ಆಕಸ್ಮಿಕವಾಗಿ ವಿದ್ಯುತ್ ಸ್ಪರ್ಶಿಸಿ ವ್ಯಕ್ತಿ ಮೃತ್ಯು

ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ವಿದ್ಯುತ್ ಸ್ಪರ್ಶಿಸಿದ ಪರಿಣಾಮ ಭುಜಂಗ ಶೆಟ್ಟಿ ಅಂಗಡಿ ಮನೆ ಕೋಣ್ಕಿ ಅವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾಡಾ ಗ್ರಾಮದಲ್ಲಿ ನಡೆದಿದೆ. ತೋಟದಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಭುಜಂಗ ಶೆಟ್ಟಿ ಅವರಿಗೆ ವಿದ್ಯತ್ ಸ್ಮರ್ಶಿಸಿ ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ್ದಾರೆ. ಶವವನ್ನು ಸ್ಥಳೀಯರ ಸಹಕಾರದಿಂದ ಆಸ್ಪತ್ರೆಗೆ ಸಾಗಿಸಲಾಗಿದೆ. ಗಂಗೊಳ್ಳಿ ಪೊಲೀಸ್ ಠಾಣೆ ಪಿಎಸ್‍ಐ ವಿನಯ್ ಮತ್ತು ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು, ಈ ಸಂಬಂಧ ಗಂಗೊಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
