ಬೈಂದೂರಿನ ನಾಗೂರಿನಲ್ಲಿ ಹಾರ್ಡ್‍ವೇರ್ ಶಾಪ್‍ಗೆ ಆಕಸ್ಮಿಕ ಬೆಂಕಿ

ಕುಂದಾಪುರ:ಬೈಂದೂರು ತಾಲೂಕಿನ ನಾಗೂರು ರಾಷ್ಟ್ರೀಯ ಹೆದ್ದಾರಿ 66 ರ ಮಸೀದಿ ಎದುರು ಉರ್ದು ಶಾಲೆ ಸಮೀಪವಿರುವ ರವಿರಾಜ್ ಶೆಟ್ಟಿ ಚೇರ್ಕಾಡಿ ಅವರ ಒಡೆತನದ ದುರ್ಗಾರಶ್ಮಿ ಹಾರ್ಡವೇರ್ ಅಂಗಡಿಯಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಆಕಸ್ಮಿಕವಾಗಿ ಬೆಂಕಿ ತಗುಲಿ ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದ ಘಟನೆ ಸಂಭವಿಸಿದೆ.

ದುರ್ಗಾರಶ್ಮಿ ಹಾರ್ಡವೇರ್ ಅಂಗಡಿಯಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಅಕಸ್ಮಾತ್ ಬೆಂಕಿ ತಗುಲಿದೆ ಬೆಂಕಿ ಕೆನ್ನಾಲಿಗೆ ಹಾರ್ಡವೇರ್ ಸಾಮಗ್ರಿಗಳು ಸುಟ್ಟು ಹೋಗಿ ಲಕ್ಷಾಂತರ ರೂಪಾಯಿ ನಷ್ಟ ಉಂಟಾಗಿದೆ. ಬೈಂದೂರು ಅಗ್ನಿ ಶಾಮಕ ದಳದವರು ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ನಂದಿಸಲು ಹರಸಾಹಸ ಪಟ್ಟರು, ಬೈಂದೂರು ಪೆÇಲೀಸ್ ಠಾಣೆ ಸಿಬ್ಬಂದಿಗಳು,ಸ್ಥಳೀಯರು ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು.
