ಡಿ.10 ಆಲದಪದವು ಅಕ್ಷರ ಭಾರತಿ ವಿದ್ಯಾಲಯದಲ್ಲಿ ಅಕ್ಷರ ಉತ್ಸವ ವಾಮದಪದವು

ಬಂಟ್ವಾಳ ತಾಲೂಕಿನ ಅಜ್ಜಿಬೆಟ್ಟು ಗ್ರಾಮದ ಆಲದಪದವು ಅಕ್ಷರ ಭಾರತಿ ವಿದ್ಯಾಲಯದಲ್ಲಿ 22ನೇ ವರ್ಷದ ಸಂಭ್ರಮ “ಅಕ್ಷರ ಉತ್ಸವ” ವು ಡಿ.10ರಂದು ಶನಿವಾರ ನಡೆಯಲಿದೆ. ಬೆಳಿಗ್ಗೆ 9.30 ಕ್ಕೆ ಕ್ಷೇತ್ರ ಶಿಕ್ಷಣಾಧಿಕಾರಿ ಜ್ಞಾನೇಶ್ ಅಕ್ಷರ ಉತ್ಸವವನ್ನು ಉದ್ಘಾಟಿಸುವರು. ವಿವಿಧ ಕ್ಷೇತ್ರದ ಗಣ್ಯರ ಉಪಸ್ಥಿತಿಯಲ್ಲಿ ಬಹುಮಾನ ವಿತರಣೆ ನಡೆಯಲಿದೆ. ಸಂಜೆ 4 ಗಂಟೆಗೆ ಶಾಲಾ ಸಂಚಾಲಕ ಮೋಹನ್ ರೈ.ಕೆ. ಅಧ್ಯಕ್ಷತೆಯಲ್ಲಿ ಸಮಾರೋಪ ಸಮಾರಂಭ ನಡೆಯಲಿದ್ದು ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ, ಮಾಜಿ ಸಚಿವ ಬಿ.ರಮಾನಾಥ ರೈ ಮೊದಲಾದವರು ಅತಿಥಿಗಳಾಗಿ ಭಾಗವಹಿಸುವರು.

ಸಂಜೆ 5ರಿಂದ ಶಾಲಾ ವಿದ್ಯಾರ್ಥಿಗಳಿಂದ ಮತ್ತು ಹಳೇ ವಿದ್ಯಾರ್ಥಿಗಳಿಂದ ವೈವಿಧ್ಯಮಯ ಸಾಂಸ್ಕ್ರತಿಕ ಕಲರವ ಸಂಪನ್ನಗೊಳ್ಳಲಿದೆ. ಅಕ್ಷರ ಉತ್ಸವದ ಅಂಗವಾಗಿ ಪೂರ್ವಭಾವಿ ಸಿದ್ಧತಾ ಸಭೆಯು ಗುರುವಾರ ಬೆಳಿಗ್ಗೆ ಶಾಲಾ ಸಂಚಾಲಕ ಮೋಹನ್ ರೈ.ಕೆ.ಅಧ್ಯಕ್ಷತೆಯಲ್ಲಿ ನಡೆಯಿತು. ಕಾರ್ಯದರ್ಶಿ ಭಾರತಿ ಎಸ್.ರೈ, ಪೋಷಕ-ರಕ್ಷಕ ಸಂಘದ ಅಧ್ಯಕ್ಷ ಅರುಣ್ ಐತಾಳ್, ಶೈಕ್ಷಣಿಕ ಅಭಿವೃದ್ಧಿ ಸಮಿತಿ ಅಧ್ಯಕ್ಷೆ ಆಕರ್ಷಿಣಿ ಜೈನ್, ಮುಖ್ಯ ಶಿಕ್ಷಕ ಮೋಹನ್ ಎಚ್., ಅಕ್ಷರ ಉತ್ಸವ ನಿರ್ದೇಶಕ ಸುಕೇಶ್ ಕೆ. ಮೊದಲಾದವರಿದ್ದು ಉತ್ಸವದ ಸಿದ್ಧತೆಗಳ ಬಗ್ಗೆ ಸಮಾಲೋಚನೆ ನಡೆಸಿದರು.

Related Posts

Leave a Reply

Your email address will not be published.