ಬೆಳ್ತಂಗಡಿ : ವಿದ್ಯುತ್ ಸಂಪರ್ಕಕ್ಕೆ ಅನುಮತಿ ನೀಡುವಂತೆ ಮನವಿ
ಬೆಳ್ತಂಗಡಿ. ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯಲ್ಲಿ ಬರುವ ಬೆಳ್ತಂಗಡಿ ತಾಲೂಕಿನ ಸುಲ್ಕೇರಿಮೊಗ್ರು, ಗ್ರಾಮದ ಬಲ್ಯ ಮಾಳಿಗೆಬೈಲು ಸೇರಿದಂತೆ ಬೆಳ್ತಂಗಡಿ ತಾಲೂಕಿನ ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯಲ್ಲಿ ವಾಸಿಸುವ ಕುಟುಂಬಗಳಿಗೆ ವಿದ್ಯುತ್ ಸಂಪರ್ಕಕ್ಕೆ ಅನುಮತಿ ನೀಡುವಂತೆ ಅರಣ್ಯ ಜೈವಿಕ ಪರಿಸರ ಸಚಿವರಾದ ಈಶ್ವರ್ ಖಂಡ್ರೆ ಅವರಿಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಮನವಿ ಸಲ್ಲಿಸಿದರು.
ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಗೆ ಈ ಬಾಗದ ಕೆಲ ಪ್ರದೇಶಗಳು ಸೇರಿರುವುದರಿಂದ ಅರಣ್ಯ ಇಲಾಖೆ ಸೇರಿದಂತೆ ಕೆಲವೊಂದು ಪ್ರಮುಖ ಇಲಾಖೆಗಳಿಂದ ಅನುಮತಿ ಸಿಗದೇ ಇರುವುದು.ಈ ಭಾಗದ ವಿದ್ಯುತ್ ಸಂಪರ್ಕಕ್ಕೆ ಅಡ್ಡಿಯಾಗಿದೆ.ಎಂದು ಸಚಿವರಿಗೆ ಮನವಿ ಮಾಡಿದರು.ಈ ಸಂದರ್ಭದಲ್ಲಿ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಶೇಖರ್ ಕುಕ್ಕೆಡಿ, ಕಾಂಗ್ರೆಸ್ ಎಸ್ ಸಿ ಘಟಕದ ಜಿಲ್ಲಾ ಸಮಿತಿಯ ಸದಸ್ಯರಾದ ಗಣೇಶ್ ಪ್ರಸಾದ್ ಉಪಸ್ಥಿತರಿದ್ದರು.