ನೇತ್ರಾವತಿಯಲ್ಲಿ ಯುವಕನ ಮೃತದೇಹ ಪತ್ತೆ

ಪಾಣೆಮಂಗಳೂರು ಹಳೆಯ ಸೇತುವೆಯ ಬಳಿ ನೇತ್ರಾವತಿ ನದಿಯಲ್ಲಿ ಯುವಕನೋರ್ವ ಮೃತದೇಹ ಗುರುವಾರ ಬೆಳಗ್ಗೆ ಪತ್ತೆಯಾಗಿದೆ. ಮೃತರನ್ನು ಬಂಟ್ವಾಳ ತಾಲೂಕಿನ ಸಜಿಪ ನಿವಾಸಿ ರಾಜೇಶ್ ಪೂಜಾರಿ ಸ್ಥಾನಮನೆ(36) ಎಂದು ಗುರುತಿಸಲಾಗಿದೆ. ಪಾಣೆಮಂಗಳೂರು ಹಳೆಯ ಸೇತುವೆಯಲ್ಲಿ ಇಂದು ಬೆಳಗ್ಗೆ ದ್ವಿಚಕ್ರ ವಾಹನವೊಂದು ಅನಾಥ ಸ್ಥಿತಿಯಲ್ಲಿ ಬಿದ್ದುಕೊಂಡಿತು.

ಈ ಬಗ್ಗೆ ಸಂಶಯಗೊಂಡ ಸಾರ್ವಜನಿಕರು ಯಾರೋ ಬಂಟ್ವಾಳ ನಗರ ಪೆÇೀಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಅದರಂತೆ ಸ್ಥಳಕ್ಕೆ ಆಗಮಿಸಿದ ಪೆÇಲೀಸರು ಅಗ್ನಿಶಾಮಕ ದಳವನ್ನು ಕರೆಸಿದರು. ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಸ್ಥಳೀಯ ಮುಳುಗು ತಜ್ಞರು ನದಿಯಲ್ಲಿ ಹುಡುಕಾಟ ನಡೆಸಿದಾಗ ರಾಜೇಶ್ ಪೂಜಾರಿಯ ಮೃತದೇಹ ಪತ್ತೆಯಾಗಿದೆ. ರಾಜೇಶ್ ಅವರು ಕಳೆದ ರಾತ್ರಿ ತನ್ನ ದ್ವಿಚಕ್ರ ವಾಹನದಲ್ಲಿ ಸಂಚರಿಸುತ್ತಿದ್ದ ವೇಳೆ ಸೇತುವೆಯಲ್ಲಿ ಅಪಘಾತಕ್ಕೀಡಾಗಿ ಅವರು ನದಿಗೆಸೆಯಲ್ಪಟ್ಟಿರುವ ಬಗ್ಗೆ ಸಂಶಯ ವ್ಯಕ್ತವಾಗಿದ್ದು, ಪೆÇೀಲಿಸರು ಈ ನಿಟ್ಟಿನಲ್ಲಿ ತನಿಖೆ ಆರಂಭಿಸಿದ್ದಾರೆ.

Related Posts

Leave a Reply

Your email address will not be published.