ಬೈಂದೂರು ಬಿಜೆಪಿ ಅಭ್ಯರ್ಥಿ ಗುರುರಾಜ್ ಗಂಟಿಹೊಳೆ ಅವರಿಂದ ಬಿರುಸಿನ ಮತ ಪ್ರಚಾರ
ಬೈಂದೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗುರುರಾಜ್ ಗಂಟಿಹೊಳೆ ಅವರು ಗಂಗೊಳ್ಳಿ ಮತ್ತು ಹೊಸೂರು ಭಾಗದಲ್ಲಿ ಚುನಾವಣಾ ಪ್ರಚಾರ ಕೈಗೊಂಡರು. ಈ ಸಂದರ್ಭದಲ್ಲಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಮಾತನಾಡಿ, ಈ ಬಾರಿಯ ಚುನಾವಣೆಯಲ್ಲಿ ಗುರುರಾಜ್ ಗಂಟಿಹೊಳೆ ಅವರನ್ನು ಅತ್ಯಧಿಕ ಮತಗಳ ಅಂತರದಿಂದ ಗೆಲ್ಲಿಸಿ ಎಂದು ಹೇಳಿದರು. ಈ ಸಂದರ್ಭದಲ್ಲಿ ಬೈಂದೂರಿನ ಬಿಜೆಪಿ ಅಭ್ಯರ್ಥಿ ಗುರುರಾಜ್ ಗಂಟಿಹೊಳೆ, ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.