ಬೈಂದೂರಿನ ನಾವುಂದಲ್ಲಿ ಅಪಘಾತದಲ್ಲಿ ಮೂವರಿಗೆ ಗಾಯ ಒರ್ವನ ಸ್ಥಿತಿ ಗಂಭೀರ

ಬೈಂದೂರು: ಬೈಂದೂರು ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರೊಂದು ಬಸ್‍ಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಗಾಯಗೊಂಡ ಘಟನೆ ಸಂಭವಿಸಿದೆ.ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ನಾವುಂದದಲ್ಲಿ ಬಸ್‍ಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿತು.

ಕಾರು ಕುಂದಾಪುರದಿಂದ ಭಟ್ಕಳ ಕಡೆಗೆ ಸಾಗುತ್ತಿತ್ತು. ಗಾಯಾಳುಗಳನ್ನು ಸ್ಥಳೀಯರ ಸಹಾಯದಿಂದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಬೈಂದೂರು ಠಾಣೆ ಪಿ.ಎಸ್.ಐ ಪವನ್ ನಾಯಕ್ ಭೇಟಿ ನೀಡಿದ್ದು, ಪ್ರಕರಣದ ಕೇಸು ದಾಖಲಿಸಲಾಗಿದೆ ಬೈಂದೂರು ಠಾಣೆಯಲ್ಲಿ ದಾಖಲಾಗಿದೆ.