ಬಂಟ್ವಾಳ: ಒಂದೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ 5 ಜೋಡಿ ಟ್ವಿನ್ಸ್ ಮಕ್ಕಳು

ಬಂಟ್ವಾಳ: ತಾಲೂಕಿನ ಸಜೀಪಮೂಡ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ 5 ಜೋಡಿ ಅವಳಿ ಜವಳಿ ಮಕ್ಕಳು ಒಂದೇ ತರಗತಿಯಲ್ಲಿ ಕಲಿಯುತ್ತಿದ್ದು ಗಮನ ಸೆಳೆದಿದ್ದಾರೆ. ಶಾಲೆಯ ಎಂಟನೇ ತರಗತಿಯಲ್ಲಿ ಈ ಅವಳಿ ಮಕ್ಕಳು ವ್ಯಾಸಂಗ ಮಾಡುತ್ತಿದ್ದಾರೆ.
ಅಯಿಷಾ ಝಿಬಾ-ಖತೀಝಾ ಝಿಯಾ, ಶ್ರಣವಿ-ಜಾನ್ಹವಿ, ಫಾತಿಮತ್ ಕಮಿಲ-ಫಾತಿಮತ್ ಸಮಿಲ, ಆಯಿಷಾ ರೈಫಾ- ಫಾತೀಮಾ ರೌಲ, ದುಲೈಕತ್ ರುಫಿದಾ- ಹಲೀಮತ್ ರಾಫಿದ ಒಂದೇ ತರಗತಿಯಲ್ಲಿ ಕಲಿಯುತ್ತಿರುವ ಅವಳಿ ಜವಳಿ ವಿದ್ಯಾರ್ಥಿಗಳಾಗಿದ್ದು, 5ಜೋಡಿ ಅವಳಿ ಮಕ್ಕಳು ಒಂದೇ ಶಾಲೆಯ ಒಂದೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವುದು ಅಚ್ಚರಿಯ ಸಂಗತಿಯಾಗಿದೆ

Related Posts

Leave a Reply

Your email address will not be published.