ಬೈಂದೂರಿನ ಬಡಾಕೆರೆಯಲ್ಲಿ ಚಿರತೆ ಪ್ರತ್ಯಕ್ಷ, ಜಾನುವಾರುಗಳ ಮೇಲೆ ದಾಳಿ

ಬೈಂದೂರ: ಬೈಂದೂರು ತಾಲೂಕಿನ ನಾಡ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಡಾಕೆರೆಯಲ್ಲಿ ಚಿರತೆಗಳು ಕಾಣಿಸಿಕೊಂಡಿದ್ದು ಗ್ರಾಮಸ್ಥರು ಭಯಭೀತರಾಗಿದ್ದಾರೆ. ಬಡಾಕೆರೆ ಗ್ರಾಮದ ಆಚಾರಬೆಟ್ಟು ಎಂಬಲ್ಲಿ ನಿನ್ನೆ ರಾತ್ರಿ ಸುಮಾರು 8.30ರ ಹೊತ್ತಿಗೆ ಚಿರತೆ ರಸ್ತೆಯಲ್ಲಿ ಓಡಾಡುತ್ತಿರುವುದು ವಾಹನ ಸವಾರರು ಗಮನಿಸಿ ಚಿತ್ರ ಸಹಿತ ಸರೆಹಿಡಿದ್ದಾರೆ.ಕೆಲವು ದಿನಗಳಿಂದ ಆಚಾರಬೆಟ್ಟು ಪ್ರದೇಶದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಚಿರತೆ ಕಾಣಿಸಿಕೊಳ್ಳುತ್ತಿರುವುದಾಗಿ ಗ್ರಾಮಸ್ಥರು ಮಾಹಿತಿ ನೀಡಿದ್ದಾರೆ, ಜಾನುವಾರುಗಳ ಮೇಲೆ ದಾಳಿ ಮಾಡಿದೆ.
ಬಡಾಕೆರೆ ಗ್ರಾಮದ ಮರ್ಯಾಡಿಹಿತ್ಲು ಮತ್ತು ಕಾರಂತರ ಮನೆ ಕೊಟ್ಟಿಗೆಯಲ್ಲಿ ಕಟ್ಟಿರುವ ಚಿಕ್ಕ ಕರುವೊಂದನ್ನು ತಿಂದು ಹಾಕಿದೆ.ಕೆಲವು ದಿನಗಳಿಂದ ನಿರಂತರವಾಗಿ ಬಡಾಕೆರೆ, ಆಚಾರಬೆಟ್ಟು, ಜಡ್ಡಾಡಿ,ಕೋಣ್ಕಿ, ಭಾಗಗಳಲ್ಲಿ ಚಿರತೆಯ ಸಂಚರಿಸುತ್ತಿದ್ದು ಸಂಜೆ ಹೊತ್ತಿನ ಬಳಿಕ ಗ್ರಾಮಸ್ಥರು ಮನೆಯಿಂದ ಹೊರಬರಲು ಹೆದರುವಂತ್ತಾಗಿದೆ. ಅರಣ್ಯ ಪ್ರದೇಶಗಳಿಂದ ಚಿರತೆ ಬಂದಿರುವ ಸಾಧ್ಯತೆ ಎಂದು ತಿಳಿದುಬಂದಿದೆ.ಸಂಬಂಧಪಟ್ಟ ಇಲಾಖೆಯವರು ಜನರ ಹಾಗೂ ಜಾನುವಾರುಗಳ ರಕ್ಷಣೆಗೆ ಅಗತ್ಯ ಕ್ರಮಕೈಗೊಳ್ಳಬೇಕು, ಆದಷ್ಟು ಬೇಗ ಚಿರತೆಯನ್ನು ಹಿಡಿಯಬೇಕು ಎಂದು ಆಗ್ರಹಿಸಿದ್ದಾರೆ.
ಶಿವಮೊಗ್ಗ ಕ್ಷೇತ್ರದ ಸಂಸದರಾದ ಬಿ ವೈ ರಾಘವೇಂದ್ರ ಅವರು ಬೈಂದೂರು ಕ್ಷೇತ್ರದ ಹೆಮ್ಮಾಡಿ ಯಲ್ಲಿ ನಡೆದ ಅಧಿಕಾರಿಗಳೊಂದಿಗೆ ಸಭೆ ನಡೆಸುತ್ತಿರುವ ಸಂದರ್ಭದಲ್ಲಿ ನಾಡ ಗ್ರಾಮದಲ್ಲಿ ಕಾಣಿಸಿಕೊಳ್ಳುತ್ತಿರುವ ಚಿರತೆ ಬಗ್ಗೆ ಗಮನ ಹರಿಸುವಂತೆ ಅಧಿಕಾರಿಗಳಿಗೆ ಸೂಚನೆಗಳನ್ನು ನೀಡಿದ್ದರು. ಅರಣ್ಯ ಇಲಾಖೆ ಇಲ್ಲಿ ತನಕ ಚಿರತೆಯನ್ನು ಸೆರೆ ಹಿಡಿಯಲು ಯಾವುದೇ ರೀತಿಯ ಕ್ರಮಗಳನ್ನು ಕೈಗೊಂಡಿಲ್ಲ
