Home Articles posted by v4team (Page 728)

ಮಂಜೇಶ್ವರ : ಹತ್ತು ದಿನಗಳ ಹಿಂದೆ ನಾಪತ್ತೆಯಾಗಿದ್ದ ಯುವಕ ಶವವಾಗಿ ಪತ್ತೆ

ಕೆಲವು ದಿನಗಳಿಂದ ನಾಪತ್ತೆಯಾಗಿ ಚೆಂಬುಗುಡ್ಡೆಯ ಯುವಕನ ಶವ ಮಂಜೇಶ್ವರ ಸಮುದ್ರದಲ್ಲಿ ಪತ್ತೆಯಾಗಿದ್ದು, ಇದು ಆಕಸ್ಮಿಕ ಸಾವಲ್ಲ ಇದೊಂದು ಕೊಲೆ ಇದೊಂದು ಕೊಲೆ ಎಂಬುವ ಶಂಕೆ ಕುಟುಂಬಸ್ಥರಿಂದ ವ್ಯಕ್ತಗೊಂಡಿದೆ. ಮೀನು ವ್ಯಾಪಾರಿಯಾಗಿದ್ದ ತೊಕ್ಕೊಟ್ಟು ಸಮೀಪದ ಚೆಂಬುಗಡ್ಡೆಯ ನಿವಾಸಿ ಝಾಕಿರ್ ತೊಕ್ಕೊಟ್ಟಿಗೆ ಹೋಗಿ ಬರುವುದಾಗಿ ಮನೆಯಿಂದ ಹೋಗಿದ್ದು, ಶನಿವಾರ ಸಂಜೆ

ಬೆಳಪು ಅಕ್ರಮ ಕಸಾಯಿಖಾನೆಗೆ ಪೊಲೀಸ್ ದಾಳಿ : ಮೂವರು ವಶಕ್ಕೆ

ಬಹಳಷ್ಟು ವರ್ಷಗಳಿಂದ ದನಗಳನ್ನು ಕದ್ದು ಅಕ್ರಮವಾಗಿ ಕಸಾಯಿಖಾನೆ ನಡೆಸುತ್ತಿದ್ದ ಬೆಳಪು ತಬ್ರೇಸ್ ಎಂಬಾತನ ಮನೆಗೆ ದಾಳಿ ಮಾಡಿದ ಶಿರ್ವ ಪೊಲೀಸರು ಜೀವಂತ ಕರು, ದನದ ಮಾಂಸ ಸಹಿತ ಮೂವರು ಆರೋಪಗಳನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳು ಬೆಳಪುವಿನ ಸುಲ್ತಾನ್ ಅಹಮ್ಮದ್ ಎಂಬವರ ಮಗ ತಬ್ರೇಸ್( 30), ಕಾಪು ಮಲ್ಲಾರಿ ಶಾಲೆ ಬಳಿ ನಿವಾಸಿ ಅಮಾನುಲ್ಲಾ ಅಸೈನ್ ಎಂಬವರ ಮಗ ಮೊಹಮ್ಮದ್ ಅಜೀಮ್(39) ಹಾಗೂ ಬೆಳಪುವಿನ ಮಥುರಾ ಸ್ಟೋರ್ ಬಳಿ ನಿವಾಸಿ ಮಕ್ಬುಲ್ ಹುಸೇನ್ ಎಂಬವರ ಮಗ

ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ವಿಶ್ವ ವಿಶ್ರಾಂತಿ ಮತ್ತು ಪ್ರಶಾಮಕ ಆರೈಕೆ ದಿನವನ್ನು ಆಚರಿಸಲಾಯಿತು

9ನೇ ಅಕ್ಟೋಬರ್ 2022: ಅಕ್ಟೋಬರ್ ಎರಡನೇ ಶನಿವಾರದಂದು ವಿಶ್ವ ವಿಶ್ರಾಂತಿ ಮತ್ತು ಪ್ರಶಾಮಕ ಆರೈಕೆ ದಿನವನ್ನು ಆಚರಿಸಲಾಗುತ್ತದೆ. ವಾಯ್ಸ್ ಫಾರ್ ವಿಶ್ರಾಂತಿ ದಿನವನ್ನು ಪ್ರತಿ ಎರಡು ವರ್ಷಗಳಿಗೊಮ್ಮೆ ಅದೇ ದಿನ ಆಚರಿಸಲಾಗುತ್ತದೆ. ವಿಶ್ವ ಹಾಸ್ಪೈಸ್ ಮತ್ತು ಪ್ರಶಾಮಕ ಆರೈಕೆ ದಿನವನ್ನು ಆಚರಿಸುವುದರ ಮುಖ್ಯ ಉದ್ದೇಶ ಪ್ರಶಾಮಕ ಆರೈಕೆ ಅಗತ್ಯಗಳನ್ನು ಪರಿಹರಿಸುವುದು ಮತ್ತು ಅವಶ್ಯವಿರುವ ರೋಗಿಗಳಿಗೆ ಪ್ರಶಾಮಕ ಆರೈಕೆಯ ಅರಿವು ಹೆಚ್ಚಿಸುವ ದೃಷ್ಟಿಯನ್ನು

ಅಪಾರ್ಟ್ ಮೆಂಟ್ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ದಂಪತಿಯ ಮೃತದೇಹಗಳು ಪತ್ತೆ

ಮಂಗಳೂರಿನ ಕಂಕನಾಡಿ ಪೊಲೀಸ್ ಠಾಣಾ ವ್ಯಾಪ್ತಿಯ ಮರೋಳಿ ಬಳಿಯ ಅಪಾರ್ಟ್ ಮೆಂಟ್ ವೊಂದರಲ್ಲಿ ದಂಪತಿಯ ಮೃತದೇಹಗಳು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಇಂದು ಬೆಳಗ್ಗೆ ಪತ್ತೆಯಾಗಿವೆ. ಮೃತರನ್ನು ಮಲ್ಲಿಕಾರ್ಜುನ್ ಬಸವರಾಜ್(35) ಮತ್ತು ಸೌಮ್ಯಾ ನಾಯಕ್(34) ಎಂದು ಗುರುತಿಸಲಾಗಿದೆ. ಈ ದಂಪತಿಯ ಮೃತದೇಹ ಅವರು ವಾಸಿಸುತ್ತಿದ್ದ ಅಪಾರ್ಟ್ ಮೆಂಟ್ ನ ಕೋಣೆಯಲ್ಲಿ ಫ್ಯಾನ್ ಗೆ ನೇಣು ಹಾಕಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿವೆ. ಇವರು ಒಂದೂವರೆ ವರ್ಷದ ಹಿಂದೆ ವಿವಾಹವಾಗಿದ್ದರು

ಕುಂಬಳೆ ಅನಂತಪುರ ಶ್ರೀ ಪದ್ಮನಾಭ ದೇವಸ್ಥಾನ : ದೇವರ ಮೊಸಳೆ “ಬಬಿಯಾ” ವಿಧಿವಶ

ಕಾಸರಗೋಡು ಜಿಲ್ಲೆಯ ಕುಂಬಳೆಯ ಅನಂತಪುರ ಶ್ರೀ ಪದ್ಮನಾಭ ದೇವಸ್ಥಾನದ ಕೆರೆಯಲ್ಲಿ ಬಹುಕಾಲದಿಂದ ಇದ್ದ ದೇವರ ಮೊಸಳೆ ಎಂದು ಪ್ರತೀತಿ ಪಡೆದಿದ್ದ ಬಬಿಯಾ ಎಂಬ ಹೆಸರಿನ ಮೊಸಳೆ ಮೃತಪಟ್ಟಿದೆ. ದೇವಸ್ಥಾನದ ನಿತ್ಯದ ಮಧ್ಯಾಹ್ನದ ಪೂಜೆಯ ಬಳಿಕ ಅನ್ನ ನೈವೇದ್ಯವನ್ನು ಮೊಸಳೆಗೆ ಬಡಿಸಲಾಗುತ್ತಿತ್ತು. ದೇವಸ್ಥಾನದ ನೈವೇದ್ಯವನ್ನು ತಿಂದು ಬದುಕುತ್ತಿದ್ದ ಈ ಬಬಿಯಾ ಹೆಸರಿನ ಮೊಸಳೆ ಯಾವತ್ತಿಗೂ ಜನರಿಗೆ ತೊಂದರೆ ಮಾಡಿದ್ದೆ ಇಲ್ಲ. ಕೆಲವೊಮ್ಮೆ ದೇವಸ್ಥಾನದ ಕೆರೆಯಿಂದ ಸಮೀಪದ

ನೆಲ್ಯಾಡಿ ಪ್ರೊಫೆಷನಲ್ ಕೊರಿಯರ್ ನ ಶೆಬಿನ್ ನೇಣಿಗೆ ಶರಣು

ನೆಲ್ಯಾಡಿ: ಕಡಬ ತಾಲೂಕಿನ ನೆಲ್ಯಾಡಿ ಸಮೀಪದ ಮೊರಂಕಲ ನಿವಾಸಿ ಶೆಬಿನ್ ನಿವಾಸದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಕಳೆದ ಕೆಲವು ವರ್ಷಗಳಿಂದ ನೆಲ್ಯಾಡಿ ಯಲ್ಲಿ ಪ್ರೊಫೆಷನಲ್ ಕೊರಿಯರನ್ನು ನಡೆಸುತ್ತಿದ್ದ ಇವರು ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳಕ್ಕೆ ಉಪ್ಪಿನಂಗಡಿ ಪೊಲೀಸ್ ಠಾಣೆಯ ಸಬ್ಇನ್ಸ್ಪೆಕ್ಟರ್ ರಾಜೇಶ್, ನೆಲ್ಯಾಡಿ ಹೊರಠಾಣೆಯ ಹೆಡ್ ಕಾನ್ಸ್ಟೇಬಲ್ ಬಾಲಕೃಷ್ಣ ಹಾಗೂ ಪೋಲಿಸ್

ಪಾಟ್ರಕೋಡಿ ಗಾಂಜಾ ಪ್ರಕರಣ:ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಪುತ್ತೂರು: ವರ್ಷದ ಹಿಂದೆ ಪಾಟ್ರಕೋಡಿಯಲ್ಲಿ ಪತ್ತೆಯಾದ ಭಾರಿ ಪ್ರಮಾಣದ ಗಾಂಜಾ ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಲಯದಲ್ಲಿ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪುತ್ತೂರು ಪೊಲೀಸರು ಬಂಧಿಸಿದ್ದಾರೆ. ಪಾಟ್ರಕೋಡಿಯಲ್ಲಿ ಭಾರಿ ಪ್ರಮಾಣದ ಗಾಂಜಾ ಪ್ರಕರಣದಲ್ಲಿ ಪತ್ತೆ ಮಾಡಿದ ಪೆÇಲೀಸರು ಅರೋಪಿಗಳನ್ನು ಬಂಧಿಸಿದ್ದರು. ಈ ಪೈಕಿ 2ನೇ ಆರೋಪಿ ಕಾಸರಗೋಡು ಮಂಜೇಶ್ವರ ಹೊಸಂಗಡಿ ನಿವಾಸಿ ಮಹಮ್ಮದ್ ಶಫೀಕ್ ಅವರು ನ್ಯಾಯಾಲಯದಲ್ಲಿ ವಿಚಾರಣೆಗೆ ಹಾಜರಾಗದೆ

ಪಡುಬಿದ್ರಿಯಲ್ಲಿ ಈದ್ ಮಿಲಾದ್ ಸಂಭ್ರಮ…

ಪ್ರವಾದಿಯವರ ಜನ್ಮ ದಿನಾಚರಣೆಯ ಅಂಗವಾಗಿ ಪಡುಬಿದ್ರಿಯ ಕಂಚಿನಡ್ಕದಿಂದ ಆರಂಭಗೊಂಡ ಜಾಥದಲ್ಲಿ ನೂರಾರು ಮುಸ್ಲಿಂ ಭಾಂದವರು ಭಾಗವಹಿಸಿದ್ದು, ದ್ವಿಚಕ್ರ ವಾಹನ ಸಹಿತ ಅಟೋ ರಿಕ್ಷಾಗಳು ಈ ಜಾಥದಲ್ಲಿ ಪಾಲ್ಗೊಂಡಿದ್ದವು. ಈ ಬಗ್ಗೆ ಮಾಹಿತಿ ನೀಡಿದ ಉರ್ದು ಶಾಲಾ ಮುಖ್ಯ ಶಿಕ್ಷಕ ಶಫಿಯುಲ್ಲಾ ಎಂಬವರು, ಲೋಕಕ್ಕೆ ಒಳ್ಳೆಯ ವಿಚಾರಗಳನ್ನು ಸಾರಿದ ಪ್ರವಾದಿಯವರ ಜನ್ಮ ದಿನಾಚರಣೆಯನ್ನು ಪಡುಬಿದ್ರಿ ಜಮಾತ್ ಮುಖಾಂತರ ಬಹಳ ಅದ್ಧೂರಿಯಾಗಿ ಆಚರಿಸುತ್ತಿದ್ದು, ಈ ದಿನವೂ ಕಂಚಿನಡ್ಕದಿಂದ

ದಸರಾ ಹಬ್ಬವನ್ನು ದುರುಪಯೋಗ ಪಡಿಸಿಕೊಳ್ಳುತ್ತಿರುವ ಸಂಘಪರಿವಾರ : ಅಬೂಬಕ್ಕರ್ ಕುಳಾಯಿ ಆರೋಪ

ಮಂಗಳೂರು: ತಲಾತಲಾಂತರದಿಂದ ಜಾರಿಯಲ್ಲಿರುವ ಹಲವಾರು ವರ್ಷಗಳ ಇತಿಹಾಸ ಇರುವ ದಸರಾ ಹಬ್ಬವನ್ನು ಸಂಘಪರಿವಾರವು ದುರುಪಯೋಗ ಪಡಿಸಿಕೊಂಡು ತಮ್ಮ ಕೋಮು ರಾಜಕೀಯಕ್ಕೆ ಬಳಸಿಕೊಂಡಿದೆ ಎಂದು ಎಸ್‍ಡಿಪಿಐ ದ.ಕ ಜಿಲ್ಲಾಧ್ಯಕ್ಷರಾದ ಅಬೂಬಕ್ಕರ್ ಕುಳಾಯಿ ಆರೋಪಿಸಿದ್ದಾರೆ. ಹಲವಾರು ವರ್ಷಗಳ ಇತಿಹಾಸ ಇರುವ ನಾಡ ಹಬ್ಬವಾಗಿರುವ ದಸರಾ ಹಬ್ಬವನ್ನು ಸಂಘಪರಿವಾರವೂ ದ್ವೇಷ ಹಬ್ಬಿಸುವ ಹಬ್ಬವಾಗಿ ಮಾರ್ಪಡಿಸುತ್ತಿದೆ.ಗೂಂಡಾ ರಾಜ್ಯ ಎಂಬ ಕುಖ್ಯಾತಿ ಹೊಂದಿದ ಉತ್ತರ ಪ್ರದೇಶ