ಬಂಟ್ವಾಳದ ಪಂಜಿಕಲ್ಲು ಮುಕ್ಕುಡಲ್ಲಿ ಗುಡ್ಡ ಕುಸಿತ ಪ್ರಕರಣ : ಪರಿಹಾರದ ಚೆಕ್ ವಿತರಣೆ

ಬಂಟ್ವಾಳ: ಪಂಜಿಕಲ್ಲು ಗ್ರಾಮದ ಮುಕ್ಕುಡದಲ್ಲಿ ಇತ್ತೀಚೆಗೆ ಗುಡ್ಡ ಜರಿದು ಮಣ್ಣಿನಡಿ ಸಿಲುಕಿ ಮೃತಪಟ್ಟ ಕೇರಳದ ಮೂವರು ರಬ್ಬರ್ ಟ್ಯಾಪಿಂಗ್ ಕಾರ್ಮಿಕರಿಗೆ ರಾಜ್ಯ ಸರ್ಕಾರದ ವತಿಯಿಂದ ತಲಾ 5 ಲಕ್ಷದಂತೆ ಪರಿಹಾರದ ಚೆಕ್‍ನ್ನು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಬಂಟ್ವಾಳದ ನಿರೀಕ್ಷಣಾ ಮಂದಿರದಲ್ಲಿ ವಿತರಿಸಿದರು.
ಭೂ ಕುಸಿತದಲ್ಲಿ ಮೃತಪಟ್ಟ ಬಿಜು ಪಾಲಕ್ಕಡ್, ಸಂತೋಷ್ ಆಲಪುರ, ಬಾಬು ಕೊಟ್ಟಾಯಂ ಅವರ ಕುಟುಂಬ ಸದಸ್ಯರು ಕೇರಳದಿಂದ ಆಗಮಿಸಿದ್ದು ಪರಿಹಾರ ಚೆಕ್ ಪಡೆದುಕೊಂಡರು
ಕಂದಾಯ ಸಚಿವ ಆರ್ ಆಶೋಕ್, ದ.ಕ ಜಿಲ್ಲಾ ಉಸ್ತುವಾರಿ ಸಚಿವ ವಿ. ಸುನೀಲ್ ಕುಮಾರ್, ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ, ಲೋಕೋಪಯೋಗಿ ಸಚಿವ ಸಿಸಿ.ಪಾಟೀಲ್ , ಬಿಜೆಪಿ ರಾಜಾಧ್ಯಕ್ಷ ನಳೀನ್ ಕುಮಾರ್ ಕಟೀಲು, ಶಾಸಕರಾದ ರಾಜೇಶ್ ನಾೈಕ್, ಸಂಜೀವ ಮಠಂದೂರು, ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ., ಸಹಾಯಕ ಆಯುಕ್ತ ಎ.ಸಿ.ಮದನ್ ಮೋಹನ್, ಜಿ.ಪಂ. ಸಿಇಒ ಡಾ. ಕುಮಾರ್, ಮಾಜಿ ಸಚಿವ ಪ್ರಮೋದ್ ಮದ್ವರಾಜ್ ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ, ಅಲೆಮಾರಿ ಮತ್ತು ಅರೆ ಅಲೆಮಾರಿ ನಿಗಮದ ಅಧ್ಯಕ್ಷ ರವೀಂದ್ರ ಶೆಟ್ಟಿ, ದಿ ಮೈಸೂರು ಎಲೆಕ್ಟ್ರಿಕಲ್ ಲಿ.ಅಧ್ಯಕ್ಷ ಸಂತೋಷ್ ಕುಮಾರ್ ಬೋಳಿಯಾರು ಮತ್ತಿತರರು ಉಪಸ್ಥಿತರಿದ್ದರು.