ಬಂಟ್ವಾಳ ತಾಲೂಕಿನ ವಿವಿಧೆಡೆ ಪ್ರವಾಹ ಭೀತಿ: ನದಿ ತೀರದ ತಗ್ಗು ಪ್ರದೇಶಗಳು ಜಲಾವೃತ

ಬಂಟ್ವಾಳ ತಾಲೂಕು ವ್ಯಾಪ್ತಿಯಲ್ಲಿ ಭಾರೀ ಮಳೆಯಾಗುತ್ತಿದ್ದು ನದಿ ತೀರದ ತಗ್ಗು ಪ್ರದೇಶಗಳು ಜಲಾವೃತಗೊಂಡಿದೆ. ಪಾಣೆಮಂಗಳೂರು ಸಮೀಪದ ಆಲಡ್ಕ ಪರಿಸರದಲ್ಲಿ ಮನೆಗೆ ನೀರು ನುಗ್ಗಿದ್ದು ಮನೆ ಮಂದಿ ಹಾಗೂ ಸೊತ್ತುಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರ ಮಾಡಲಾಗುತ್ತಿದೆ.







ಪೊಲೀಸರು ಈ ಮನೆಗಳಿಗೆ ತೆರಳಿ ಸ್ಥಳಾಂತರಗೊಳ್ಳುವಂತೆ ಸೂಚಿಸಿದರು. ನದಿಯಲ್ಲಿ ನೀರಿನ ಮಟ್ಟ ಕ್ಷಣದಿಂದ ಕ್ಷಣಕ್ಕೆ ಏರಿಕೆಯಾಗುತ್ತಿದ್ದು ಜನತೆಯಲ್ಲಿ ಆತಂಕ ಮೂಡಿಸಿದೆ.