ಜ. 13- 17ರ ವರೆಗೆ ಉಪ್ಪಿನಂಗಡಿಯಲ್ಲಿ ರಾಷ್ಟ್ರೀಯ ಮಟ್ಟದ ಬಾಲ್ ಬ್ಯಾಡ್ಮಿಂಟನ್

ಮಂಗಳೂರು ವಿಶ್ವವಿದ್ಯಾನಿಲಯ ಹಾಗೂ ಸರಕಾರಿ ಪ್ರಥಮ ದರ್ಜೆ ಕಾಲೇಜು ಉಪ್ಪಿನಂಗಡಿ ಇವುಗಳ ಆಶಯದಲ್ಲಿ ಅಖಿಲ ಭಾರತ ಅಂತರ ವಿಶ್ವವಿದ್ಯಾನಿಲಯ ಪುರುಷರ ಬಾಲ್ ಬ್ಯಾಡ್ಮಿಂಟನ್ ಚಾಂಪಿಯನ್‍ಶಿಪ್ ಜನವರಿ 13ರಿಂದ 17ರ ವರೆಗೆ ಉಪ್ಪಿನಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆಯಲಿದ್ದು, ವಿಶಾಲವಾದ ಕ್ರೀಡಾಂಗಣದ ಕೆಲಸ ಕಾರ್ಯಗಳು ನಡೆಯುತ್ತಿದ್ದು, ಬಹುತೇಕ ಕೆಲಸ ಪೂರ್ಣಗೊಂಡಿದೆ.

ರಾಷ್ಟ್ರಮಟ್ಟದ ಬಾಲ್ ಬ್ಯಾಡ್ಮಿಂಟನ್ ಟೂರ್ನಿಗೆ ಸಕಲ ಸಿದ್ಧತೆಗಳು ನಡೆಯುತ್ತಿದೆ. ಭಾರತದ ದೇಶದ ವಿವಿಧ ವಿಶ್ವವಿದ್ಯಾಲಯಗಳನ್ನು ಪ್ರತಿನಿಧಿಸುವ ಸುಮಾರು 84 ತಂಡಗಳು ಈಗಾಗಲೇ ಹೆಸರನ್ನು ನೋಂದಾಯಿಸಿಕೊಂಡಿದ್ದು, ಒಟ್ಟು ಸುಮಾರು 100 ತಂಡಗಳು ಭಾಗವಹಿಸುವ ನಿರೀಕ್ಷೆ ಇದೆ. ನೂರು ತಂಡದಲ್ಲಿ ಸಾವಿರ ಕ್ರೀಡಾ ಪಟುಗಳು 200 ಮಂದಿ ತೀರ್ಪುಗಾರರು, 300 ಅಧಿಕಾರಿಗಳನ್ನು ಒಳಗೊಂಡಂತೆ ದೇಶಾದ್ಯಂತದಿಂದ ಒಟ್ಟು 1500 ಮಂದಿ ಭಾಗವಹಿಸಲಿದ್ದಾರೆ. ಎಲ್ಲಾ ಕ್ರೀಡಾಪಟುಗಳಿಗೆ ಹಾಗೂ ಅದಕ್ಕೆ ಸಂಬಂಧಿಸಿದ ಅಧಿಕಾರಿ ವರ್ಗಕ್ಕೆ ವಾಸ್ತವ್ಯ, ಅಭ್ಯಾಸ, ಊಟೋಪಚಾರ ಸಹಿತ ಸಕಲ ಆತಿಥ್ಯಕ್ಕೆ ವ್ಯವಸ್ಥೆಯನ್ನು ಆಯೋಜಿಸಿದ್ದಾರೆ.

ಕಾಲೇಜು ಆವರಣದಿಂದ ನೇತ್ರಾವತಿ ನದಿ ದಡ ಪ್ರದೇಶದಲ್ಲಿ ವಿಶಾಲವಾದ ಕ್ರೀಡಾಂಗಣವನ್ನು ನಿರ್ಮಿಸಲು 2 ತಿಂಗಳಿಂದ ಸತತ ಪ್ರಯತ್ನಗಳು ನಡೆಯುತ್ತಿದ್ದು, ಬಹುತೇಕ ಕೆಲಸ ಕಾರ್ಯಗಳು ಪೂರ್ಣಗೊಂಡಿದೆ. ಆರು ಬಾಲ್ ಬ್ಯಾಡ್ಮಿಂಟನ್ ಕೋರ್ಟ್‍ನ್ನು ನಿರ್ಮಿಸಲಾಗುತ್ತಿದೆ. ಕಾಲೇಜಿನ ಕ್ರೀಡಾ ನಿರ್ದೇಶಕ ಪ್ರವೀಣ್ ಕುಮಾರ್ ಹಾಗೂ ವಿಜೇತ್ ಜೈನ್ ನೇತೃತ್ವದಲ್ಲಿ ಕಾಲೇಜಿನ ವಿದ್ಯಾರ್ಥಿ ವಿದ್ಯಾರ್ಥಿನಿಯರ ಶ್ರಮದಲ್ಲಿ ಕ್ರೀಡಾಂಗಣ ಅತ್ಯುತ್ತಮ ರೀತಿಯಲ್ಲಿ ನಿರ್ಮಾಣಗೊಳ್ಳುತ್ತಿದೆ.

Related Posts

Leave a Reply

Your email address will not be published.