ಬಂಟ್ವಾಳ: ಕಾರ್ಮಿಕರು ಉಳಿದುಕೊಂಡಿದ್ದ ಶೆಡ್ ಮೇಲೆ ಗುಡ್ಡ ಕುಸಿತ: ಮೃತಪಟ್ಟವರ ಸಂಖ್ಯೆ 3ಕ್ಕೇರಿಕೆ
ಪಂಜಿಕಲ್ಲು ಗ್ರಾಮದಲ್ಲಿ ಕಾರ್ಮಿಕರು ಉಳಿದುಕೊಂಡಿದ್ದ ಶೆಡ್ ಮೇಲೆ ಬುಧವಾರ ಗುಡ್ಡ ಕುಸಿತದಿಂದ ಮಣ್ಣಿನಡಿಗೆ ಸಿಲುಕಿದ ಪ್ರಕರಣದಲ್ಲಿ ಮೃತಪಟ್ಟವರ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ. ಆಸ್ಪತ್ರೆಗೆ ದಾಖಲಾಗಿದ್ದವರ ಪೈಕಿ ಓರ್ವ ರಾತ್ರಿ ಮೃತಪಟ್ಟಿದ್ದರೆ, ಇನ್ನೋರ್ವ ಮುಂಜಾವ ಕೊನೆಯುಸಿರೆಳೆದಿದ್ದಾನೆ. ಓರ್ವ ಬಂಟ್ವಾಳದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ಮಣ್ಣಿನಡಿಯಿಂದ ರಕ್ಷಿಸಲ್ಪಟ್ಟು ಗಂಭೀರಾವಸ್ಥೆಯಲ್ಲಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲ್ಪಟ್ಟಿದ್ದ ಕಾರ್ಮಿಕರಾದ ಸಂತೋಷ್ ಆಲಫುಝ (46) ಮತ್ತು ಕೊಟ್ಟಾಯಂ ನಿವಾಸಿ ಬಾಬು (46) ಎಂಬವರು ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ. ಪಾಲಕ್ಕಾಡು ನಿವಾಸಿ ವಿಜು (46) ಎಂಬವರು ಘಟನಾ ಸ್ಥಳದಲ್ಲೇ ಮೃತಪಟ್ಟಿದ್ದರು. ಕಣ್ಣೂರು ನಿವಾಸಿ ಜಾನ್ (44) ಎಂಬವರು ಬಂಟ್ವಾಳ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.