ಗ್ರಾಮ ಪಂಚಾಯಿತಿ ನೌಕರರ ವಿವಿಧ ಬೇಡಿಕೆಗಳ ಬಗ್ಗೆ ಮನವಿ

ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಶ್ರೇಯೋಭಿವೃದ್ಧಿ ಸಂಘ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ವತಿಯಿಂದ ಡಿಸೆಂಬರ್ 19 ರಂದು ಬೆಳಗಾವಿ ವಿಧಾನಸೌಧದ ಎದುರುಗಡೆ ಗ್ರಾಮ ಪಂಚಾಯಿತಿ ನೌಕರರಿಗೆ ಸಿ ಮತ್ತು ಡಿ ದರ್ಜೆ ಸ್ಥಾನಮಾನ ಹಾಗೂ ವಿವಿಧ ಬೇಡಿಕೆಗಳ ಬಗ್ಗೆ ಹೋರಾಟದ ಬಗ್ಗೆ ಬೆಂಬಲ ನೀಡುವಂತೆ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಾನ್ಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯವರಾದ ಶ್ರೀ ಡಾ.ಕುಮಾರ್ IAS ಇವರಿಗೆ ಮನವಿಯನ್ನು ನೀಡಲಾಯಿತು. ಮಾನ್ಯ ಮುಖ್ಯ ಕಾರ್ಯನಿರ್ವಾಧಿಕಾರಿಯವರು ಬೆಂಬಲ ಸೂಚಿಸುವುದರ ಜೊತೆಗೆ ನಿಮ್ಮ ಬೇಡಿಕೆಯನ್ನು ಸರಕಾರಕ್ಕೆ ಕಳುಹಿಸುವುದಾಗಿ ತಿಳಿಸಿದರು. ಈ ಸಂದರ್ಭದಲ್ಲಿ ಸಂಘದ ರಾಜ್ಯಾಧ್ಯಕ್ಷರಾದ ಡಾ.ದೇವಿ ಪ್ರಸಾದ್ ಬೊಲ್ಮ, ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಪ್ರಧಾನ ಕಾರ್ಯದರ್ಶಿ ಶ್ರೀ ಯಶೋಧರ ಬೆದ್ರ, ದಕ್ಷಿಣ ಕನ್ನಡ ಜಿಲ್ಲಾ ಹೋರಾಟ ಸಮಿತಿ ಅಧ್ಯಕ್ಷರಾದ ಶ್ರೀ ದಯಾನಂದ ಪೆರುವಜೆ, ಮೂಲ್ಕಿ ತಾಲೂಕು ಅಧ್ಯಕ್ಷರಾದ ಶ್ರೀ ಉದಯ, ಬಂಟ್ವಾಳ ತಾಲೂಕು ಅಧ್ಯಕ್ಷರಾದ ಶ್ರೀ ಮೋಹನ, ಉಳ್ಳಾಲ ತಾಲೂಕು ಹೋರಾಟ ಸಮಿತಿಯ ಅಧ್ಯಕ್ಷರಾದ ಶ್ರೀ ಪ್ರಸನ್ನ, ಬೆಳ್ತಂಗಡಿ ಹೋರಾಟ ಸಮಿತಿಯ ಶ್ರೀ ಗಣೇಶ್ ಕುಕ್ಕೆಡಿ, ಉಪಸ್ಥಿತರಿದ್ದರು