HomeFresh Newsಬಂಟ್ವಾಳ: ಸಾಮಾಜಿಕ ಹೋರಾಟಗಾರ ಪದ್ಮನಾಭ ಸಾಮಂತ್ ಆತ್ಮಹತ್ಯೆ?

ಬಂಟ್ವಾಳ: ಸಾಮಾಜಿಕ ಹೋರಾಟಗಾರ ಪದ್ಮನಾಭ ಸಾಮಂತ್ ಆತ್ಮಹತ್ಯೆ?

ಬಂಟ್ವಾಳ: ಸಾಮಾಜಿಕ ಕಾರ್ಯಕರ್ತ, ಕಾಂಗ್ರೆಸ್ ಹಿಂದುಳಿದ ವರ್ಗಗಳ ಜಿಲ್ಲಾ ಸಮಿತಿಯ ಉಪಾಧ್ಯಕ್ಷ ಪದ್ಮನಾಭ ಸಾಮಂತ್ ಆತ್ಮಹತ್ಯೆ ಮಾಡಿಕೊಂಡ ರೀತಿಯಲ್ಲಿ ಅವರ ಶವ ಪತ್ತೆಯಾಗಿದೆ.

ವಾಮದಪದವಿನ ಅವರ ಮನೆ ಬಳಿಯ ಗುಡ್ಡದಲ್ಲಿರುವ  ಮರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ವಿವಿಧ ಸಾಮಾಜಿಕ ಹೋರಾಟಗಳಲ್ಲಿ ತೊಡಗಿಸಿಕೊಂಡಿದ್ದ ಪದ್ಮನಾಭ ಸಾಮಂತ್ ಅವರ ಸಾವು ಅನೇಕ ಊಹಪೋಹಗಳಿಗೆ ಕಾರಣವಾಗಿದೆ. ಇತ್ತೀಚೆಗೆ ಉದ್ಯೋಗ ಕೊಡಿಸುವ ನೆಪದಲ್ಲಿ ಹಣ ಪಡೆದುಕೊಂಡಿದ್ದರು ಎನ್ನುವ ಆರೋಪದಡಿ ಪದ್ಮನಾಭ ಸಾಮಂತ್ ವಿರುದ್ದ ಪುಂಜಾಲಕಟ್ಟೆ ಠಾಣೆಯಲ್ಲಿ ದೂರು ದಾಖಲಾಗಿತ್ತು. ಬಂಟ್ವಾಳದ ಅನೇಕ  ಹಗರಣಗಳನ್ನು ಬಯಲಿಗೆಳೆದು ಸಾಮಾಜಿಕ ಜಾಲಾತಾಣದಲ್ಲಿ ಹರಡುತ್ತಿದ್ದರು, ಸಾಮಾಜಿಕ ಹೋರಾಟಗಳಲ್ಲಿ ತೊಡಗಿಸಿಕೊಂಡಿದ್ದ ಅವರು ಅನೇಕ ಮಂದಿ ವಿರೋಧಿಗಳನ್ನೂ ಕಟ್ಟಿಕೊಂಡಿದ್ದರು ಎನ್ನಲಾಗಿದೆ. ಪದ್ಮನಾಭ ಸಾಮಂತ್ ಅವರು ಆತ್ಮಹತ್ಯೆ ಮಾಡಿಕೊಂಡರೋ? ಅಥವಾ ಇನ್ಯಾವುದೋ ಕಾರಣಕ್ಕೆ ಕೊಲೆ ನಡೆದಿದೆಯೊ? ಎನ್ನುವುದು ತನಿಖೆಯಿಂದ ತಿಳಿದು ಬರಬೇಕಾಗಿದೆ.

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments