ನೆಲ್ಯಾಡಿ: ಶಿರಾಡಿ ಘಾಟ್‍ನಲ್ಲಿ ಅಕ್ಕಿ ಸಾಗಾಟದ ಲಾರಿ ಬೆಂಕಿಗಾಹುತಿ
ನೆಲ್ಯಾಡಿ: ಶಿರಾಡಿ ಘಾಟ್‍ನ ಡಬಲ್ ಟರ್ನ್‍ನಲ್ಲಿ ಹಾಸನ ಕಡೆಯಿಂದ ಮಂಗಳೂರಿಗೆ ಬರುತ್ತಿದ್ದ ಅಕ್ಕಿ ಸಾಗಾಟದ ಲಾರಿಯೊಂದು ಬೆಂಕಿಗಾಹುತಿ ಆಗಿರುವ ಘಟನೆ ನಡೆದಿದೆ.
ಶಿರಾಡಿ ಘಾಟ್‍ನ ಡಬಲ್ ಟರ್ನ್‍ನಲ್ಲಿ ಹಾಸನ ಕಡೆಯಿಂದ ಮಂಗಳೂರಿಗೆ ಅಕ್ಕಿ ಸಾಗಾಟ ಮಾಡುತ್ತಿದ್ದ ಲಾರಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಲಾರಿ ಚಾಲಕ ಹಾಗೂ ಕ್ಲೀನರ್‍ಗೆ ಅಪಾಯದ ಮುನ್ಸೂಚನೆ ಸಿಗುತ್ತಿದ್ದಂತೆ ಲಾರಿಯನ್ನು ನಿಲ್ಲಿಸಿ ಕೆಳಗಿಳಿದು, ಅಪಾಯದಿಂದ ಪಾರಾಗಿದ್ದಾರೆ.
ಲಾರಿ ಹಾಗೂ ಅದರಲ್ಲಿದ್ದ ಅಕ್ಕಿ ಸಂಪೂರ್ಣ ಸುಟ್ಟು ಭಸ್ಮವಾಗಿದೆ. ಹಾಸನದಿಂದ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಘಟನೆಯಿಂದಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲ ಹೊತ್ತು ವಾಹನ ಸಂಚಾರಕ್ಕೂ ಅಡಚಣೆ ಉಂಟಾಗಿತ್ತು.