ಸ್ಕೂಲ್ ಬಸ್ ಮತ್ತು ಆಟೋ ರಿಕ್ಷಾ ಮಧ್ಯೆ ಅಪಘಾತ
ಐದು ಮಂದಿ ವಿದ್ಯಾರ್ಥಿಗಳಿಗೆ ಗಾಯ
ಸ್ಕೂಲ್ ಬಸ್ ಮತ್ತು ಆಟೋ ರಿಕ್ಷಾ ನಡುವೆ ಅಪಘಾತ ಸಂಭವಿಸಿದ ಘಟನೆ ಇನ್ನಂಜೆ ಕಲ್ಲುಗುಡ್ಡೆ ಗರೋಡಿ ಬಳಿ ನಡೆದಿದೆ. ಅಪಘಾತದಲ್ಲಿ ಅಟೋ ರಿಕ್ಷಾದಲ್ಲಿದ್ದ ಐವರು ವಿದ್ಯಾರ್ಥಿಗಳು ಗಾಯಗೊಂಡು ಜಿಲ್ಲಾ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಗಾಯಗೊಂಡವರು ಇನ್ನಂಜೆ ಎಸ್ ವಿ ಎಚ್ ಶಾಲಾ ವಿದ್ಯಾರ್ಥಿಗಳು ಎನ್ನಲಾಗಿದೆ. ಕಲ್ಲುಗುಡ್ಡೆಯ ಇಕ್ಕಾಟದ ರಸ್ತೆಯಲ್ಲಿ ಪಡುಬೆಳ್ಳೆ ನಾರಾಯಣ ಗುರು ವಿದ್ಯಾಸಂಸ್ಥೆಯ ಬಸ್ ಹಾಗೂ ಇನ್ನಂಜೆ ಶಾಲಾ ವಿದ್ಯಾರ್ಥಿಗಳನ್ನು ಸಾಗಿಸುವ ಅಟೋ ರಿಕ್ಷಾ ಮಂದಿ ಈ ಅಪಘಾತ ಸಂಭವಿಸಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸದೆ ವಿದ್ಯಾರ್ಥಿಗಳು ಪಾರಾಗಿದ್ದಾರೆ ಎಂದು ತಿಳಿದು ಬಂದಿದ್ದು ಸಾರ್ವಜನಿಕರು ನಿಟ್ಟುಸಿರು ಬಿಡುವಂತ್ತಾಗಿದೆ. ಶಿರ್ವ ಪೊಲೀಸ್ರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.