ಬಂಟ್ವಾಳ: ಕಲ್ಲಡ್ಕದಲ್ಲಿ ಹದಗೆಟ್ಟ ರಸ್ತೆ-ವರ್ತಕರು, ಸಾರ್ವಜನಿಕರಿಂದ ಪ್ರತಿಭಟನೆ
ಬಂಟ್ವಾಳ: ಕಲ್ಲಡ್ಕದಲ್ಲಿ ಸಂಪೂರ್ಣ ಹದಗೆಟ್ಟ ರಸ್ತೆ ಮತ್ತು ಧೂಳಿನಿಂದ ಸಮಸ್ಯೆಯಿಂದ ರೋಸಿಹೋದ ವರ್ತಕರು ಹಾಗೂ ಸಾರ್ವಜನಿಕರು ಗುತ್ತಿಗೆ ಕಂಪನಿ ವಾಹನಗಳನ್ನು ತಡೆಗಟ್ಟಿ ಪ್ರತಿಭಟನೆ ನಡೆಸಿದರು.
ಈ ಸಂದರ್ಭ ಸ್ಥಳಕ್ಕೆ ಆಗಮಿಸಿದ ಗುತ್ತಿಗೆ ಕಂಪನಿ ಅಧಿಕಾರಿಗಳು ಹಾಗೂ ಪೊಲೀಸ್ ಅಧಿಕಾರಿಗಳು ಪ್ರತಿಭಟನಾಕಾರರೊಂದಿಗೆ ಮಾತುಕತೆ ನಡೆಸಿದ್ದು, ಮುಂದಿನ ಬುಧವಾರದೊಳಗೆ ಕೆಲಸ ಆರಂಭಿಸುವುದಾಗಿ ಭರವಸೆ ನೀಡಿದ ಬಳಿಕ ಪ್ರತಿಭಟನೆಯನ್ನು ಹಿಂಪಡೆಯಲಾಯಿತು.