ಬೈಂದೂರು :ನೆರೆ ಪೀಡಿತ ಪ್ರದೇಶಗಳಿಗೆ ಶಾಸಕ ಗುರುರಾಜ್ ಗಂಟಿಹೊಳೆ ಭೇಟಿ

ಕರಾವಳಿ ಭಾಗದಲ್ಲಿ ನಿರಂತರ ಮಳೆ ಸುರಿಯುತ್ತಿದ್ದು. ರೆಡ್ ಅಲರ್ಟ್ ಘೋಷಣೆ ಮಾಡಿದ್ದಾರೆ. ಬೈಂದೂರು ಭಾಗದಲ್ಲಿ ತಗ್ಗು ಪ್ರದೇಶಗಳು ಜಲಾವೃತಗೊಂಡಿದ್ದು, ಶಾಸಕ ಗುರುರಾಜ್ ಗಂಟಿಹೊಳೆ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಸೌಪರ್ಣಿಕಾ ನದಿ ನೀರಿನ ಮಟ್ಟ ಹೆಚ್ಚಾಗಿದ್ದು, ನದಿಯ ಅಕ್ಕ ಪಕ್ಕ ಪ್ರದೇಶಗಳಾದ ನಾವುಂದ, ಸಾಲ್ಬುಡ, ಬಡಾಕೆರೆ, ನಾಡ, ಕಡ್ಕೆ, ಮರವಂತೆ, ಪಡುಕೋಣೆ, ಪ್ರದೇಶಗಳಿಗೆ ಭೇಟಿ ನೀಡಿ ನೆರೆಯಿಂದ ಆಗುವ ಸಮಸ್ಯೆಗಳ ಬಗ್ಗೆ ಸ್ಥಳೀಯ ಹಾಗೂ ಪಂಚಾಯತ್ ಪ್ರತಿನಿಧಿಯೊಂದಿಗೆ ಚರ್ಚಿಸಿದರು.

ನಂತರ ಜಾನುವಾರುಗಳಿಗೆ ಶಾಶ್ವತ ಕೊಟ್ಟಿಗೆ ನಿರ್ಮಾಣ ಹಾಗೂ ಗದ್ದೆ ಪ್ರದೇಶದಲ್ಲಿರುವ ತೋಡುಗಳ ಹೂಳೆತ್ತುವ ಕಾರ್ಯ ನದಿ ದಂಡೆ ನಿರ್ಮಾಣಕ್ಕೆ ವಿಶೇಷ ಅನುದಾನ ಬಗ್ಗೆ ಚರ್ಚಿಸಿದರು.
ಮುದೂರಿನ ಯುವಕನೋರ್ವ ತನ್ನ ದೈನಂದಿನ ಚಟುವಟಿಕೆಗೆಂದು ಹೊರಗಡೆ ಹೋದ ವ್ಯಕ್ತಿ ಮತ್ತೆ ಮನೆಗೆ ಬಾರದೆ ಎರಡು ದಿನಗಳಾಗಿದ್ದು, ನೆರೆಯಲ್ಲಿ ಕೊಚ್ಚಿಕೊಂಡು ಹೋದ ಅನುಮಾನ ಇರುವುದರಿಂದ ಶಾಸಕರು ಯುವಕನ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿ ಧೈರ್ಯ ತುಂಬಿದಲ್ಲದೆ ಅಧಿಕಾರಿಗಳಿಗೆ ಶೋಧ ಕಾರ್ಯ ಚುರುಕುಗೊಳ್ಳಿಸಲು ಅದೇಶಿಸಿದರು.
ಈ ಸಂದರ್ಭದಲ್ಲಿ ಅಧಿಕಾರಿಗಳು, ಪಕ್ಷದ ಪ್ರಮುಖರು, ಪೊಲೀಸ್ ಅಧಿಕಾರಿಗಳು, ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು.
