ಭಗವಂತಕೊಟ್ಟ ಶಕ್ತಿಯನ್ನು ಸಮಾಜಕ್ಕೆ, ಈ ದೇಶಕ್ಕೋಸ್ಕರ ವಿನಿಯೋಗಿಸಬೇಕು: ಸಚಿವ ಬಿ.ಸಿ ನಾಗೇಶ್ ಹೇಳಿಕೆ

ಕೇಂದ್ರ ಹಾಗೂ ರಾಜ್ಯ ಸರಕಾರ ಶಿಕ್ಷಣ ಕ್ಷೇತ್ರದಲ್ಲಿನ ಮೂಲಭೂತ ಸೌಕರ್ಯಗಳನು ನೀಡುವುದರೊಂದಿಗೆ ಆಮೂಲಾಗ್ರ ಬದಲವಾಣೆ ತಂದು ಹೊಸ ಶಿಕ್ಷಣ ನೀತಿಯಿಂದ ದೇಶದ ಭವಿಷ್ಯವನ್ನು ಬದಲಾಯಿಸಿ ದೇಶವನ್ನು ದೇಶದ ಗತವೈಭವವನ್ನು ಮರು ನಿರ್ಮಾಣ ಮಾಡಲಾಗುವುದು ಎಂದು ರಾಜ್ಯ ಶಿಕ್ಷಣ ಸಚಿವ ಬಿ.ಸಿ.ನಾಗೆಶ್ ಹೇಳಿದರು. ಅವರು ಕಡಬ ಸರಕಾರಿ ಪ್ರೌಢ ಶಾಲೆಯಲ್ಲಿ ಸಚಿವರ ವಿಶೇಷ ಅನುದಾನದಲ್ಲಿ ನಿರ್ಮಾಣಗೊಳ್ಳಲಿರುವ ಐದು ಕೊಠಡಿಗಳಿಗೆ ಶಿಲಾನ್ಯಾಸ ನೆರವೇರಿಸಿ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಸಮಾಜಕ್ಕೋಸ್ಕರ ಬದುಕುಬೇಕು, ಭಗವಂತಕೊಟ್ಟ ಶಕ್ತಿಯನ್ನು ಸಮಾಜಕ್ಕೆ, ಈ ದೇಶಕ್ಕೋಸ್ಕರ ವಿನಿಯೋಗಿಸಬೇಕು, ನಮ್ಮ ಎಲ್ಲಾ ಕಾರ್ಯಗಳ ಸಮಾಜಮುಖಿಯಾಗಿರಬೇಕು ಎನ್ನುವ ಮೇಲ್ಪಂಕ್ತಿಯನ್ನು ನಮ್ಮ ಹಿರಿಯರು ದೇಶಕ್ಕೆ ಹಾಕಿಕೊಟ್ಟಿದ್ದಾರೆ. ನಮ್ಮ ಹಿರಿಯರಿಗೆ ವೈಭವದ ಸ್ಥೀತಿಗೆ ಅಡಚನೆಗಳು ಇರುವ ವ್ಯವಸ್ಥೆಗಳನ್ನು ಬದಲಾಯಿಸಬೇಕು ಎನ್ನುವ ಇಚ್ಛೆಯಿತ್ತು. ಅದು ಸಾಧದ್ಯವಾಗಲಿಲ್ಲ. ಹಾಗಾಗಿ ನಮ್ಮ ಈಗಿನ ಕೇಂದ್ರ ಸರಕಾರ ಶಿಕ್ಷಣದ ಮೂಲಕ ಯುವಜನತೆಯನ್ನು ಈ ದೇಶಕ್ಕಾಗಿ ಬದುಕುವ ನಿಟ್ಟಿನಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಅಮೂಲಾಗ್ರ ಬದಲಾವಣೆ ತರಲು ಉದ್ಧೇಶಿಸಿದೆ, ಅದಕ್ಕೆ ಹೊಸ ಶಿಕ್ಷಣ ನೀತಿ ತರುತ್ತಿದೆ ಎಂದು ಸಚಿವರು ಹೇಳಿದರು.

ಸಮಾರ0ಭದ ಅಧ್ಯಕ್ಷತೆವಹಿಸಿದ್ದ ಬಂದರು ಮೀನುಗಾರಿಕೆ, ಒಳನಾಡು ಜಲಸಾರಿಗೆ ಸಚಿವ ಎಸ್ ಅಂಗಾರ ಮಾತನಾಡಿ ಸುಳ್ಯ ವಿಧಾನ ಸಭಾ ಕ್ಷೇತ್ರದ ಅಭಿವೃದ್ಧಿಯಲ್ಲಿ ಹಾಗೂ ಶಿಕ್ಷಣ ಕ್ಷೇತ್ರದ ಮೂಲಭೂತ ವ್ಯವಸ್ಥೆ ಕಲ್ಪಿಸುವಲ್ಲಿ ಯಾವುದೇ ರಾಜಕೀಯ ಮಾಡಿಲ್ಲ ಎಂದರು. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೆಶಕ ಸುಧಾಕರ ಕೆ, ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ಸುಂದರ ಗೌಡ, ಕಡಬ ಆರಕ್ಷಕ ಠಾಣಾಧಿಕಾರಿ ಆಂಜನೇಯ ರೆಡ್ಡಿ , ಕಡಬ ಸರಕಾರಿ ಪದವಿಪೂರ್ವ ಕಾಲೇಜಿ ಪ್ರಿನ್ಸಿಪಾಲ್ ಜನಾರ್ಧನ ಕೆ.ಎ ಮತ್ತಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಶಾಲಾ ವಿದ್ಯಾರ್ಥಿಗಳ ಶಿಕ್ಷಣ ಸಚಿವರೊಂದಿಗೆ ಸಂವಾದ ನಡೆಸಿದರು. ಈ ಸಂದರ್ಭದಲ್ಲಿ ಶಿಕ್ಷಣ ಸಚಿವರು ಹಾಗೂ ಶಾಲಾ ಕ್ರೀಡಾ ಪ್ರತಿಭೆ ಚರಿಷ್ಮಾ ಅವರನ್ನು ಸನ್ಮಾನಿಸಲಾಯಿತು.. ಶಾಲಾ ಬೇಡಿಕೆಗಳ ಬಗ್ಗೆ,. ಅಕ್ಷರ ದಾಸೋಹ ಸಿಬ್ಬಂದಿಗಳ ಸಮಸ್ಯೆಗಳ ಬಗ್ಗೆ ಸಚಿವರಿಗೆ ಮನವಿ ಸಲ್ಲಿಸಲಾಯಿತು. ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಎಸ್.ಆರ್ ಸ್ವಾಗತಿಸಿದರು. ಶಾಲಾ ವೈಸ್ ಪ್ರಿನ್ಸಿಪಾಲ್ ಡಾ|ವೇದಾವತಿ ಬಿ ವಂದಿಸಿದರು. ಶಿಕ್ಷಕರಾದ ಆನಂದ ಆಪ್ಟೆ ಹಾಗೂ ಲೋಕೇಶ್ ಕಾರ್ಯಕ್ರಮ ನಿರೂಪಿಸಿದರು.

Related Posts

Leave a Reply

Your email address will not be published.