Home Articles posted by v4team (Page 460)

ಯೆಯ್ಯಾಡಿ : ಕಟ್ಟಡದ ಮೇಲೆ ಬಿದ್ದ ಬೃಹತ್ತಾಕಾರದ ಮರ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ಮಳೆಯಿಂದ ಕೆಲವೆಡೆ ಹಾನಿ ಸಂಭವಿಸಿದೆ. ಮಂಗಳೂರಿನ ಯೆಯ್ಯಾಡಿ ಜಂಕ್ಷನ್‍ನಲ್ಲಿ ಬೃಹತ್ ಗಾತ್ರದ ಮರ ಹಾಗೂ ವಿದ್ಯುತ್ ಕಂಬವೊಂದು ವಾಣಿಜ್ಯ ಕಟ್ಟಡ ಬಿದ್ದಿದ್ದು, ಸಂಭಾವ್ಯ ಹಾನಿ ತಪ್ಪಿದೆ. ಯೆಯ್ಯಾಡಿಯಿಂದ ಶಕ್ತಿನಗರಕ್ಕೆ ಸಂಪರ್ಕಿಸುವ ರಸ್ತೆ ಇದ್ದಾಗಿದ್ದು, ಇಲ್ಲಿ ದಿನ ನಿತ್ಯ ವಾಹನ ಸಂಚಾರ ಕೂಡ ಇದ್ದು,

ಮೂಡುಬಿದಿರೆ : ಗಾಯಗೊಂಡ ನಾಗರಹಾವಿಗೆ ಶಸ್ತ್ರ ಚಿಕಿತ್ಸೆಯಿಂದ ಮರುಜೀವ

ಮೂಡುಬಿದಿರೆ: ಪುರಸಭಾ ವ್ಯಾಪ್ತಿಯ ಕಲ್ಲಬೆಟ್ಟು ರಸ್ತೆಯ ಬಳಿ ನಾಗರ ಹಾವೊಂದು ದ್ವಿಚಕ್ರ ವಾಹನದ ಚಕ್ರಕ್ಕೆ ಸಿಲುಕಿ ಗಾಯಗೊಂಡು ಜೀವನ್ಮರಣ ಸ್ಥಿತಿಯಲ್ಲಿತ್ತು. ಇದನ್ನು ಕಂಡ ಮಾಜಿ ಸಚಿವ ಕೆ. ಅಭಯಚಂದ್ರ ಜೈನ್ ಅವರು ಅರಣ್ಯ ಇಲಾಖೆಗೆ ಮಾಹಿತಿಯನ್ನು ನೀಡಿದ್ದರು. ತಕ್ಷಣ ಸ್ಪಂದಿಸಿದ ಅರಣ್ಯ ಇಲಾಖೆಯ ಅಧಿಕಾರಿಗಳು ಹಾವನ್ನು ಚಿಕಿತ್ಸೆಗಾಗಿ ಉಡುಪಿಯ ವನ್ಯಜೀವಿ ಪಶುವೈದ್ಯ ಡಾ. ಯಶಸ್ವಿಯವರ ಖಾಸಗೀ ಆಸ್ಪತ್ರೆಗೆ ಕೊಂಡೊಯ್ದು ಚಿಕಿತ್ಸೆ ನೀಡಿರುತ್ತಾರೆ. ಶಸ್ತ್ರ

ಕರಾವಳಿಯಲ್ಲಿ ಸಂಭ್ರಮದಿಂದ ಈದ್ –ಅಲ್ ಅಧಾ ಆಚರಣೆ

ದ.ಕ.ಜಿಲ್ಲೆಯಲ್ಲಿ ಇಂದು ಮುಂಜಾನೆಯಿಂದಲೇ ಅತ್ಯಂತ ಸಡಗರ, ಸಂಭ್ರಮದಿಂದ `ಈದುಲ್ ಅಝ್ಹಾ’ ಆಚರಿಸಲಾಗುತ್ತಿದೆ. ಜಿಲ್ಲೆಯ ಮುಸ್ಲಿಮರು ಮಸೀದಿ, ಈದ್ಗಾಗಳಲ್ಲಿ ಸಾಮೂಹಿಕ ನಮಾಝ್ ನಿರ್ವಹಿಸಿ, ಈದ್ ಖುತ್ಬಾ ಮತ್ತು ಪ್ರವಚನ ಆಲಿಸಿ, ಈದ್ ಸಂದೇಶ ಸ್ವೀಕರಿಸುವುದು ಮತ್ತು ನೆರೆಮನೆ ಹಾಗೂ ಸಂಬಂಧಿಕರ ಮನೆಗೆ ಸೌಹಾರ್ದ ಭೇಟಿ ನೀಡುತ್ತಿರುವುದು ಕಂಡು ಬಂತು. ಮಂಗಳೂರಿನ ಬಾವುಟಗುಡ್ಡೆ ಈದ್ಗಾ ಮಸ್ಜಿದ್, ಸಹಿತ ಜಿಲ್ಲೆಯ ಜುಮಾ ಮಸ್ಜಿದ್ ಮತ್ತು ಈದ್ಗಾಗಳಲ್ಲಿ ನಮಾಝ್

ಮಂಗಳೂರು – ಮೇರಿಹಿಲ್ , ಡಿವೈಡರಿಗೆ ಬೈಕ್ ಗುದ್ದಿ ಬಾಲಕರಿಬ್ಬರು ಬಲಿ

ಮಂಗಳೂರು: ನಗರದ ಮೇರಿಹಿಲ್ ವಿಕಾಸ್ ಕಾಲೇಜಿನ ಬಳಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಸ್ಕೂಟರ್ ಸವಾರರಿಬ್ಬರು ಬುಧವಾರ ರಾತ್ರಿ ಮೃತಪಟ್ಟಿದ್ದಾರೆ. ಮೃತರನ್ನು ಸ್ಥಳೀಯ ನಿವಾಸಿಗಳಾದ ಪವನ್ ( 16) ಹಾಗೂ ಚಿರಾಗ್ ( 15) ಎಂದು ಗುರುತಿಸಲಾಗಿದೆ. ಅಪಘಾತದಿಂದ ಒಬ್ಬ ಬಾಲಕ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದ. ಗಾಯಗೊಂಡ ಇನ್ನೊಬ್ಬ ಬಾಲಕನನ್ನು ರಾಜಲಕ್ಷ್ಮೀ ಬಸ್ಸಿನಲ್ಲಿ ತಕ್ಷಣವೇ ಕರೆದೊಯ್ದು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆ ತಲುಪುವಷ್ಟರಲ್ಲಿ ಆತನೂ

ಸುರೇಶ್‌ ಪಳ್ಳಿ, ಭರತ್‌ರಾಜ್‌ ಸನಿಲ್‌ ಗೆ ‘ಬ್ರ‍್ಯಾಂಡ್ ಮಂಗಳೂರು ಪ್ರಶಸ್ತಿ’

ಮಂಗಳೂರು: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಸೌಹಾರ್ದತೆ ಪ್ರತಿ ಬಿಂಬಿಸುವ ವರದಿಗೆ ನೀಡಲಾಗುವ ಬ್ರ‍್ಯಾಂಡ್ ಮಂಗಳೂರು ಪ್ರಶಸ್ತಿಗೆ ಪತ್ರಿಕಾ ಮಾಧ್ಯಮ ವಿಭಾಗದಲ್ಲಿ ಹೊಸದಿಗಂತ ವರದಿಗಾರ ಸುರೇಶ್‌ ಡಿ.ಪಳ್ಳಿ ಮತ್ತು ದೃಶ್ಯ ಮಾಧ್ಯಮ ವಿಭಾಗದಲ್ಲಿ ಏಷ್ಯಾನೆಟ್‌ ಸುವರ್ಣ ನ್ಯೂಸ್‌ ವರದಿಗಾರ ಭರತ್‌ರಾಜ್‌ ಕೆ. ಸನಿಲ್‌ ಆಯ್ಕೆಯಾಗಿದ್ದಾರೆ.ಹೊಸದಿಗಂತ ಪತ್ರಿಕೆಯಲ್ಲಿ 2022ರ ಜೂ.13ರಂದು ಪ್ರಕಟಗೊಂಡ “ಮತ್ತೆ ಒಂದಾಗಲಿ ಒಡೆದ

ಬಿಪಿಎಲ್ ಪಡಿತರ ಕಾರ್ಡ್‍ದಾರರ ಖಾತೆಗೆ 170 ರೂ !!

ಅನ್ನಭಾಗ್ಯ ಯೋಜನೆಯಡಿ ಪ್ರತಿ ಬಿಪಿಎಲ್ ಕುಟುಂಬಕ್ಕೆ 10 ಕೆ.ಜಿ ಅಕ್ಕಿ ನೀಡುವುದಾಗಿ ಘೋಷಿಸಿದ್ದ ರಾಜ್ಯ ಕಾಂಗ್ರೆಸ್ ಸರ್ಕಾರ, ಹೆಚ್ಚುವರಿ ಅಕ್ಕಿ ಹೊಂದಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ 5 ಕೆ.ಜಿ ಅಕ್ಕಿಗೆ ಬದಲಾಗಿ ಹಣವನ್ನು ನೀಡಲು ಸರ್ಕಾರ ನಿರ್ಧರಿಸಿದೆ. ಈಗಾಗಲೇ ರಾಜ್ಯ ಸರ್ಕಾರ ಅನ್ನಭಾಗ್ಯ ಯೋಜನೆಯಡಿ 5.ಕೆ.ಜಿ ಅಕ್ಕಿಯನ್ನು ಬಿಪಿಎಲ್ ಕುಟುಂಬಗಳಿಗೆ ಉಚಿತವಾಗಿ ನೀಡುತ್ತಿದ್ದು, ಉಳಿದ ಹೆಚ್ಚುವರಿ 5 ಕೆ.ಜಿ ಅಕ್ಕಿಗೆ 170 ರೂ. ನೀಡಲು ತೀರ್ಮಾನ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ-ಆರೋಪಿಗಳಿಗೆ ಜೂನ್30ರ ಒಳಗೆ ಶರಣಾಗಲು ಗಡುವು

ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎನ್‍ಐಎ ಅಧಿಕಾರಿಗಳು ನಾಪತ್ತೆಯಾಗಿರುವ ಆರೋಪಿಗಳಿಗೆ ತೀವ್ರ ಶೋಧ ನಡೆಸುತ್ತಿದ್ದಾರೆ. ಸುಳ್ಯ ನಗರದ ಬೀದಿಗಳಲ್ಲಿ ಈ ಬಗ್ಗೆ ಧ್ವನಿವರ್ಧಕ ಬಳಸಿ ಪ್ರಕಟಣೆ ಹೊರಡಿಸಿದ್ದಾರೆ. ಕೊಲೆ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಗಳು ಜೂ. 30 ರೊಳಗೆ ಶರಣಾಗದೇ ಇದ್ದಲ್ಲಿ ಅವರ ಮನೆಯನ್ನು ಮುಟ್ಟುಗೋಲು ಮಾಡಲಾಗುವುದೆಂದು ಅನೌನ್ಸ್ ಮೂಲಕ ಎಚ್ಚರಿಕೆ ನೀಡಿದ್ದಾರೆ. ಎನ್‍ಐಎ ನ್ಯಾಯಾಲಯದ

ಬೆಳ್ತಂಗಡಿ : ವಿದ್ಯುತ್ ಸಂಪರ್ಕಕ್ಕೆ ಅನುಮತಿ ನೀಡುವಂತೆ ಮನವಿ

ಬೆಳ್ತಂಗಡಿ. ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯಲ್ಲಿ ಬರುವ ಬೆಳ್ತಂಗಡಿ ತಾಲೂಕಿನ ಸುಲ್ಕೇರಿಮೊಗ್ರು, ಗ್ರಾಮದ ಬಲ್ಯ ಮಾಳಿಗೆಬೈಲು ಸೇರಿದಂತೆ ಬೆಳ್ತಂಗಡಿ ತಾಲೂಕಿನ ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯಲ್ಲಿ ವಾಸಿಸುವ ಕುಟುಂಬಗಳಿಗೆ ವಿದ್ಯುತ್ ಸಂಪರ್ಕಕ್ಕೆ ಅನುಮತಿ ನೀಡುವಂತೆ ಅರಣ್ಯ ಜೈವಿಕ ಪರಿಸರ ಸಚಿವರಾದ ಈಶ್ವರ್ ಖಂಡ್ರೆ ಅವರಿಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಮನವಿ ಸಲ್ಲಿಸಿದರು. ಕುದುರೆಮುಖ ರಾಷ್ಟ್ರೀಯ

ಸುಳ್ಯ : ಸ್ವಯಂ ಗುಂಡು ಹಾರಿಸಿಕೊಂಡು ಯುವಕ ಆತ್ಮಹತ್ಯೆ

ಬಂದೂಕಿನಿಂದ ಸ್ವಯಂ ಗುಂಡು ಹೊಡೆದುಕೊಂಡು ಯುವಕನೋರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸುಳ್ಯ ತಾಲೂಕಿನ ಉಬರಡ್ಕದಲ್ಲಿ ನಡೆದಿದೆ. ಮೃತ ಯುವಕನನ್ನು ಅರಂತೋಡು ಗ್ರಾಮದ ರವಿ ಎಂದು ಗುರುತಿಸಲಾಗಿದೆ. ಈತ ಉಬರಡ್ಕ ಗ್ರಾಮದ ಬೆಳ್ರಂಪಾಡಿ ಎಂಬಲ್ಲಿನ ಗುಡ್ಡದಲ್ಲಿ ಕೋವಿಯಿಂದ ಗುಂಡು ಹೊಡೆದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ಹೇಳಲಾಗಿದೆ.ಬೆಳ್ರಂಪಾಡಿಯ ಮನೆಯೊಂದರಲ್ಲಿ ರವಿ ಕೆಲಸಮಯದಿಂದ ಕೆಲಸಕ್ಕಿದ್ದು ಕುಡಿತದ ಚಟ ಹೊಂದಿದ್ದ ಎನ್ನಲಾಗಿದೆ. ಕಳೆದ ರಾತ್ರಿ ಕೋವಿ

ಮಂಜೇಶ್ವರ ಗ್ರಾ.ಪಂ. ವ್ಯಾಪ್ತಿಯಲ್ಲಿ ಬೀದಿನಾಯಿಗಳ ಹಾವಳಿ

ಮಂಜೇಶ್ವರ: ಮಂಜೇಶ್ವರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬೀದಿನಾಯಿಗಳ ಹಾವಳಿ ಮಿತಿಮೀರಿರುವುದರಿಂದ ವಿದ್ಯಾರ್ಥಿಗಳು, ಪಾದಚಾರಿಗಳು ಭಯದ ವಾತಾವರಣದಲ್ಲಿ ನಡೆದಾಡಬೇಕಾದ ಪರಿಸ್ಥಿತಿ ಬಂದೊದಗಿದೆ. ಈ ಬಗ್ಗೆ ಪಂಚಾಯಿತಿ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರೂ ಇದುವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ. ಅಧಿಕಾರಿಗಳ ನಿರ್ಲ್ಯಕ್ಷ ವನ್ನು ಖಂಡಿಸಿ ಎಸ್‍ಡಿಪಿಐ ಮಂಜೇಶ್ವರ ಪಂಚಾಯಿತಿ ಸಮಿತಿಯ ನೇತೃತ್ವದಲ್ಲಿ ಮಂಜೇಶ್ವರ ಗ್ರಾಮ ಪಂಚಾಯಿತಿ ಕಚೇರಿಗೆ ಪ್ರತಿಭಟನಾ