ಬೈಂದೂರು ತಾಲೂಕು ಆಡಳಿತ ಸೌಧದ ನೂತನ ಕಟ್ಟಡ ಉದ್ಘಾಟನೆ

ಬೈಂದೂರು: ಬೈಂದೂರು ತಾಲೂಕು ಆಡಳಿತ ಸೌಧದ ನೂತನ ಕಟ್ಟಡ ಉದ್ಘಾಟನೆ ಸಮಾರಂಭ ಬೈಂದೂರಿನಲ್ಲಿ ನಡೆಯಿತು. ಸಂಸದ ಬಿ. ವೈ ರಾಘವೇಂದ್ರ ಅವರು ನೂತನ ಆಡಳಿತ ಸೌಧದ ನೂತನ ಕಟ್ಟಡ ಲೋಕಾರ್ಪಣೆಗೊಳಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ತಾಲೂಕು ಘೋಷಷಣೆಯಾದ ಬಳಿಕ ಬೈಂದೂರು ತಾಲೂಕು ಕೇಂದ್ರಕ್ಕೆ ಅವಶ್ಯಕತೆಯಿರುವ ಮೂಲಭೂತ ಸೌಕರ್ಯಗಳನ್ನು ಒದಗಿಸುವುದು ಪ್ರಮುಖ ಜವಬ್ದಾರಿಯಾಗಿರುತ್ತದೆ.ಹೀಗಾಗಿ ಬೈಂದೂರು ಅಭಿವೃದ್ದಿ ಬಗ್ಗೆ ವಿಶೇಷ ಆಸಕ್ತಿ ವಹಿಸಿ ಹತ್ತು ಕೋಟಿ ಅನುದಾನದ ತಾಲೂಕು ಆಡಳಿತ ಸೌಧ ಅತೀ ಶೀಘ್ರವಾಗಿ ನಿರ್ಮಾಣಗೊಂಡಿದೆ ಎಂದರು.

ಬೈಂದೂರು ಶಾಸಕ ಬಿ.ಎಮ್.ಸುಕುಮಾರ ಶೆಟ್ಟಿ ಅಧ್ಯಕ್ಷತೆ ವಹಿಸಿ ಮಾತನಾಡಿ ಬೆಳಕು ಯೋಜನೆಯಲ್ಲಿ ಬಹುತೇಕ ಮನೆಗಳಿಗೆ ವಿದ್ಯುತ್ ಸೌಲಭ್ಯ ಶೈಕ್ಷಣಿಕ ಅಭಿವೃದ್ದಿಯಡಿಯಲ್ಲಿ ಪ್ರತಿ ಶಾಲೆಗಳಿಗೆ ಸುಸಜ್ಜಿತ ಕೊಠಡಿ ನಿರ್ಮಾಣ,ರಸ್ತೆ,ಏತ ನೀರಾವರಿ, ಮೀನುಗಾರರಿಗೆ ಅನುಕೂಲವಾಗುವ ಯೋಜನೆಗಳ ಮೂಲಕ ಬೈಂದೂರು ಸರ್ವತೋಮುಖ ಪ್ರಗತಿ ಕಂಡಿದೆ.ತಾಲೂಕು ಆಡಳಿತ ಸೌಧದಲ್ಲಿ ಜನಸಾಮಾನ್ಯರಿಗೆ ಸಮರ್ಪಕ ಸೇವೆ ನೀಡುವ ಜವಬ್ದಾರಿ ಅಧಿಕಾರಿಗಳದ್ದಾಗಿದೆ ಎಂದರು.

ಮುಖ್ಯ ಅತಿಥಿಗಳಾಗಿ ಉಡುಪಿ ಜಿಲ್ಲಾಧಿಕಾರಿ ಕೂರ್ಮರಾವ್ ಎಂ,ಉಡುಪಿ ಎಸ್‍ಪಿ ಅಕ್ಷಯ್ ಮಚ್ಚೀಂದ್ರ, ಉದಯ ಕುಮಾರ್ ಶೆಟ್ಟಿ,ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್,ಕುಂದಾಪುರ ಸಹಾಯಕ ಆಯುಕ್ತೆ ರಶ್ಮಿ ಎಸ್.ಆರ್,ಕರ್ನಾಟಕ ಗೃಹ ಮಂಡಳಿ ಸಮನ್ವಯ ಅಭಿಯಂತರೆ ಸಿ.ಕೆ ಮಂಜುಳ,ಸಹಾಯಕ ಕಾರ್ಯಪಾಲಕ ಅಭಿಯಂತರೆ ಎಮ್.ಸಹನ,ಯೋಜನಾ ಆಯೋಗದ ಸದಸ್ಯೆ ಪ್ರಿಯದರ್ಶಿನಿ ದೇವಾಡಿಗ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ತಾಲೂಕು ಆಡಳಿತದ ಕಟ್ಟಡ ನಿರ್ಮಾಣದ ಗುತ್ತಿಗೆದಾರ ಸುಜಯ್ ಕುಮಾರ್ ಶೆಟ್ಟಿ,ಕರಾವಳಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ತಿಂಗಳೆ ವಿಕ್ರಮಾರ್ಜುನ ಹೆಗ್ಡೆ, ಸಹಾಯಕ ಕಾರ್ಯಪಾಲಕ ಅಭಿಯಂತರೆ ಎಮ್.ಸಹನ ಹಾಗೂ ಕಾರ್ಯಪಾಲಕ ಅಭಿಯಂತರೆ ಮಂಜುಳಾ ರವರನ್ನು ಸಮ್ಮಾನಿಸಲಾಯಿತು.ಅರ್ಹ ಫಲಾನುಭವಿಗಳಿಗೆ 94ಸಿ ಹಕ್ಕುಪತ್ರ ವಿತರಿಸಲಾಯಿತು.ಬೈಂದೂರು ತಹಶೀಲ್ದಾರ ಶ್ರೀಕಾಂತ ಹೆಗ್ಡೆ ಸ್ವಾಗತಿಸಿದರು.ಶಿಕ್ಷಕರಾದ ಗಣಪತಿ ಹೋಬಳಿದಾರ್ ಹಾಗೂ ಸುಧಾಕರ ಪಿ.ಬೈಂದೂರು ಕಾರ್ಯಕ್ರಮ ನಿರ್ವಹಿಸಿದರು.ಸುಬ್ರಹ್ಮಣ್ಯ ಜಿ.ಉಪ್ಪುಂದ ವಂದಿಸಿದರು.

Related Posts

Leave a Reply

Your email address will not be published.