ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಅವರಿಗೆ ಅಭಿನಂದನೆ

ಬೈಂದೂರು ಶಾಸಕರಾದ ಗುರುರಾಜ್ ಗಂಟೆಹೊಳೆ ಅವರಿಗೆ ಅಭಿನಂದನಾ ಕಾರ್ಯಕ್ರಮ ಹಾಗೂ ಶಕ್ತಿ ಕೇಂದ್ರ ಕಾರ್ಯಕರ್ತರ ಸಭೆ ಮರವಂತೆ ಸಾಧನ ಸಭಾಭವನದಲ್ಲಿ ನಡೆಯಿತು.
ಸಭೆಯನ್ನು ಉದ್ದೇಶಿಸಿ ಮಾತನಾಡಿದ ಶಾಸಕರು ಮರವಂತೆ ಎನ್ನುವುದು ಬಿಜೆಪಿಯ ಭದ್ರಕೋಟೆ ಹಾಗೂ ನನ್ನನ್ನು ಅತಿ ಹೆಚ್ಚು ಮತದಿಂದ ಗೆಲ್ಲಿಸುವಲ್ಲಿ ಮರವಂತೆ ಕಾರ್ಯಕರ್ತರು ಶ್ರಮಿಸಿದ್ದಾರೆ.. ಈ ಕಾರಣದಿಂದ ಅತಿ ಹೆಚ್ಚು ಮತದಿಂದ ಗೆಲ್ಲಲು ಸಾಧ್ಯವಾಯಿತು ಎಂದು ಹೇಳಿದರು.

ಈ ಸಂದರ್ಭದಲ್ಲಿ ಬಿಜೆಪಿ ಮಂಡಲ ಅಧ್ಯಕ್ಷರಾದ ದೀಪಕ್ ಕುಮಾರ್ ಶೆಟ್ಟಿ, ಮಾಜಿ ತಾಲೂಕ್ ಪಂಚಾಯತ್ ಅಧ್ಯಕ್ಷರಾದ ಮಹೇಂದ್ರ ಪೂಜಾರಿ, ಜಿಲ್ಲಾ ಮಹಿಳಾ ಮೋರ್ಚಾ ಕಾರ್ಯದರ್ಶಿ ಅನಿತಾ ಆರ್ ಕೆ, ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಕಿಶೋರ್ ಶೆಟ್ಟಿ, ಶಕ್ತಿಕೇಂದ್ರ ಅಧ್ಯಕ್ಷರಾದ ಸತೀಶ್ ಖಾರ್ವಿ, ಪಂಚಾಯತ್ ಉಪಾಧ್ಯಕ್ಷರಾದ ಲೋಕೇಶ್ ಖಾರ್ವಿ ಹಾಗೂ ಗ್ರಾಮ ಪಂಚಾಯತ್ ಸರ್ವಸದಸ್ಯರು ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು. ರಾಘವೇಂದ್ರ ಕಾಂಚನ್ ಸ್ವಾಗತಿಸಿ ವಂದಿಸಿದರು.