ಬೈಂದೂರು ವಲಯ ವತಿಯಿಂದ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರ ಬೈಂದೂರು ವಲಯ ವತಿಯಿಂದ ನಾವು ಕಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಾವುಂದ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಜಾನಕಿ ವಹಿಸಿದ್ದರು.ಬೈಂದೂರು ವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುನಾಥ್ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು ಶುಭ ಹಾರೈಸಿದರು.
ಸುಮಾರು 10 ಶಾಲೆಗಳು 250ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದು ಪ್ರಥಮ ಸ್ಥಾನದಲ್ಲಿ ಜಯಗಳಿಸಿದ ವಿದ್ಯಾರ್ಥಿಗಳು ತಾಲೂಕು ಮಟ್ಟದ ಪ್ರತಿಭಾಕಾರಂಜಿ ನಡೆಯುವ ಬ್ರಾಹ್ಮಿ ದುರ್ಗಾಪರಮೇಶ್ವರಿ ಪ್ರೌಢಶಾಲೆ ಕಮರಶಿಲೆಗೆ ಆಯ್ಕೆಯಾಗುತ್ತಾರೆ ಈ ಸಂದರ್ಭದಲ್ಲಿ ಬಿ ಆರ್ ಸಿ ಕರುಣಾಕರ್ ಶೆಟ್ಟಿ, ಪಶು ವೈದ್ಯಾಧಿಕಾರಿ ನಾಗರಾಜ್ ಖಾರ್ವಿ ಸಂಸ್ಥೆಯ ಪ್ರಾಂಶುಪಾಲರಾದ ಅರುಣ್ ನಾಯಕ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ ಶೇಖರ್ ಪೂಜಾರಿ,ನೋಡಲ್ ಅಧಿಕಾರಿ ರಾಮಕೃಷ್ಣ ದೇವಾಡಿಗ, ಇ. ಸಿ. ಓ ಸತ್ಯನಾರಾಯಣಕೊಡೇರಿ ಎಸ್‍ಡಿಎಮ್‍ಸಿ ಅಧ್ಯಕ್ಷರಾದ ಆದಿರಾಜ್ ಜೈನ್, ನರಸಿಂಹ ದೇವಾಡಿಗ ಹಾಗೂ ನಾವುಂದ ಗ್ರಾಮಪಂಚಾಯತ್ ಸದಸ್ಯರಾದ SCDMC ಸರ್ವ ಸದಸ್ಯರು ಉಪಸ್ಥಿತರಿದ್ದರು.