ಏ.20ರಂದು ಬಿಜೆಪಿ ಕಾರ್ಯಕರ್ತರ ಸಮಾವೇಶ

ಬೈಂದೂರು: ಈಗಾಗಲೇ ಬೈಂದೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗುರುರಾಜ್ ಗಂಟಿಹೊಳೆ ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದ್ದು ಏಪ್ರಿಲ್ 20 ರಂದು ಗುರುವಾರ ಬಿಜೆಪಿ ಕಾರ್ಯಕರ್ತರ ಬ್ರಹತ್ ಸಮಾವೇಶದ ಮೂಲಕ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬೈಂದೂರು ಕ್ಷೇತ್ರಕ್ಕೆ ಆಗಮಿಸಲಿದ್ದಾರೆ ಎಂದು ಬೈಂದೂರು ಬಿಜೆಪಿ ಮಂಡಲದ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ಹೇಳಿದರು.

ಅವರು ಸೋಮವಾರ ಬಿಜೆಪಿ ಕಛೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಬೈಂದೂರು ಬಿಜೆಪಿ ಸದೃಡವಾಗಿದೆ.ನಮ್ಮ ಪಕ್ಷದಲ್ಲಿ ಯಾವುದೇ ಅಸಮಾಧಾನ ಇಲ್ಲ ಪಕ್ಷದಿಂದ ಯಾವುದೇ ಕಾರ್ಯಕರ್ತರು ಹೊರಹೋಗುವುದಿಲ್ಲ.ಬಿಜೆಪಿ ಅಭ್ಯರ್ಥಿ ಗುರುರಾಜ ಗಂಟಿಹೊಳೆ ಇಪ್ಪತೈದು ಸಾವಿರಕ್ಕೂ ಅಧಿಕ ಮತಗಳಿಂದ ಗೆಲುವು ಸಾಧಿಸಲಿದ್ದಾರೆ ಎಂದರು. ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಅಭ್ಯರ್ಥಿ ಗುರುರಾಜ ಗಂಟಿಹೊಳೆ,ಬೈಂದೂರು ಮಂಡಲದ ಚುನಾವಣಾ ಪ್ರಭಾರಿ ಕ್ಯಾ.ಬ್ರಿಜೇಶ್ ಚೌಟ,ಬಿಜೆಪಿ ಮಂಡಲದ ಉಪಾಧ್ಯಕ್ಷ ಗಣೇಶ ಗಾಣಿಗ,ಜಗನ್ನಾಥ ಮೊಗವೀರ ಉಪಸ್ಥಿತರಿದ್ದರು.

Related Posts

Leave a Reply

Your email address will not be published.