ಬಂಟ್ವಾಳ : ಸರ್ಕಾರಿ ನೌಕರರಿಗೆ ಮಾಹಿತಿ ಕಾರ್ಯಗಾರ: ವಿಶ್ರಾಂತ ಸರಕಾರಿ ನೌಕರರಿಗೆ, ಸಾಧಕರಿಗೆ ಅಭಿನಂದನೆ
ಬಂಟ್ವಾಳ: ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಬಂಟ್ವಾಳ ತಾಲೂಕು ಶಾಖೆಯ ಆಶ್ರಯದಲ್ಲಿ ಸರ್ಕಾರಿ ನೌಕರರಿಗೆ ಮಾಹಿತಿ ಕಾರ್ಯಗಾರ ಮತ್ತು ವಿಶ್ರಾಂತ ಸರಕಾರಿ ನೌಕರರಿಗೆ ಮತ್ತು ಸಾಧಕರಿಗೆ ಅಭಿನಂದನಾ ಸಮಾರಂಭ ಮತ್ತು 2021-22 ನೇ ಸಾಲಿನ ವಾರ್ಷಿಕ ಮಹಾಸಭೆ ಬಿ.ಸಿ.ರೋಡಿನ ಸರಕಾರಿ ನೌಕರರ ಸಭಾಭವನದಲ್ಲಿ ನಡೆಯಿತು.
ಕ್ಷೇತ್ರ ಶಿಕ್ಷಣಾಧಿಕಾರಿ ಜ್ಞಾನೇಶ್ ಎಂ.ಪಿ. ಕಾರ್ಯಕ್ರಮ ಉದ್ಘಾಟಿಸಿದರು. ಅವರು ಮಾತನಾಡಿ ಬಾಲ್ಯ, ಯೌವನ ನಮ್ಮ ಸಂಪತ್ತು ಅದನ್ನು ಸರಿಯಾಗಿ ಬಳಸಿಕೊಳ್ಳಬೇಕು. ಪ್ರಕೃತಿ ನಮಗೆ ನೀಡಿರುವ ಜೀವನವನ್ನು ಸುಂದರ ಮಾಡಿಕೊಳ್ಳಬೇಕು ಎಂದರು.
ಭಾವ ಇಲ್ಲದೆಡೆ ಸೌಂದರ್ಯ ಅನುಭವಿಸಲು ಸಾಧ್ಯವಿಲ್ಲ. ಸಂತೋಷವೇ ಸಂಪತ್ತು. ಒಳ್ಳೆಯದು ಕೆಟ್ಟದ್ದು ಎರಡನ್ನೂ ಕಣ್ಣು ನೋಡಿದರೂ ನಾವು ಸಮಾಜಕ್ಕೆ ಒಳ್ಳೆಯದನ್ನು ಮಾತ್ರ ನುಡಿಯಬೇಕು ಎಂದರು.
ಸಂಘದ ಅಧ್ಯಕ್ಷ ಉಮನಾಥ ರೈ ಮೇರಾವು ಅಧ್ಯಕ್ಷತೆ ವಹಿಸಿದ್ದರು. ಅವರು ಮಾತನಾಡಿ ಸದಸ್ಯರ ಸಮಸ್ಯೆಗಳಿಗೆ ಸಂಘ ಸ್ಪಂದಿಸಿದೆ, ನಿರಂತರ ಹೋರಾಟದ ಮೂಲಕ ಸಂಘದ ಸದಸ್ಯರ ಸಮಸ್ಯೆಗಳ ಪರಿಹಾರಕ್ಕೆ ಸಂಘ ಪ್ರಯತ್ನಿಸಿದೆ ಎಂದು ತಿಳಿಸಿದರು.
ಶಾಸಕ ರಾಜೇಶ್ ನಾಯ್ಕ್ ಕಾರ್ಯಕ್ರಮಕ್ಕೆ ಭೇಟಿ ನೀಡಿ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಸಾಧಕ ಸರಕಾರಿ ನೌಕರರನ್ನು ಗೌರವಿಸಲಾಯಿತು. ಮುಖ್ಯ ಅತಿಥಿಗಳಾಗಿ ತಹಶೀಲ್ದಾರ ಕೆ.ಎಸ್.ದಯಾನಂದ, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಶಿವಾಪ್ರಸಾದ್ ಶೆಟ್ಟಿ, ಪಿಂಚಣಿದಾರರ ಸಂಘದ ಅಧ್ಯಕ್ಷ ಪಿ.ಲೋಕನಾಥ ಶೆಟ್ಟಿ, ನ್ಯಾಯವಾದಿ ಶೈಲಜ ರಾಜೇಶ್, ಅಧ್ಯಾಪಕರ ಸಹಕಾರಿ ಸಂಘದ ಅಧ್ಯಕ್ಷ ರಮೇಶ್ ನಾಯಕ್ ರಾಯಿ
ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಜೋಯಲ್ ಲೋಬೋ, ಪ್ರಾಥಮಿಕ ಶಾಲ ಶಿಕ್ಷಕರ ಸಂಘದ ಉಪಾಧ್ಯಕ್ಷ ನವೀನ್ ಪಿ.ಎಸ್. ಕಂದಾಯ ಇಲಾಖೆಯ ಅನಿಲ್ ಕೆ. ಪೂಜಾರಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಜಯರಾಮ, ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷೆ ರತ್ನಾವತಿ, ದ.ಕ. ಜಿಲ್ಲಾ ಪ್ರೌಢಶಾಲಾ ಶಿಕ್ಷಕ ಸಂಘದ ಸಂಘಟನಾ ಕಾರ್ಯದರ್ಶಿ ಶಶಿಕಾಂತ್, ಪಿಂಚಣಿ ದಾರ ಸಂಘದ ಕಾರ್ಯದರ್ಶಿ ನಿಲೋಜಿರಾವ್, ವವಿಧ ಸಂಘಟನೆಗಳ ಪ್ರಮುಖರಾದ ಯತೀಶ್, ಇಂದು ಶೇಖರ್, ಪುಟ್ಟ ರಂಗನಾಥ್, ಶಿಕ್ಷಣ ಸಂಯೋಜಕಿ ಸುಜಾತ ಕುಮಾರಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಕಾರ್ಯಕ್ರಮದ ಪೂರ್ವಭಾವಿಯಾಗಿ ಇಬ್ಬರು ಬಾಲಪ್ರತಿಭೆಗಳಿಂದ ಯಕ್ಷಗಾನ ಶೈಲಿಯಲ್ಲಿ ಗಣಪತಿ ಸ್ತುತಿ ನಡೆಯಿತು. ಭಾಗವತಿಕೆಯಲ್ಲಿ ಶ್ರೀಶ ಕುಮಾರ್, ಚೆಂಡೆಯಲ್ಲಿ ಅದ್ವೈತ್ ಮಿಂಚಿದರು. ರಾಮದಾಸ್ ಶೆಟ್ಟಿ ಮದ್ದಲೆಯಲ್ಲಿ ಸಹಕಾರ ನೀಡಿದರು. ಬಳಿಕ ನ್ಯಾಯವಾದಿ ಶೈಲಜಾ ರಾಜೇಶ್ ಪೂಜಾರಿ ಸರಕಾರಿ ನೌಕರರಿಗೆ ಕಾನೂನು ಮಾಹಿತಿ ನೀಡಿದರು.
ಸಂಘದ ಪ್ರಧಾನ ಕಾರ್ಯದರ್ಶಿ ಸಂತೋಷ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು. ಖಜಾಂಚಿ ಬಸಯ್ಯ ಅಲಿಮಟ್ಟಿ ವಂದಿಸಿದರು