ಆಟೋ ರಿಕ್ಷಾ ಚಾಲಕ ಮಾಲಕರ ಸಂಘದ ಬೆಳ್ಳಿಹಬ್ಬ ಮಹೋತ್ಸವ

ರಿಕ್ಷಾ ಚಾಲಕರು ಸಮಾಜದ ಮುಖ್ಯವಾಹಿನಿಯಲ್ಲಿರುವವರುನಾವು ರಿಕ್ಷಾ ಚಾಲಕರೆಂಬ ಕೀಳರಿಮೆ ಬೇಡ. ಜೀವನದಲ್ಲಿ ಮುಂದೆ ಬರಬೇಕಾದರೆ, ಯಶಸ್ಸು ಕಾಣಬೇಕಾದರೆ ದುಶ್ಚಟಗಳಿಂದ ದೂರವಿರಬೇಕು. ನಾವು ನಮ್ಮ ವೃತ್ತಿಗೆ ನ್ಯಾಯ ಒದಗಿಸುವ ಕೆಲಸ ಮಾಡಿದಾಗ ತನ್ನಿಂದ ತಾನಾಗಿ ಸಮಾಜದ ಗೌರವ ಪ್ರಾಪ್ತಿಯಾಗುತ್ತದೆ. ಗುಣಕ್ಕೆ ಮತ್ತು ವೃತ್ತಿಗೆ ಎಂದೂ ಬಡತನವಿಲ್ಲ ಎಂದು ರಾಜ್ಯ ಸಮಾಜ ಕಲ್ಯಾಣ ಮಂಡಳಿಯ ಮಾಜಿ ಅಧ್ಯಕ್ಷೆ ದಿವ್ಯಪ್ರಭಾ ಗೌಡ ಚಿಲ್ತಡ್ಕ ಅವರು ಹೇಳಿದರು.

ಪುತ್ತೂರಿನ ಮಹಾಲಿಂಗೇಶ್ವರ ದೇವಸ್ಥಾನದ ನಟರಾಜ ವೇದಿಕೆಯಲ್ಲಿ ನಡೆದ ಸ್ನೇಹ ಸಂಗಮ ಆಟೋ ರಿಕ್ಷಾ ಚಾಲಕ ಮಾಲಕರ ಸಂಘದ ಬೆಳ್ಳಿ ಹಬ್ಬ ಸಂಭ್ರಮಾಚರಣೆ `ಸ್ನೇಹೋತ್ಸವ’ ಕಾರ್ಯಕ್ರಮದ ಸಂಜೆ ನಡೆದ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಚಿತ್ರನಟ ಅರವಿಂದ ಬೋಳಾರು ಅವರು ಮಾತನಾಡಿ, ಇನ್ನೊಬ್ಬರ ಮನಸ್ಸಿಗೆ ಬೇಸರವಾಗದಂತೆ ನಡೆದುಕೊಳ್ಳುವ ಮನೋಸ್ಥಿತಿ ನಮ್ಮ ಮನಸ್ಸಿನೊಳಗಿಂದ ಮೂಡಿಬರಬೇಕು. ಹಣವಿದ್ದ ಮಾತ್ರಕ್ಕೆ ಸಮಾಜದ ಗೌರವ ಸಿಗುವುದಿಲ್ಲ, ಒಳ್ಳೆಯ ಮನಸ್ಸಿನ ವ್ಯಕ್ತಿಗಳಿಗೆ ಯಾವಾಗಲೂ ಗೌರವ ಇರುತ್ತದೆ. ಕೊಡುವ ಕೈಗಳನ್ನು ನಾವು ಎಂದೂ ಮರೆಯಬಾರದು ಎಂದರು.

ಇದೆ ಸಂದರ್ಭದಲ್ಲಿ 800 ಮಂದಿ ರಿಕ್ಷಾ ಚಾಲಕರಿಗೆ ಸಮವಸ್ತ್ರ ರಾಜ್ಯ ಸಮಾಜ ಕಲ್ಯಾಣ ಮಂಡಳಿಯ ಮಾಜಿ ಅಧ್ಯಕ್ಷೆ ದಿವ್ಯಪ್ರಭಾ ಗೌಡ ಚಿಲ್ತಡ್ಕ ಅವರು ಸ್ನೇಹ ಸಂಗಮ ರಿಕ್ಷಾ ಚಾಲಕ ಮಾಲಕರ ಸಂಘದ 800 ಮಂದಿ ಸದಸ್ಯ ರಿಕ್ಷಾ ಚಾಲಕರಿಗೆ ನೀಡಿದ ಸಮವಸ್ತ್ರವನ್ನು ಸಮಾರಂಭದಲ್ಲಿ ಸಾಂಕೇತಿಕವಾಗಿ ವಿತರಿಸಲಾಯಿತು. ದಿವ್ಯಪ್ರಭಾ ಅವರನ್ನು ಸಂಘದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಸಂಘದ ಮಾಜಿ ಅಧ್ಯಕ್ಷರುಗಳನ್ನು ಸನ್ಮಾನಿಸಿ ಗೌರವಿಸಲಾಯಿತು.

ವೇದಿಕೆಯಲ್ಲಿ ಸ್ನೇಹ ಸಂಗಮ ಅಟೋ ರಿಕ್ಷಾ ಚಾಲಕ ಮಾಲಕರ ಸಂಘದ ಗೌರವಾಧ್ಯಕ್ಷ ನೆಲ್ಲಿಕಟ್ಟೆ ಜಗದೀಶ್ ಶೆಟ್ಟಿ,ಸ್ನೇಹ ಸಂಗಮ ಅಟೋ ರಿಕ್ಷಾ ಚಾಲಕ ಮಾಲಕರ ಸಂಘದ ಗೌರವಾಧ್ಯಕ್ಷ ನೆಲ್ಲಿಕಟ್ಟೆ ಜಗದೀಶ್ ಶೆಟ್ಟಿ, ಪುತ್ತೂರು ನಗರ ಸಂಚಾರ ಪೆÇಲೀಸ್ ಠಾಣೆಯ ಇನ್ಸ್ಪೆಕ್ಟರ್ ರಾಮ ನಾಯ್ಕ್, ಮತ್ತಿತ್ತರರು ಉಪಸ್ಥಿತರಿದ್ದರು.

Related Posts

Leave a Reply

Your email address will not be published.