ಬಂಟ್ವಾಳ : 29ನೇ ಶ್ರೀ ವಿಶ್ವಕರ್ಮ ಪೂಜಾ ಮಹೋತ್ಸವ

ಬಂಟ್ವಾಳ: ವಿಶ್ವಕರ್ಮ ಸಮಾಜ ಸೇವಾ ಸಂಘ ಇದರ ವತಿಯಿಂದ 29 ನೇ ಶ್ರೀ ವಿಶ್ವಕರ್ಮ ಪೂಜಾ ಮಹೋತ್ಸವ ವಿಶ್ವಕರ್ಮ ಸಭಾಭವನದಲ್ಲಿ ನಡೆಯಿತು. ಧಾರ್ಮಿಕ ಕಾರ್ಯಕ್ರಮದ ಅಂಗವಾಗಿ ಕಲಶ ಪ್ರತಿಷ್ಠೆ, ಮಹಾಪೂಜೆ ನಡೆಯಿತು. ವಿಶ್ವಜ್ಯೋತಿ ಮಹಿಳಾ ಸಂಘದ ಸದಸ್ಯೆಯರಿಂದ ಭಜನೆ ನಡೆಯಿತು. ಈ ಸಂದರ್ಭ ಶಾಸಕ ರಾಜೇಶ್ ನಾಯ್ಕ್, ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಕೆ. ಸೇಸಪ್ಪ ಕೋಟ್ಯಾನ್ ಮೊದಲಾದವರು ಭೇಟಿ ನೀಡಿ ಪ್ರಸಾದ ಸ್ವೀಕರಿಸಿದರು.

ಬಳಿಕ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಮುಲ್ಕಿಯ ಪೊಲೀಸ್ ಇನ್ಸ್‍ಪೆಕ್ಟ್ರ್ ಕುಸುಮಾಧರ ಕೆ. ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ ರಾಜಕೀಯ ಬೆಂಬಲ ಇಲ್ಲದಿದ್ದಾಗ ಸಮಾಜ ಮುಂದೆ ಬರಲು ಸಾಧ್ಯವಿಲ್ಲ. ಒಗ್ಗಟ್ಟಿನ ಕೊರತೆಯಿಂದ ಸೋತಿದ್ದೇವೆ. ಇತರ ಸಮಾಜ ರಾಜಕೀಯ ಕ್ಷೇತ್ರಗಳನ್ನು ಆಕ್ರಮಿಸಿಕೊಂಡಿದ್ದು ರಾಜಕೀಯದಲ್ಲಿ ಪ್ರಭಾವ ಬೀರುವ ಶಕ್ತಿ ಹುಟ್ಟು ಹಾಕಬೇಕಾಗಿದೆ ಎಂದರು. ಸಭಾಧ್ಯಕ್ಷತೆಯನ್ನು ವಹಿಸಿದ್ದ ಸಂಘದ ಅಧ್ಯಕ್ಷ ಸುಧಾಕರ ಆಚಾರ್ಯ ಮಾತನಾಡಿ ವಿಶ್ವಕರ್ಮರ ಶಕ್ತಿ ಏನೆಂಬುದು ವಿಶ್ವಕ್ಕೆ ಗೊತ್ತಿದೆ. ಆದರೆ ನಮಗೆ ನಮ್ಮ ಶಕ್ತಿಯ ಅರಿವಿಲ್ಲ. ಎಲ್ಲರ ಸಹಕಾರ ಇದ್ದಾಗ ಇನ್ನಷ್ಟು ಅಭಿವೃದ್ಧಿ ಕಾರ್ಯ ಮಾಡಲು ಸಾಧ್ಯವಿದೆಎಂದರು.

ಮುಖ್ಯ ಅತಿಥಿಯಾಗಿ ಐಬೊಲ್ ಆರ್ಕಿಟೆಕ್ಟ್‍ನ ಆದರ್ಶ ವಿ.ಪಿ. ಲಯನ್ಸ್ ಕ್ಲಬ್ ಬಂಟ್ವಾಳದ ಅಧ್ಯಕ್ಷ ಉಮೇಶ್ ಆಚಾರ್ಯ ಉಪಸ್ಥಿತರಿದ್ದರು. ಗೋಪಾಲಕೃಷ್ಣ ಅಸ್ರಣ್ಣ ಪ್ರಶಸ್ತಿಗೆ ಆಯ್ಕೆಯಾದ ಹಿರಿಯ ಯಕ್ಷಗಾನ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ ಅವರನ್ನು ಅಭಿನಂದಿಸಲಾಯಿತು. ಎಸ್‍ಎಸ್‍ಎಲ್‍ಸಿ ಹಾಗೂ ಪಿಯೂಸಿಯಲ್ಲಿ ಅತ್ಯಧಿಕ ಅಂಕಗಳನ್ನು ಪಡೆದ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು. ವೇದಿಕೆಯಲ್ಲಿ ವಿಶ್ವಜ್ಯೋತಿ ಮಹಿಳಾ ಸಂಘದ ಗೌರವಾಧ್ಯಕ್ಷೆ ಪುಷ್ಪಲತಾ ಡಿ. ಆಚಾರ್ಯ, ಅಧ್ಯಕ್ಷೆ ಪ್ರತಿಮಾ ಉಪೇಂದ್ರ ಆಚಾರ್ಯ, ಧಾರ್ಮಿಕ ಕಾರ್ಯದರ್ಶಿ ನಾರಾಯಣ ಆಚಾರ್ಯ ಕಳ್ಳಿಗೆ, ವೇದಿಕೆಯಲ್ಲಿದ್ದರು. ಮನೊಜ್ ಆಚಾರ್ಯ ನಾಣ್ಯ ಪ್ರಾಸ್ತವಿಕವಾಗಿ ಮಾತನಾಡಿದರು. ಸಂದೀಪ್ ಆಚಾರ್ಯ ನಿರೂಪಿಸಿದರು.