ಬೆಳ್ತಂಗಡಿ || ರಾಜ್ಯ ಸರ್ಕಾರದ ಜನಪರ ಯೋಜನೆ ಜನಸಾಮಾನ್ಯರಿಗೆ ತಲುಪಬೇಕು : ಸಚಿವ ಶರಣಬಸಪ್ಪ ದರ್ಶನಾಪೂರ
ಸರ್ಕಾರದ ಜನಪರ ಕಾರ್ಯಕ್ರಮಗಳನ್ನು ಜನಸಾಮಾನ್ಯರಿಗೆ ಮುಟ್ಟಿಸಬೇಕು. ಕಾಂಗ್ರೆಸ್ ಪಕ್ಷ ಪ್ರಣಾಳಿಕೆ ಯಲ್ಲಿ ಘೋಷಣೆ ಮಾಡಿರುವ ಎಲ್ಲಾ ಗ್ಯಾರಂಟಿ ಯೋಜನೆಗಳನ್ನು ಸರ್ಕಾರ ಜಾರಿ ಮಾಡುತ್ತಿದೆ ಎಂದು ಸಣ್ಣ ಕೈಗಾರಿಕಾ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವರಾದ ಶರಣಬಸಪ್ಪ ದರ್ಶನಾಪೂರ ಹೇಳಿದರು.
ಅವರು ಬೆಳ್ತಂಗಡಿಯಲ್ಲಿ ಬ್ಲಾಕ್ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿದ ಸಂದರ್ಭ ಕಾರ್ಯಕರ್ತರನ್ನು ಉದ್ದೇಶಸಿ ಮಾತನಾಡಿದರು. ಬಳಿಕ ಸಚಿವರು ಕಾರ್ಯಕರ್ತರ ಅಹವಾಲು ಸ್ವೀಕರಿಸಿದರು.
ಈ ಸಂದರ್ಭದಲ್ಲಿ ದ.ಕ ಜಿಲ್ಲಾ ಎಸ್.ಸಿ. ಘಟಕದ ಅಧ್ಯಕ್ಷರಾದ ಶೇಖರ್ ಕುಕ್ಕೇಡಿ, ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರವೀಣ್ ಹಳ್ಳಿಮನೆ, ಕಾಂಗ್ರೆಸ್ ನಗರ ಸಮಿತಿಯ ಅಧ್ಯಕ್ಷರಾದ ಜಗದೀಶ್ ಡಿ ಮತ್ತಿತರರು ಉಪಸ್ಥಿತರಿದ್ದರು.