ಹೊಂಡ-ಗುಂಡಿಗಳ ಆಗರವಾಗಿರುವ ಬೈಕಂಪಾಡಿ ರಸ್ತೆ

ಮಳೆಗಾಲ ಆರಂಭವಾಗುತ್ತಿದ್ದಂತೆ ನಗರದ ಬಹತೇಕ ರಸ್ತೆಗಳು ಹೊಂಡ-ಗುಂಡಿಗಳಿಂದ ಆವೃತ್ತವಾಗಿದೆ. ಇದೀಗ ಬೈಕಂಪಾಡಿ ಇಂಡಸ್ಟ್ರೀಯಲ್ ಪ್ರದೇಶಕ್ಕೆ ಹೋಗುವ ರಸ್ತೆಯ ಪರಿಸ್ಥಿತಿ ಕೂಡ ಹಾಗೆಯೇ ಇದೆ. ಹೊಂಡ-ಗುಂಡಿ ರಸ್ತೆಯಲ್ಲಿ ಮಳೆ ನೀರು ನಿಂತು ವಾಹನ ಸವಾರರಿಗೆ ಸಂಕಷ್ಟ ತಂದೊಡ್ಡಿದೆ. ಮಾತ್ರವಲ್ಲದೆ ಅಪಘಾತಗಳು ಸಂಭವಿಸುತ್ತಿದೆ. ಈ ಸಾರ್ವಜನಿಕರು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಮನವಿಯನ್ನು ನೀಡಿದ್ರೂ ಸಹ ಯಾವುದೇ ಕ್ರಮ ತೆಗೆದುಕೊಂಡಿಲ್ಲ. ಈ ಬಗ್ಗೆ ಇನ್ನಾದರೂ ಸಂಬಂಧಪಟ್ಟ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಬೈಕಂಪಾಡಿ ಕೈಗಾರಿಕಾ ಪ್ರದೇಶದ ರಸ್ತೆಗಳನ್ನು ಸರಿಪಡಿಸುವಂತೆ ಸಾರ್ವಜನಿಕರು ಒತ್ತಾಯಿಸುತ್ತಿದ್ದಾರೆ.

Related Posts

Leave a Reply

Your email address will not be published.