ಬಂಟ್ವಾಳ: ಹೈಕೋರ್ಟ್ ನ್ಯಾಯಾಧೀಶರಾದ ಬಿ. ಎಂ. ಶ್ಯಾಮ್ ಪ್ರಸಾದ್ ಬಂಟ್ವಾಳ ನ್ಯಾಯಾಲಯಕ್ಕೆ ಭೇಟಿ
ಬಂಟ್ವಾಳದಲ್ಲಿ ಹೊಸ ನ್ಯಾಯಾಲಯ ಸಂಕೀರ್ಣ ಮತ್ತು ವಕೀಲರ ಭವನದ ಸ್ಥಳ ಪರಿಶೀಲನೆಗಾಗಿ ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಾಧೀಶರಾದ ಬಿ. ಎಂ. ಶ್ಯಾಮ್ ಪ್ರಸಾದ್ ಅವರು ಬಂಟ್ವಾಳ ನ್ಯಾಯಾಲಯಕ್ಕೆ ಭೇಟಿ ನೀಡಿದರು. ಈ ಸಂದರ್ಭ ಮಾತನಾಡಿದ ಅವರು ಅತೀ ಶೀಘ್ರದಲ್ಲಿ ವಕೀಲರ ಭವನದ ಜೊತೆಗೆ ಹೊಸ ನ್ಯಾಯಾಲಯ ಸಂಕೀರ್ಣ ಕಟ್ಟಡ ಕಾಮಗಾರಿ ಪ್ರಾರಂಭ ಮಾಡುವ ಪ್ರಾಮಾಣಿಕ ಪ್ರಯತ್ನ ಮಾಡುವ ಭರವಸೆ ನೀಡಿದರು.
ವಕೀಲರ ಸಂಘ ಬಂಟ್ವಾಳದ ವತಿಯಿಂದ ಗೌರವಾನ್ವಿತ ನ್ಯಾಯಾಧೀಶರುಗಳನ್ನು ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಾಧೀಶರಾದ ಜಸ್ಟಿಸ್ ಎಸ್. ವಿಶ್ವಜಿತ್ ಶೆಟ್ಟಿ, ನ್ಯಾಯಾಧೀಶರುಗಳಾದ ಚಂದ್ರಕಲಾ, ರವೀಂದ್ರ ಎಂ ಜೋಶಿ, ಭಾಗ್ಯಮ್ಮ, ಚಂದ್ರಶೇಖರ ವೈ ತಳವಾರ, ಶ್ರೀ ಕೃಷ್ಣಮೂರ್ತಿ. ಎನ್ ಉಪಸ್ಥಿತರಿದ್ದರು.
ವಕೀಲರ ಸಂಘ ಬಂಟ್ವಾಳದ ಅಧ್ಯಕ್ಷರಾದ ರಿಚರ್ಡ್ ಕೋಸ್ತಾ ಎಂ. ಮತ್ತು ಪದಾಧಿಕಾರಿಗಳು ನ್ಯಾಯಾಧೀಶರುಗಳನ್ನು ಬರಮಾಡಿಕೊಂಡು ಸ್ವಾಗತಿಸಿದರು.