Home Articles posted by v4team (Page 8)

ಮಂಗಳೂರು: ಪ್ರವಾಸಿಗರನ್ನು ಆಕರ್ಷಿಸುತ್ತಿರುವ ವಾಮಂಜೂರಿನ ಮಾನಸ ಅಮ್ಯೂಸ್‌ಮೆಂಟ್ ವಾಟರ್ ಪಾರ್ಕ್

ಬೇಸಿಗೆ ಸಮಯವನ್ನು ಕಳೆಯಲು ಪ್ರವಾಸ ಕೈಗೊಳ್ಳುವವರಿಗೆ ಸಿಹಿಸುದ್ದಿ..ಮಂಗಳೂರಿನ ವಾಮಂಜೂರಿನಲ್ಲಿ ಅತ್ಯಾಧುನಿಕ ಸೌಲಭ್ಯದೊಂದಿಗೆ ಬೇಸಿಗೆ ಸಮಯವನ್ನು ಕಳೆಯಲು ಸುಸಜ್ಜಿತ ರೀತಿಯಲ್ಲಿದ್ದು ವಿವಿಧ ಮನೋರಂಜನಾ ವಾಟರ್ ಗೇಮ್ಸ್ ಸೇರಿದಂತೆ ಕುದುರೆ ಸವಾರಿ, ಜಿಪ್ ಲೈನ್ ಮೂಲಕ ಜನರನ್ನು ತನ್ನತ್ತ ಸೆಳೆಯುತ್ತಿದೆ ಮಾನಸ ಅಮ್ಯೂಸ್‌ಮೆಂಟ್ ವಾಟರ್ ಪಾರ್ಕ್. ಈ ಬಗ್ಗೆ ಒಂದು

ವಿಟ್ಲ: ವಿದ್ಯುತ್ ತಂತಿಗೆ ಸಿಲುಕಿ ನವಿಲು ಮೃತ್ಯು

ವಿಟ್ಲ: ವಿದ್ಯುತ್ ತಂತಿಗೆ ಸಿಲುಕಿ ನವಿಲು ಮೃತಪಟ್ಟ ಘಟನೆ ಮಾಣಿ ಸಮೀಪದ ಬುಡೋಳಿ ಎಂಬಲ್ಲಿ ನಡೆದಿದೆ. ನವಿಲು ಮೃತಪಟ್ಟ ಬಗ್ಗೆ ಇಲ್ಲಿನ ರಿಕ್ಷಾ ಚಾಲಕರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ.ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆಯವರು ಮೃತ ನವಿಲನ್ನು ಸ್ಥಳದಿಂದ ಅನಂತಾಡಿ ಆರಣ್ಯ ಇಲಾಖೆಯ ಸಿಬ್ಬಂದಿಯವರಿಗೆ ಹಸ್ತಾಂತರ ಮಾಡಿದ್ದಾರೆ.

ಮಂಗಳೂರು: ವಿಮಾನ ನಿಲ್ದಾಣಕ್ಕೆ ಪ್ರಜ್ವಲ್ ರೇವಣ್ಣ ಆಗಮನ ಸಾಧ್ಯತೆ- ವಶಕ್ಕೆ ಪಡೆಯಲು SIT ಸಿದ್ಧತೆ

ಅಶ್ಲೀಲ ವಿಡಿಯೋ ಪ್ರಕರಣ ಆರೋಪದ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಇಂದು ವಿದೇಶದಿಂದ ಭಾರತಕ್ಕೆ ವಾಪಸಾಗುವ ಸಾಧ್ಯತೆ ಇದ್ದು, ಭಾರತಕ್ಕೆ ಬಂದಿಳಿಯುತ್ತಿದ್ದಂತೆ ವಶಕ್ಕೆ ಪಡೆದುಕೊಳ್ಳಲು ಎಸ್‌ಐಟಿ ಸಿದ್ಧತೆ ಮಾಡಿಕೊಂಡಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು, ಮಂಗಳೂರು, ಗೋವಾ ಸೇರಿದಂತೆ ವಿವಿಧ ವಿಮಾನ ನಿಲ್ದಾಣಗಳಲ್ಲಿ ವಿಶೇಷ ಕಣ್ಣಾವಲಿರಿಸಲಾಗಿದೆ. ಪ್ರಜ್ವಲ್ ಪತ್ತೆಗಾಗಿ ಈಗಾಗಲೇ ಲುಕ್‌ಔಟ್ ನೋಟಿಸ್ ಕೂಡಾ ಜಾರಿಯಾಗಿರುವುದರಿಂದ ಪ್ರಜ್ವಲ್ ಭಾರತಕ್ಕೆ

ವಿಟ್ಲ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು

ವಿಟ್ಲ: ನಿಯಂತ್ರಣ ತಪ್ಪಿ ಕ್ರೇಟಾ ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ವಿಟ್ಲ ಪುತ್ತೂರು ರಸ್ತೆಯ ಚಂದಳಿಕೆ ಎಂಬಲ್ಲಿ ನಡೆದಿದೆ. ಕಾರು ಪಲ್ಟಿಯಾದ ಪರಿಣಾಮ ಕಾರು ಸಂಪೂರ್ಣ ನುಜ್ಜು ಗುಜ್ಜಾಗಿದ್ದು ಪವಾಡ ಎಂಬಂತೆ ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ ಎಂದು ತಿಳಿದು ಬಂದಿದೆ.

ಶ್ರೀ ಶಾರದ ಸದ್ವಿದ್ಯಾ ಶಿಬಿರ ಸಮಾರೋಪ ಸಮಾರಂಭ ಕಾರ್ಯಕ್ರಮ

ಬೈಂದೂರು ತಾಲೂಕಿನ ನಾವುಂದ ಬಡಾಕೆರೆ ಧಾರ್ಮಿಕ ಮಂದಿರದಲ್ಲಿ ಕಳೆದ 21 ದಿನಗಳ ಕಾಲ ನಡೆದ ಶ್ರೀ ಶಾರದ ಸದ್ವಿದ್ಯಾ ಶಿಬಿರದ ಸಮಾರೋಪ ಸಮಾರಂಭ ಕಾರ್ಯಕ್ರಮ ನಡೆಯಿತು.ವಿದ್ಯಾರ್ಥಿಗಳು ಶಿಬಿರದ ಅನುಭವನ್ನು ಹಂಚಿಕೊಂಡರು.ವೇದಾಂತ ಪ್ರಾಧ್ಯಾಪಕರು ಕೇಂದ್ರಿಯ ಸಂಸ್ಕøತ ವಿಶ್ವವಿದ್ಯಾನಿಲಯ ರಾಜೀವ್ ಗಾಂಧಿ ಪರಿಸರ ಶೃಂಗೇರಿ ಡಾ.ಗಣೇಶ್ ಈಶ್ವರ ಭಟ್ ಅವರು ಮಾತನಾಡಿ,ಆರ್ಯುವೇದ ಮತ್ತು ವೇದ ಶಾಸ್ತ್ರ ಸೇರಿದಂತೆ ಸನಾತನ ಪರಂಪರೆನ್ನು ಹೊಂದಿರುವ ಭಾರತೀಯ ವಿದ್ಯೆಗೆ ಆಧುನಿಕ

ಬೈಂದೂರು ಸುರ್ಕುಂದ ವಾರ್ಡ್‍ನಲ್ಲಿ ಬಿರುಸಿನ ಪ್ರಚಾರ

ಬೈಂದೂರು:ರಾಷ್ಟ್ರಭಕ್ತರ ಬಳಗದ ವತಿಯಿಂದ ಬೈಂದೂರು ವಿಧಾನಸಭಾ ಕ್ಷೇತ್ರದ ಸುರ್ಕುಂದ ವಾರ್ಡ್ ಬೂತ್ ನಂ.34 ರಲ್ಲಿ ನಿತ್ಯ ಮೊಗವೀರ ಅವರ ಸಾರಥ್ಯದಲ್ಲಿ ವೆಂಕಟೇಶ ಕಲ್ಮಕ್ಕಿ,ಪ್ರಶಾಂತ್ ಮೊಗವೀರ ಹಾಗೂ ಸ್ಥಳೀಯರ ಸಹಕಾರದಲ್ಲಿ ಮಾಜಿ ಮುಖ್ಯ ಮಂತ್ರಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ.ಎಸ್ ಈಶ್ವರಪ್ಪ ಪರವಾಗಿ ಮನೆ ಭೇಟಿ ಮಾಡಿ ಬಿರುಸಿನ ರೀತಿಯಲ್ಲಿ ಮತ ಪ್ರಚಾರವನ್ನು ಮಾಡಲಾಯಿತು.ಕಾರ್ಯಕರ್ತರು ಬಿರು ಬಿಸಿಲನ್ನು ಲೆಕ್ಕಿಸದೆ ಪ್ರಚಾರದ ಕಾರ್ಯದಲ್ಲಿ

ಮಾಲ್ ಗೆ ತೆರಳಿದ ಎರಡು ಮಕ್ಕಳ ತಾಯಿ ನಾಪತ್ತೆ

ಉಳ್ಳಾಲ : ನಗರದ ಸಿಟಿ ಸೆಂಟರ್ ಮಾಲ್ ಗೆಂದು ತೆರಳಿದ್ದ ಚೆಂಬುಗುಡ್ಡೆ ನಿವಾಸಿ ಇಬ್ಬರು ಮಕ್ಕಳ ತಾಯಿ ನಾಪತ್ತೆಯಾಗಿರುವ ಕುರಿತು ಮಂಗಳೂರು ಉತ್ತರ ಮಹಿಳಾ ಪೊಲೀಸ್ ಠಾಣೆಯಲ್ಲಿ ನಾಪತ್ತೆ ದೂರು ದಾಖಲಾಗಿದೆ.ಚೆಂಬುಗುಡ್ಡೆ ಕೆರೆಬೈಲ್ ಗುಡ್ಡೆ ನಿವಾಸಿ ಸಫಾನ (27) ನಾಪತ್ತೆ ಯಾದವರು.ಎ.28 ರಂದು ತಾಯಿ ಜೊತೆಗೆ ಸಿಟಿಸೆಂಟರ್ ಗೆಂದು ತೆರಳಿರುವ ಸಫಾನ, ಬಳಿಕ ಮನೆಯತ್ತ ಬಾರದೇ ನಾಪತ್ತೆಯಾಗಿದ್ದಾಳೆ. ವಿವಾಹಿತೆಯಾಗಿರುವ ಸಫಾನ ಇಬ್ಬರು ಮಕ್ಕಳ ತಾಯಿಯಾಗಿದ್ದಾಳೆ. ಈಕೆಯನ್ನು

ಕೋಟೆಕಾರು : ಕಾರು ಢಿಕ್ಕಿ – ಪಾದಚಾರಿ ಸಾವು

ಉಳ್ಳಾಲ: ಕಾರು ಢಿಕ್ಕಿ ಹೊಡೆದು ಪಾದಚಾರಿ ಬಿಜೆಪಿ ಕಾರ್ಯಕರ್ತ ಮೃತಪಟ್ಟ ಘಟನೆ ರಾ.ಹೆ.66 ರ ಕೋಟೆಕಾರು ಬಳಿಯ ಅಡ್ಕ ಎಂಬಲ್ಲಿ ನಡೆದಿದೆ. ಕೋಟೆಕಾರು ನೆಲ್ಲಿ ಸ್ಥಳ ಕಾಳಿಕಾಂಬ ದೇವಸ್ಥಾನದ ಬಳಿಯ ನಿವಾಸಿ ಶ್ರೀಕಾಂತ್ (46)ಮೃತರು.ಶ್ರೀಕಾಂತ್ ಆಟೋ ಇಲೆಕ್ಟ್ರೀಷಿಯನ್ ಕೆಲಸ ಮಾಡುತ್ತಿದ್ದರು.ಇಂದು ಮದ್ಯಾಹ್ನ ಅಡ್ಕದಲ್ಲಿ ಹೆದ್ದಾರಿ ದಾಟುತ್ತಿದ್ದ ವೇಳೆ ಕೇರಳದಿಂದ ಧಾವಿಸುತ್ತಿದ್ದ ಕಾರು ಶ್ರೀಕಾಂತ್ಗೆ ಢಿಕ್ಕಿ ಹೊಡೆದಿದೆ.ಗಂಭೀರ ಗಾಯಗೊಂಡ ಶ್ರೀಕಾಂತ್ ರನ್ನು ಅಪಘಾತ

ವಿಟ್ಲ: ಚಲಿಸುತ್ತಿದ್ದ ಬಸ್ಸಿನ ಗಾಜು ಒಡೆದು ಇಬ್ಬರಿಗೆ ಗಾಯ

ವಿಟ್ಲ: ಚಲಿಸುತ್ತಿದ್ದ ಕೇರಳ ರಾಜ್ಯದ ಬಸ್ಸಿನ ಗಾಜು ಹೊಡೆದು ಪರಿಣಾಮ ಇಬ್ಬರು ಮಕ್ಕಳು ಮತ್ತು ಚಾಲಕ ಗಾಯಗೊಂಡ ಘಟನೆ ಉರಿಮಜಲು ಎಂಬಲ್ಲಿ ಸಂಭವಿಸಿದೆ. ಪುತ್ತೂರು ಕಡೆಯಿಂದ ವಿಟ್ಲ ಮೂಲಕ ಕಾಸರಗೋಡುಗೆ ಹೊರಟಿದ್ದ ಕೇರಳ ರಾಜ್ಯದ ಮಲಬಾರ್ ಬಸ್ ಉರಿಮಜಲು ಸೊಸೈಟಿ ತಲುಪುತ್ತಿದ್ದಂತೆ ಅದರ ಮುಂಭಾಗ ಗಾಜು ಒಡೆದಿದೆ ಇದರಿಂದ ಮುಂಭಾಗದಲ್ಲಿದ್ದ ಬಾಲಕ  ಗಂಭೀರ ಗಾಯಗೊಂಡಿದ್ದು, ಚಾಲಕ ಮತ್ತು ಮತ್ತೊಂದು ಮಗುವಿಗೆ ಸಣ್ಣಪುಟ್ಟ ಗಾಯವಾಗಿದೆ. ಗಂಭೀರ ಗಾಯಗೊಂಡ ಮಗುವನ್ನು

ಸುಳ್ಯ: ಮಂಡೆಕೋಲು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ಜಾತ್ರೋತ್ಸವ: ಸಂಭ್ರಮದಿಂದ ನಡೆದ ದೇವರ ದರ್ಶನ ಬಲಿ ಉತ್ಸವ

ಸುಳ್ಯ: ಪುನಃ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ ಸಂಭ್ರಮದಲ್ಲಿ ಮುಳುಗೆದ್ದ ಮಂಡೆಕೋಲಿನ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನ ಇದೀಗ ವಾರ್ಷಿಕ ಜಾತ್ರೋತ್ಸವಕ್ಕೆ ಸಿದ್ಧಗೊಂಡಿದ್ದು ಗುರುವಾರ ಬೆಳಿಗ್ಗೆ ಕ್ಷೇತ್ರದಲ್ಲಿ ದರ್ಶನಬಲಿ ಉತ್ಸವ ನಡೆಯಿತು. ದೇವರ ವಿಗ್ರಹ ಹೊತ್ತ ಪ್ರಸಾದ ಅಡಿಗರು ದರ್ಶನ ಬಲಿ ಉತ್ಸವದ ವಿಧಿ ವಿಧಾನಗಳನ್ನು ನೆರವೇರಿಸಿದರು.ದೇಗುಲದ ಪ್ರಧಾನ ಅರ್ಚಕ ಅನಂತಕೃಷ್ಣ ಪಾಂಗಣ್ಣಾಯ ಹಾಗೂ ಇತರ ಅರ್ಚಕರು ಸಹಕರಿಸಿದರು. ಕೊಂಬು, ವಾದ್ಯ, ಚೆಂಡೆ,