ಬೈಂದೂರು KSRTC ಬಸ್ ಅವ್ಯವಸ್ಥೆ ಖಂಡಿಸಿ ಪ್ರತಿಭಟನೆ

ಬೈಂದೂರು ಭಾಗಕ್ಕೆ ಸರ್ಕಾರಿ ಬಸ್ ವ್ಯವಸ್ಥೆಯನ್ನು ಕಲ್ಪಿಸಬೇಕೆಂದು ಆಗ್ರಹಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ವಿದ್ಯಾರ್ಥಿಗಳಿಗೆ ಸರಿಯಾದ ಸಮಯಕ್ಕೆ ಬಸ್ ವ್ಯವಸ್ಥೆ ಇಲ್ಲದ ಕಾರಣ ಮನೆಗೆ ಸೇರಲಾಗುತ್ತಿಲ್ಲ. ಬಸ್ ಇಳಿದು ಕಾಡು ಪ್ರದೇಶದಲ್ಲಿ 2ರಿಂದ 3 ಕಿ.ಮೀ. ನಡೆದುಕೊಂಡು ಕಾಲುಸಂಕ ಹೊಳೆಗಳನ್ನೆಲ್ಲ ದಾಟಿ ಹೋಗುವಾಗ ರಾತ್ರಿ 8 ಗಂಟೆಯಾಗುತ್ತದೆ ಎಂದು ವಿದ್ಯಾರ್ಥಿಗಳು ಅಳಲು ತೋಡಿಕೊಂಡರು.
ವಿದ್ಯಾರ್ಥಿನಿ ಪ್ರತಿನಿಧಿಯಾಗಿ ಕವಿತಾ ಆಚಾರ್ಯ ಮಾತನಾಡಿ ಕುಂದಾಪುರದಿಂದ ಮುದೂರು ಮತ್ತು ಕೆರಾಡಿ ಭಾಗಕ್ಕೆ ಸಂಜೆ 4:30ಗೆ ಇದ್ದ ಬಸ್ಸು ಇದೀಗ 5:15ಕ್ಕೆ ಮಾಡಿರುವುದರಿಂದ ವಿದ್ಯಾರ್ಥಿನಿಯರಿಗೆ ಹೆಣ್ಣು ಮಕ್ಕಳು ಮನೆಗೆ ತಲುಪುವಾಗ ಕತ್ತಲಾಗುತ್ತಿರುವುದು ವಿಷಾದನೀಯ. ಮುದೂರಿನಂತ ಹಳ್ಳಿ ಪ್ರದೇಶದಲ್ಲಿ ಇಳಿದು ಸುಮಾರು ಎರಡರಿಂದ ಮೂರು ಕಿಲೋಮೀಟರ್ ಕಾಡು ಪ್ರದೇಶದಲ್ಲಿ ನಡೆದುಕೊಂಡು ಕಾಲು ಸಂಕ ಹೊಳೆಯನ್ನ ದಾಟಿಕೊಂಡು ಹೋಗುವ ಪರಿಸ್ಥಿತಿ ಇದೆ ಹಾಗಾಗಿ ವಿದ್ಯಾರ್ಥಿನಿಯರಿಗೆ ಮನೆ ತಲುಪಲು ಧೈರ್ಯ ಕಡಿಮೆಯಾಗುತ್ತಿದೆ ಎಂದು ಹೇಳಿದರು. ಇದೇ ವೇಳೆ ಬಸ್ ವ್ಯವಸ್ಥೆಯನ್ನು ಕಲ್ಪಿಸುವ ಭರವಸೆಯನ್ನು ಶಾಸಕರು ನೀಡಿದ್ದಾರೆ.
ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ಹಾಗೂ ಬೈಂದೂರು ಶಾಸಕರ ಬೆಂಬಲಿಗರು ಉಪಸ್ಥಿತರಿದ್ದರು.
