು 94
ಪುತ್ತೂರು: ಪುತ್ತೂರು ಶಾಸಕರು ಪ್ರಧಾನಮಂತ್ರಿ ಫಸಲ್ ಭಿಮಾ ಯೋಜನೆ ಹಾಗೂ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯ ಕುರಿತು ಮಾಹಿತಿ ಇಲ್ಲದೆ ಕೃಷಿಕರು ಹಾಗೂ ಮಾಧ್ಯಮಗಳಿಗೆ ತಪ್ಪು ಮಾಹಿತಿ ನೀಡಿ ರೈತರನ್ನು ಗೊಂದಲದಲ್ಲಿ ಸಿಲುಕಿಸಿದ್ದಾರೆ ಎಂದು ಮಾಜಿ ಶಾಸಕ ಸಂಜೀವ ಮಠಂದೂರು ಆರೋಪಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಮುಖಂಡರಾದ ಸಾಜ ರಾಧಾಕೃಷ್ಣ ಆಳ್ವ, ಪುರುಷೋತ್ತಮ ಮುಂಗ್ಲಿಮನೆ, ಯುವರಾಜ ಪೆರಿಯತ್ತೋಡಿ, ನಿತೀಶ್ ಶಾಂತಿವನ, ಉಪ್ಪಿನಂಗಡಿ ಸಿ.ಎ.ಬ್ಯಾಂಕ್
ಮಣಿಪುರ ರಾಜ್ಯದಲ್ಲಿ ಸುಮಾರು ಎರಡು ತಿಂಗಳುಗಳಿಂದ ಅಲ್ಲಿನ ಕ್ರೈಸ್ತ ಸಮುದಾಯದವರ ಮೇಲೆ ನಿರಂತರವಾಗಿ ನಡೆಯುತ್ತಿರುವ ದಾಳಿಯನ್ನು ಖಂಡಿಸಿ ಹಾಗೂ ಶಾಂತಿ ಮರು ಸ್ಥಾಪಿಸಿ ನೊಂದವರಿಗೆ ಪರಿಹಾರ ನೀಡುವಂತೆ ಒತ್ತಾಯಿಸಿ ಕರ್ನಾಟಕ ಸೀರೋ ಮಲಬಾರ್ ಕೆಥೊಲಿಕ್ ಅಸೋಸಿಯೇಶನ್ ನೇತೃತ್ವದಲ್ಲಿ ನಗರದ ಮಿನಿ ವಿಧಾನಸೌಧದ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದರು. ಮಣಿಪುರ ಹಿಂಸಾಚಾರವನ್ನು ತಡೆಗಟ್ಟಲು ಕೇಂದ್ರ ಸರಕಾರ ತಕ್ಷಣ ಕ್ರಮ ಕೈಗೊಳ್ಳಬೇಕು, ಪ್ರಧಾನಿಯವರು ಮಣಿಪುರಕ್ಕೆ ಭೇಟಿ
ಪೆರ್ನಾಳ್ ಹಬ್ಬ ಆಚರಿಸಲೆಂದು ಸಂಬಂಧಿಕರ ಮನೆಗೆ ಬಂದಿದ್ದ ಯುವಕರಿಬ್ಬರು ಮಸೀದಿಯ ಸಮೀಪದ ಕೊಳದಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಮೊಗ್ರಾಲ್ ಕೊಪ್ಪಳದಲ್ಲಿ ಶನಿವಾರ ಮಧ್ಯಾಹ್ನ ಈ ದುರ್ಘಟನೆ ಸಂಭವಿಸಿದೆ. ಮಂಜೇಶ್ವರ ಮಜಿಬೈಲ್ ನಿವಾಸಿ ಖಾದರ್ – ನಸೀಮಾ ದಂಪತಿಗಳ ಮಕ್ಕಳಾದ ಅಬ್ದುಲ್ ನಾಝಿಂ (22) ಹಾಗೂ ಮೊಹಮ್ಮದ್ ನವಾ (17) ಮೃತ ದುರ್ದೈವಿಗಳು. ಸ್ಥಳಕ್ಕಾಗಮಿಸಿದ ಸ್ಥಳೀಯರು ಮೃತದೇಹವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗಾಗಿ ಮಂಗಲ್ಪಾಡಿ ಆಸ್ಪತ್ರೆಗೆ
ಮಂಗಳೂರು : ಕನ್ನಡ ಪ್ರಪ್ರಥಮ ಪತ್ರಿಕೆ ಮಂಗಳೂರು ಸಮಾಚಾರದ ನೆನಪಿನಲ್ಲಿ ನಡೆಯುವ ಪತ್ರಿಕಾ ದಿನಾಚರಣೆಯ ಸಂದರ್ಭದಲ್ಲಿ ಈ ಪತ್ರಿಕೆ ಹಾಗೂ ಅದರ ಸಂಪಾದಕ ಡಾ.ಹೆರ್ಮನ್ ಮ್ಯೋಗ್ಲಿಂಗ್ ಅವರ ಚರಿತ್ರೆಯನ್ನು ಜನತೆಯ ಮುಂದಿಡುವ ಕೆಲಸ ನಡೆಯಬೇಕು ಎಂದು ವಿಧಾನ ಪರಿಷತ್ ಸದಸ್ಯ ಹಾಗೂ ದ.ಕ.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಅವರು ಹೇಳಿದರು. ಮಂಗಳೂರು ಬಲ್ಮಠ ಥಿಯೋಲಾಜಿಕಲ್ ಕಾಲೇಜು ಆವರಣದಲ್ಲಿ ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ವತಿಯಿಂದ ನಡೆದ ಪತ್ರಿಕಾ
ಉಜಿರೆ,ಜುಲೈ 1: ಶಿಸ್ತು, ಸಂಯಮ ಮತ್ತು ಜ್ಞಾನವನ್ನು ರೂಢಿಸಿಕೊಳ್ಳುವ ನಿಟ್ಟಿನಲ್ಲಿ ಜಗತ್ತಿನ ಉಳಿದ ದೇಶಗಳಿಗಿಂತ ಭಾರತದ ವಿದ್ಯಾರ್ಥಿಗಳು ಅಗ್ರಮಾನ್ಯತೆಯನ್ನು ಪಡೆದವರು. ಇಂಥ ವಿಶೇಷ ಶೈಕ್ಷಣ ಕ ಪರಂಪರೆಯ ಅರ್ಥವಂತಿಕೆ ಹೆಚ್ಚಿಸುವ ರೀತಿಯಲ್ಲಿ ವಿದ್ಯಾರ್ಥಿಗಳು ಸಾಧನೆಯ ಹೆಜ್ಜೆಗಳನ್ನಿರಿಸಬೇಕು ಎಂದು ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ, ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅಭಿಪ್ರಾಯಪಟ್ಟರು.ಉಜಿರೆಯ ಎಸ್.ಡಿ.ಎಂ ಕಾಲೇಜಿನ ವಾರ್ಷಿಕೋತ್ಸವ
ಮಂಗಳೂರು ವಿಶ್ವವಿದ್ಯಾನಿಲಯದಿಂದ ಅಂಗೀಕೃತವಾದ ದೇಶದ ಮೊತ್ತ ಮೊದಲ ಕೇಶ ವಿನ್ಯಾಸ ಕಾಲೇಜು ಆಗಸ್ಟ್ ನಲ್ಲಿ ಮಂಗಳೂರಿನ ದೇರಳಕಟ್ಟೆಯಲ್ಲಿ ಶಿವಾ’ಸ್ ಕಾಲೇಜು ಹೆಸರಲ್ಲಿ ಕಾರ್ಯಾರಂಭಗೊಳ್ಳಲಿದೆ. ಆರು ತಿಂಗಳ ಸರ್ಟಿಫಿಕೇಟ್ ಕೋರ್ಸ್ ಮತ್ತು ಒಂದು ವರ್ಷದ ಡಿಪ್ಲೋಮಾ ಪೂರೈಸಿದ ವಿದ್ಯಾರ್ಥಿಗಳಿಗೆ ಮಂಗಳೂರು ವಿಶ್ವವಿದ್ಯಾನಿಲಯ ಪ್ರಮಾಣೀಕೃತ ಸರ್ಟಿಫಿಕೇಟ್ ಸಿಗಲಿದೆ. ಬಹು ಬೇಡಿಕೆಯಿರುವ ಕೇಶ ವಿನ್ಯಾಸ ಕ್ಷೇತ್ರದಲ್ಲಿ ಯುವ ಸಮುದಾಯಕ್ಕೆ ಉದ್ಯೋಗವಕಾಶ ಒದಗಿಸುವ
ಆದಿ ಉಡುಪಿ ಸಂತೆ ಮಾರ್ಕೆಟಿನ ಬಳಿ ಗೋವುಗಳ್ಳರಿಂದ ರಕ್ಷಿಸಲ್ಪಟ್ಟ ಮೂರು ಕರುಗಳನ್ನು ಕೊಡವೂರಿನ ನಂದಗೋಕುಲ ಗೋಶಾಲೆಗೆ ಸೇರಿಸಿದ್ದಾರೆ. ಗುರುರಾಜ್ ಅಮಿನ್ ಅವರು ಗೋವುಗಳ್ಳರಿಂದ ಮತ್ತು ಬೀದಿ ನಾಯಿಗಳಿಂದ ಕರುಗಳನ್ನು ರಕ್ಷಿಸಿ, ಮೇವು ನೀಡಿ ಸುರಕ್ಷಿತವಾಗಿಟ್ಟಿದ್ದರು. ಬಳಿಕ ಸಮಾಜಸೇವಕ ನಿತ್ಯಾನಂದ ಒಳಕಾಡು ಅವರ ಗಮನಕ್ಕೆ ತಂದರು. ತಕ್ಷಣ ಒಳಕಾಡು ಅವರು ಅಲ್ಲಿಯ ತಂಡದವರಿಂದ ಕರುಗಳನ್ನು ಗೋಶಾಲೆಗೆ ದಾಖಲುಪಡಿಸಿದರು. ಗೋಶಾಲೆಯ ಮೇಲ್ವಿಚಾರಕ ಇಂದು ಶೇಖರ್



























