ಅಕ್ಷಯ ಪಾತ್ರೆ ಪ್ರತಿಷ್ಠಾನದಿಂದ ಅತ್ಯಾಧುನಿಕ ಅಡುಗೆ ಮನೆಗೆ ಚಾಲನೆ
ಬಂಟ್ವಾಳ: ಅಕ್ಷಯಪಾತ್ರೆ ಫೌಂಡೇಶನ್‍ನ ವತಿಯಿಂದ ಕೃಷ್ಣನ ಪ್ರಸಾದವನ್ನು ಮಕ್ಕಳಿಗೆ ವಿತರಿಸುವ ಸತ್ಕಾರ್ಯ ಹಲವು ವರ್ಷಗಳಿಂದ ನಡೆಯುತ್ತಿದೆ. ಇಸ್ಕಾನ್ ಫೌಂಡೇಶನ್ ಮೂಲಕ ಇಡೀ ದೇಶದಲ್ಲಿ 23 ಲಕ್ಷ ಮಂದಿಗೆ ಮಧ್ಯಾಹ್ನದ ಊಟ ತಲುಪುತ್ತಿದ್ದು, ಇದು ಅತ್ಯಂತ ಶ್ಲಾಘನೀಯ ಕೆಲಸವಾಗಿದೆ ಎಂದು ಉಡುಪಿಯ ಪುತ್ತಿಗೆ ಮಠದ ಜಗದ್ಗುರು ಶ್ರೀ ಮಧ್ವಾಚಾರ್ಯ ಮೂಲ ಮಹಾ ಸಂಸ್ಥಾನದ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿಯವರು ಹೇಳಿದರು.
ಅಕ್ಷಯ ಪಾತ್ರೆ ಫೌಂಡೇಶನ್ ಬಂಟ್ವಾಳ ತಾಲೂಕಿನ ಬೆಂಜನಪದವಿನಲ್ಲಿ ನಿರ್ಮಿಸಿರುವ ಕೇಂದ್ರೀಕೃತ ಅಡುಗೆ ಮನೆಗೆ ಚಾಲನೆ ನೀಡಿ ಆರ್ಶೀವಚನ ನೀಡಿ ಮಾತನಾಡಿದರು. ಅಕ್ಷಯ ಪಾತ್ರ ಪ್ರತಿಷ್ಠಾನದ ಅಧ್ಯಕ್ಷ ಮಧು ಪಂಡಿತ್ ದಾಸ, ಕೊಡಚಾದ್ರಿ ಗುರುಕುಲದ ಉಸ್ತುವಾರಿಗಳಾದ ತತ್ವದರ್ಶನ ಸ್ವಾಮಿಜಿ, ಮೇರಮಜಲು ಗ್ರಾಮಪಂಚಾಯಿತಿ ಅಧ್ಯಕ್ಷ ಸತೀಶ್ ನಾಯ್ಗ, ಅಮ್ಮುಂಜೆ ಪಂಚಾಯತಿ ಉಪಾಧ್ಯಕ್ಷÀ ರಾಧಾಕೃಷ್ಣ ತಂತ್ರಿ ಉಪಸ್ಥಿತರಿದ್ದರು.