ಬೆಳ್ಳಾರೆ ಪೊಲೀಸ್ ಠಾಣೆಗೆ ಪೊಲೀಸ್ ಮಹಾ ನಿರೀಕ್ಷಕ ಚಂದ್ರಗುಪ್ತ ಭೇಟಿ
ಸುಳ್ಯ: ಪಶ್ಚಿಮ ವಲಯ ಪೆÇಲೀಸ್ ಮಹಾ ನಿರೀಕ್ಷಕ ಚಂದ್ರಗುಪ್ತ ಅವರು ಬೆಳ್ಳಾರೆ ಪೊಲೀಸ್ ಠಾಣೆಗೆ ಭೇಟಿ ನೀಡಿದರು. ಚುನಾವಣೆ ಹಿನ್ನಲೆಯಲ್ಲಿ ವಿಟ್ಲ, ಪುತ್ತೂರು ಪೊಲೀಸ್ ಠಾಣೆಗೆ ಭೇಟಿ ನೀಡಿದ ಚಂದ್ರಗುಪ್ತ ಅವರು ಬಳಿಕ ಬೆಳ್ಳಾರೆ ಪೊಲೀಸ್ ಠಾಣೆಗೆ ಭೇಟಿ ನೀಡಿದರು. ಈ ವೇಳೆ ಪೊಲೀಸರಿಂದ ಗೌರವ ವಂದನೆ ಸಲ್ಲಿಸಲಾಯಿತು.
ಬಳಿಕ ಠಾಣೆಯಲ್ಲಿ ಸಾರ್ವಜನಿಕ ಸಭೆ ನಡೆಸಿದ ಅವರು ಚುನಾವಣೆ ಬಗ್ಗೆ ಮಾಹಿತಿ ಪಡೆದರು. ಸಾರ್ವಜನಿಕ ಅಹವಾಲು ಸ್ವೀಕರಿಸಿದರು. ದಕ್ಷಿಣ ಕನ್ನಡ ಜಿಲ್ಲಾ ಹೆಚ್ಚುವರಿ ಪೆÇಲೀಸ್ ವರಿಷ್ಠಾಧಿಕಾರಿ ಧರ್ಮಪ್ಪ ಎನ್.ಎಂ., ಪುತ್ತೂರು ಡಿವೈಎಸ್ಪಿ ಡಾ.ವೀರಯ್ಯ ಹಿರೇಮಠ್, ಸುಳ್ಯ ವೃತ್ತ ನಿರಿಕಕ್ಷಕ ರವೀಂದ್ರ, ಬೆಳ್ಳಾರೆ ಪೊಲೀಸ್ ಉಪನಿರೀಕ್ಷಕ ಸುಹಾಸ್, ಪೊಲೀಸ್ ಅಧಿಕಾರಿಗಳು, ಸಿಬ್ಬಂದಿಗಳು, ಸಾರ್ವಜನಿಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.