Home Articles posted by v4team (Page 588)

ಭೂಕಂಪನದಿಂದ ಹಾನಿಗೀಡಾದ ಮನೆಗೆ ಸಚಿವರ ಭೇಟಿ

ಕೆಲದಿನಗಳ ಹಿಂದೆ ಭೂಕಂಪನದಿಂದ ಹಾನಿಗೊಳಪಟ್ಟ ಸುಳ್ಯ ತಾಲೂಕಿನ ವಸಂತ ಭಟ್ ಅವರ ಮನೆಗೆ ಕಂದಾಯ ಸಚಿವರಾದ ಆರ್. ಅಶೋಕ್, ಇಂಧನ,ಕನ್ನಡ ಮತ್ತು ಸಂಸ್ಕೃತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ.ಸುನಿಲ್ ಕುಮಾರ್, ಬಂದರು, ಮೀನುಗಾರಿಕೆ ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಎಸ್.ಅಂಗಾರ, ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ, ಜಿಲ್ಲಾ ಪಂಚಾಯತ್ ಮುಖ್ಯ

ತುಂಬಿ ಹರಿಯುತ್ತಿರುವ ನೇತ್ರಾವತಿ: ಎಚ್ಚರ ವಹಿಸುವಂತೆ ನದಿಪಾತ್ರದ ಜನತೆಗೆ ಸೂಚನೆ

ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಗೆ ನೇತ್ರಾವತಿ ನದಿ ತುಂಬಿ ಹರಿಯುತ್ತಿದ್ದು ಗುರುವಾರ ಬೆಳಗ್ಗೆ ನದಿ ನೀರು 8 ಮೀಟರ್ ಎತ್ತರದಲ್ಲಿ ಹರಿಯುತ್ತಿದೆ.ಮೂರು ದಿನಗಳಿಂದ ನೀರಿನ ಮಟ್ಟ ಏರುತ್ತಲೇ ಸಾಗಿದ್ದು, ಇಂದು ಬೆಳಗ್ಗೆ 8 ಮೀಟರ್ ಗೆ ತಲುಪಿದೆ. ನೇತ್ರಾವತಿ ನದಿ ನೀರಿನ ಅಪಾಯದ ಮಟ್ಟ 8.5 ಮೀಟರ್ ಆಗಿದೆ. ಇನ್ನೂ ನೀರಿನ ಮಟ್ಟ ಏರಿಕೆಯಾದರೆ ನದಿ ಪಾತ್ರದ ತಗ್ಗು ಪ್ರದೇಶಗಳು ಮುಳುಗಡೆಯಾಗಲಿದೆ. 8.5 ಮೀಟರ್ ಗೆ ತಲುಪಿದರೆ ನೆರೆ ಉಂಟಾಗಲಿದೆ.

ಮಂಗಳೂರು: ಕಾರ್ಮಿಕ ಅದಾಲತ್-2 ವಾಹನ ಜಾಥಾಕ್ಕೆ ಚಾಲನೆ

ಕಾರ್ಮಿಕ ಇಲಾಖೆಯ ವತಿಯಿಂದ ಕಾರ್ಮಿಕರ ಸಮಸ್ಯೆಗಳನ್ನು ಬಗೆ ಹರಿಸುವ ಸಲುವಾಗಿ, ಪರಿಹಾರ ಒದಗಿಸುವ ನಿಟ್ಟಿನಲ್ಲಿ ರಾಜ್ಯಾದ್ಯಂತ ಕಾರ್ಮಿಕ ಅದಾಲತ್ ನಡೆಸಲಾಗುತ್ತಿದ್ದು, ಈ ಪ್ರಯುಕ್ತ ನಗರದ ಯೆಯ್ಯಾಡಿ ಶರ್ಬತ್ ಕಟ್ಟೆಯ ಸಮೀಪದಲ್ಲಿರುವ ಕಾರ್ಮಿಕ ಇಲಾಖೆ ಕಚೇರಿಯಲ್ಲಿ “ಕಾರ್ಮಿಕ ಅದಾಲತ್-2 ವಾಹನ ಜಾಥಾಕ್ಕೆ ಚಾಲನೆ ಸಿಕ್ಕಿತ್ತು. ಸಹಾಯಕ ಕಾರ್ಮಿಕ ಆಯುಕ್ತರಾದ ಶಿವ ಕುಮಾರ್ ಚಾಲನೆ ನೀಡಿದರು. ತದಬಳಿಕ ಮಾತನಾಡಿದ ಅವರು, ಕಾರ್ಮಿಕ ಸಚಿವರ ಸೂಚನೆ ಮೇರೆಗೆ

ಬಜ್ಪೆಯ ಅದ್ಯಪಾಡಿಯಲ್ಲಿ ಗುಡ್ಡ ಕುಸಿತ , ರಸ್ತೆ ಕುಸಿತದಿಂದ ಆದ್ಯಪಾಡಿ-ಕೈಕಂಬ ಸಂಪರ್ಕ ಕಡಿತ

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ರನ್ ವೇ ಬಳಿಯಿಂದಾಗಿ ಅದ್ಯಪಾಡಿಗೆ ತೆರಳುವ ರಸ್ತೆ ಭಾರೀ ಮಳೆಗೆ ಕೊಚ್ಚಿ ಹೋಗಿದೆ ಇದು ಅದ್ಯಪಾಡಿ-ಕೈಕಂಬ ಸಂಪರ್ಕಿಸುವ ರಸ್ತೆಯಾಗಿದ್ದು, ಕೆಲ ದಿನಗಳ ಹಿಂದೆಯೇ ಇಲ್ಲಿ ಮೋರಿ ಕುಸಿದಿತ್ತು. ಆ ಬಳಿಕ ರಸ್ತೆಯ ಎರಡೂ ಬದಿಗಳಲ್ಲಿ ಬ್ಯಾರಿಕೇಡ್ ಗಳನ್ನು ಅಳವಡಿಸಿ ಸಂಚಾರವನ್ನು ಸ್ಥಗಿತಗೊಳಿಸಲಾಗಿತ್ತು. ಈ ಕುರಿತು ಸ್ಪಷ್ಟನೆ ನೀಡಿರುವ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾಧಿಕಾರ, ವಿಮಾನ ನಿಲ್ದಾಣದ ಹೊರಭಾಗದಲ್ಲಿ

ಜುಲೈ 9ರಂದು ಪಡುಬಿದ್ರಿ ಸೊಸೈಟಿಯ ಹವಾನಿಯಂತ್ರಿತ ಸಿಟಿ ಶಾಖೆ ಉದ್ಘಾಟನೆ

ಪಡುಬಿದ್ರಿಯಲ್ಲಿ ನವೀಕೃತ ಹವಾನಿಯಂತ್ರಿತ ಸಿಟಿ ಶಾಖೆಯ ಉದ್ಘಾಟನಾ ಸಮಾರಂಭ ಹಾಗೂ ಕೃಷಿ ಸಲಕರಣೆಗಳ ಮಾರಾಟ ವಿಭಾಗದ ಶುಭಾರಂಭವು ಜು. 9 ರಂದು ನಡೆಯಲಿದೆ.ಗ್ರಾಹಕರಿಗೆ ಹವಾನಿಯಂತ್ರಿತ ಶಾಖೆಯೊಂದಿಗೆ ಸೊಸೈಟಿಯಲ್ಲಿ ದೊರಕುತ್ತಿರುವ ವಿವಿಧ ಸೇವೆಗಳನ್ನು ಆಧುನೀಕರಣ ಗೊಳಿಸುವ ಸಲುವಾಗಿ ಪಡುಬಿದ್ರಿ ಸೊಸೈಟಿಯ ಹೃದಯ ಶಾಖೆಯಾದÀ ಸಿಟಿ ಶಾಖೆಯನ್ನು ಸಂಪೂರ್ಣ ಹವಾನಿಯಂತ್ರಿತ ಶಾಖೆಯನ್ನಾಗಿ ನವೀಕೃತ ಗೊಳಿಸಿ ಇದರೊಂದಿಗೆ ಕೃಷಿ ಸಲಕರಣೆ ಮಾರಾಟ ವಿಭಾಗದ ಉದ್ಘಾಟನೆಯನ್ನು

ತ್ರಿವಳಿ ಮಕ್ಕಳಿಗೆ ಜನ್ಮ ನೀಡಿದ ತಾಯಿ, ಉಡುಪಿಯ ಸರ್ಕಾರಿ ಆಸ್ಪತ್ರೆಯಲ್ಲಿ ಹೆರಿಗೆ

ಉಡುಪಿ: ಮಹಿಳೆಯೊಬ್ಬರು ತ್ರಿವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ,ಉಡುಪಿಯ ಸರಕಾರಿ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಯಲ್ಲಿ ಮೂರು ಮಕ್ಕಳಿಗೆ ಜನ್ಮ ನೀಡಿದ್ದಾರೆ. 27 ವರ್ಷದ ಅಂಕೋಲ ಮೂಲದ ಸುನೀತಾ ಎನ್ನುವ ಮಹಿಳೆಗೆ ಸಿಸೇರಿಯನ್ ಹೆರಿಗೆ ಮಾಡಿಸಲಾಗಿದ್ದು ತಾಯಿ ಮಕ್ಕಳು ಅರೋಗ್ಯವಂತರಾಗಿದ್ದಾರೆ.ಮಹಿಳೆಗೆ ಇದು ಪ್ರಥಮ ಹೆರಿಗೆಯಾಗಿದ್ದು,ತ್ರಿವಳಿ ಮಕ್ಕಳನ್ನು ಕಂಡು ಸುನೀತಾ ದಂಪತಿಗಳು ಸಂಭ್ರಮಿಸಿದ್ದಾರೆ. ಸರಕಾರಿ ಮಹಿಳಾ ಮತ್ತು ಮಕ್ಕಳ ಅಸ್ಪತ್ರೆಯ ಡಾ.ಕವಿಶಾಭಟ್

ಅಬುದಾಬಿ ದುಬೈ ಕರ್ನಾಟಕ ಸಂಘದ ಅಧ್ಯಕ್ಷ ಶ್ರೀ ಸರ್ವೋತ್ತಮ ಶೆಟ್ಟಿ ಅವರಿಗೆ ಕರ್ನಾಟಕ ರತ್ನ ಡಾಕ್ಟರ್ ಬಿ ಜವರೇಗೌಡ ಪ್ರಶಸ್ತಿ

ಅಂತರಾಷ್ಟ್ರೀಯ ಮಟ್ಟದಲ್ಲಿ ವಿಶ್ವಮಾನವ ಕುವೆಂಪು ಕಲಾ ಉತ್ಸವ ಮತ್ತು ವಿಶ್ವ ಕನ್ನಡ ಸಮ್ಮೇಳನ ಹಾಗೂ ಕನ್ನಡ ಸಾಂಸ್ಕೃತಿಕ ಕಾರ್ಯಕ್ರಮ ಮಾಡುವ ಏಕೈಕ ಸಂಸ್ಥೆಯಿಂದ ಕುವೆಂಪು 118ನೇ ಜಯಂತಿ ಕರ್ನಾಟಕ ರತ್ನ ಡಾಕ್ಟರ್ ದೇ ಜವರೇಗೌಡ ಜಯಂತಿ ಗುರು-ಶಿಷ್ಯರ ಕಾರ್ಯಕ್ರಮದ ಪ್ರಯುಕ್ತ ವಿವಿಧ ಕನ್ನಡ ಸಾಂಸ್ಕೃತಿಕ ಉತ್ಸವ ಹಾಗೂ ಅಬುದಾಬಿ ದುಬೈ ಕರ್ನಾಟಕ ಸಂಘದ ಅಧ್ಯಕ್ಷರಾದ ಶ್ರೀ ಸರ್ವೋತ್ತಮ ಶೆಟ್ಟಿಯವರಿಗೆ ಕರ್ನಾಟಕ ರತ್ನ ಡಾಕ್ಟರ್ ದೇ ಜವರೇಗೌಡ ಪ್ರಶಸ್ತಿಯನ್ನು ದಿನಾಂಕ 6

ಜೈನ ಮನೆತನದ ವಾರಸುದಾರ ರಾಹುಲ್ ಬಲ್ಲಾಳ್ ನಿಧನ

ತುಳುನಾಡಿನ ಇತಿಹಾಸದಲ್ಲಿ ಪ್ರಮುಖವಾಗಿ ಗುರುತಿಸಿಕೊಂಡಿರುವ ಜೈನ ಮನೆತನದ ವಾರಸುದಾರ, ಮೂಡುಬಿದಿರೆಯ ಬಲ್ಲಾಳ್ ಕುಟುಂಬದ ರಾಹುಲ್ ಬಲ್ಲಾಳ್ (51) ಅವರು ಇಂದು ನಿಧನರಾಗಿದ್ದಾರೆ. ತುಳುನಾಡಿನ ಭವ್ಯ ಪರಂಪರೆ, ಪರೋಪಕಾರಿಗಳು ಆಗಿರುವಂತಹ ಶ್ರೀಮಂತ ಜೈನ ಮನೆತನದ ವಾರಸುದಾರರಾದ ಕೃಷಿಕರೂ, ಉದ್ಯಮಿ ಜಯವರ್ಮರಾಜ್ ಬಲ್ಲಾಳ್ ಅವರ ಸುಪುತ್ರರಾಗಿದ್ದ ರಾಹುಲ್ ಬಲ್ಲಾಳ್ ಕಾನೂನು ಪಧವೀಧರರು. ತನ್ನ ಕುಟುಂಬದ ಕೃಷಿ ಹಾಗೂ ಹೋಟೇಲ್ ಉದ್ಯಮವನ್ನು ಮುನ್ನಡೆಸಲು ರಾಹುಲ್ ಅವರು

ಬಂಟ್ವಾಳ: ಕಾರ್ಮಿಕರು ಉಳಿದುಕೊಂಡಿದ್ದ ಶೆಡ್ ಮೇಲೆ ಗುಡ್ಡ ಕುಸಿತ: ಮೃತಪಟ್ಟವರ ಸಂಖ್ಯೆ 3ಕ್ಕೇರಿಕೆ

ಪಂಜಿಕಲ್ಲು ಗ್ರಾಮದಲ್ಲಿ ಕಾರ್ಮಿಕರು ಉಳಿದುಕೊಂಡಿದ್ದ ಶೆಡ್ ಮೇಲೆ ಬುಧವಾರ ಗುಡ್ಡ ಕುಸಿತದಿಂದ ಮಣ್ಣಿನಡಿಗೆ ಸಿಲುಕಿದ ಪ್ರಕರಣದಲ್ಲಿ ಮೃತಪಟ್ಟವರ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ. ಆಸ್ಪತ್ರೆಗೆ ದಾಖಲಾಗಿದ್ದವರ ಪೈಕಿ ಓರ್ವ ರಾತ್ರಿ ಮೃತಪಟ್ಟಿದ್ದರೆ, ಇನ್ನೋರ್ವ ಮುಂಜಾವ ಕೊನೆಯುಸಿರೆಳೆದಿದ್ದಾನೆ. ಓರ್ವ ಬಂಟ್ವಾಳದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಮಣ್ಣಿನಡಿಯಿಂದ ರಕ್ಷಿಸಲ್ಪಟ್ಟು ಗಂಭೀರಾವಸ್ಥೆಯಲ್ಲಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲ್ಪಟ್ಟಿದ್ದ

ಕಾಡಮಲ್ಲಿಗೆ ಖ್ಯಾತಿಯ : ಬೆಳ್ಳಾರೆ ವಿಶ್ವನಾಥ ರೈ ಇನ್ನಿಲ್ಲ

ಬೆಳ್ಳಾರೆ ಸುಬ್ಬಯ್ಯ ರೈ ಮತ್ತು ಮಂಜಕ್ಕೆ ಇವರ ನಾಲ್ವರು ಮಕ್ಕಳಲ್ಲಿ ವಿಶ್ವನಾಥ ರೈ ಒಬ್ಬರು ಇವರು 28-2-1949 ರಲ್ಲಿ ಬೆಳ್ಳಾರೆಯಲ್ಲಿ ಜನಿಸಿದರು ಶಿಕ್ಷಣ 2 ನೇ ತರಗತಿ ಇಬ್ಬರು ಅಕ್ಕಂದಿರು ಒಬ್ಬಾಕೆ ತಂಗಿ. ಅಚ್ಚುತ ಮಣಿಯಾಣಿ ಯವರಿಂದ ಯಕ್ಷ ನಾಟ್ಯಾಭ್ಯಾಸ ಮಾಡಿ ತನ್ನ 9ನೇ ವರ್ಷ ಪ್ರಾಯದಲ್ಲಿ ರಂಗಪ್ರವೇಶ ಮಾಡಿದರು ರಾಜನ್ ಅಯ್ಯರ್ ಮತ್ತು ಕೇಶವ ಮಾಸ್ತರ್ ಅವರಿಂದ ಭರತನಾಟ್ಯವನ್ನೂ ಅಭ್ಯಾಸ ಮಾಡಿದರು. ಬಾಲಕನಿದ್ದಾಗಲೇ ತನ್ನ ಅಭಿನಯಕ್ಕೆ ಮಾಸ್ಟರ್ ಹಿರಣ್ಣಯ್ಯರಿಂದ