ಶಾಸಕ ಗುರುರಾಜ್ ಗಂಟಿಹೊಳೆ ಅಧ್ಯಕ್ಷತೆಯಲ್ಲಿ ಬೈಂದೂರು ಸರ್ಕಾರಿ ಕಾಲೇಜು ಅಭಿವೃದ್ಧಿ ಸಮಿತಿ ಸಭೆ

ಸರಕಾರಿ ಪ್ರಥಮ ದರ್ಜೆ ಕಾಲೇಜು ಬೈಂದೂರು ಇದರ ಕಾಲೇಜು ಅಭಿವೃದ್ಧಿ ಸಮಿತಿ ಸಭೆ ಶಾಸಕ ಗುರುರಾಜ್ ಗಂಟಿಹೊಳೆ ಅಧ್ಯಕ್ಷತೆಯಲ್ಲಿ ನಡೆಯಿತು. ಶಾಸಕ ಗುರುರಾಜ್ ಗಂಟಿಹೊಳೆ ಮಾತನಾಡಿ, ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಅಗತ್ಯವಿರುವ ಎಲ್ಲ ಕೌಶಲ್ಯಗಳ ಕಲಿಕೆಗೆ ಪೂರಕ ವ್ಯವಸ್ಥೆ ಮಾಡಬೇಕು, ಸಂಪನ್ಮೂಲ ವ್ಯಕ್ತಿಗಳಿಂದ ಅಗತ್ಯವಿರುವ ತರಬೇತಿಗಳನ್ನು ವಿದ್ಯಾರ್ಥಿಗಳಿಗೆ ನೀಡಲು ಕ್ರಮ ಕೈಗೊಳ್ಳಬೇಕು, ಸಮಾಜಕ್ಕೆ ಉತ್ತಮ ವ್ಯಕ್ತಿತ್ವದ ವ್ಯಕ್ತಿ ರೂಪಿಸುವ, ಪರಿಚಯಿಸುವ ಜವಾಬ್ದಾರಿ ಉಪನ್ಯಾಸಕರ ಮೇಲಿದೆ ನಿಮ್ಮ ಮೇಲೆ ನಾನು ನಂಬಿಕೆ ಇಟ್ಟಿದ್ದೇನೆ ಎಂದರು.
ಅವರು ವಿದ್ಯಾರ್ಥಿಗಳ ದಾಖಲಾತಿ, ಉಪನ್ಯಾಸಕರ ಮಾಹಿತಿ ಹಾಗೂ ಕಾಲೇಜಿನ ವಾರ್ಷಿಕ ಕಾರ್ಯಚಟುವಟಿಕೆಗಳ ಕುರಿತು ಪರಿಶೀಲನೆ ನಡೆಸಿದರು. ಕಾಲೇಜಿನ ಕೊರತೆಗಳಿಗೆ ಆದ್ಯತೆ ಮೇರೆಗೆ ಸಮಸ್ಯೆಗಳ ಪರಿಹಾರಕ್ಕೆ ಸಹಕಾರ ನೀಡುವುದಾಗಿ ತಿಳಿಸಿದರು. ಉಪನ್ಯಾಸಕರೊಂದಿಗೆ ಚರ್ಚೆ ನಡೆಸಿದರು. ಈ ಸಂದರ್ಭದಲ್ಲಿ ಕಾಲೇಜು ಪ್ರಾಂಶುಪಾಲ ನಾಗರಾಜ ಶೆಟ್ಟಿ, ಬೈಂದೂರು ಮಂಡಲದ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು.
