ನೇತ್ರಾವತಿ ನದಿಯಲ್ಲಿ ನೀರುಪಾಲಾದ ಯುವಕನ ಶವ ಕೋಟೆಪುರದಲ್ಲಿ ಪತ್ತೆ

ಉಳ್ಳಾಲ: ಸಜಿಪಪಡು ಗ್ರಾಮದ ತಲೆಮೊಗರು ಎಂಬಲ್ಲಿ ನೇತ್ರಾವತಿ ನದಿಯಲ್ಲಿ ಭಾನುವಾರ ಸಂಜೆ ಸ್ನೇಹಿತರೊಂದಿಗೆ ಈಜಲು ಹೋದ ಯುವಕ ಅಶ್ವಿತ್(೧೯) ನೀರುಪಾಲಾಗಿದ್ದು, ಆತನ ಮೃತದೇಹ ಬುಧವಾರ ಉಳ್ಳಾಲದ ಕೋಟೆಪುರ ಕೋಡಿಯ ಸಮುದ್ರ ತೀರದಲ್ಲಿ ಪತ್ತೆಯಾಗಿದೆ.


ಪೊಲೀಸ್, ಅಗ್ನಿಶಾಮಕ ದಳ ಸ್ಥಳೀಯರ ಸಹಾಯದಿಂದ ಹುಡುಕಾಟವನ್ನು ಸತತ ಮೂರು ದಿನಗಳಿಂದ ನಡೆಸಲಾಗುತ್ತಿತ್ತು. ಸಜಿಪಪಡುವಿನ ತಲೆಮೊಗರು ನಾಗೇಶ್ ಗಾಣಿಗ ಎಂಬವರ ಮನೆಯಲ್ಲಿ ಮಗುವನ್ನ ತೊಟ್ಟಿಲು ತೂಗುವ ಸಮಾರಂಭ ಏರ್ಪಡಿಸಲಾಗಿತ್ತು. ಸಮಾರಂಭದಲ್ಲಿ ಪಾಲ್ಗೊಂಡಿದ್ದ ಅಶ್ವಿಥ್ ಸಂಬಂಧಿಕ ಕಾಲೇಜು ಗೆಳೆಯರೊಂದಿಗೆ ಸಮೀಪದ ನೇತ್ರಾವತಿ ನದಿಗೆ ನೀರಾಟವಾಡಲು ತೆರಳಿದ್ದಾರೆ. ಈ ವೇಳೆ ಅಶ್ವಿತ್ ಮತ್ತು ಹರ್ಷ ನೀರುಪಾಲಾಗಿದ್ದಾರೆ. ಜತೆಯಲ್ಲಿದ್ದ ಯುವಕರು ಹರ್ಷನನ್ನ ರಕ್ಷಿಸಿ ಮೇಲಕ್ಕೆತ್ತಿದ್ದರು. ಅಶ್ವಿತ್ ನಾಪತ್ತೆಯಾಗಿದ್ದರು.

Related Posts

Leave a Reply

Your email address will not be published.