ತಲೆನೋವಿನಿಂದ ಬಳಲುತ್ತಿದ್ದ ವಿದ್ಯಾರ್ಥಿನಿ ಸಾವು
ಮಂಚಿ ಗ್ರಾಮದ ಮಣ್ಣಗುಳಿ ನಿವಾಸಿ ರತಿ ಕುಲಾಲ್ ಅವರ ಮಗಳು ಭವ್ಯಾ (20) ಮೃತಪಟ್ಟ ವಿದ್ಯಾರ್ಥಿನಿ. ವಿದ್ಯಾರ್ಥಿನಿಯು ಪುತ್ತೂರು ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದು, ಕೆಲವು ದಿನಗಳ ಹಿಂದೆ ತಲೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸ್ಥಳೀಯ ವೈದ್ಯರ ಬಳಿ ಪರೀಕ್ಷೆ ಮಾಡಿಸಿ ಔಷಧ ಪಡೆದುಕೊಂಡಿದ್ದರು.ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಸರಕಾರಿ ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟ ಘಟನೆ ಸೋಮವಾರ ನಡೆದಿದೆ.